Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:7 - ಪರಿಶುದ್ದ ಬೈಬಲ್‌

7 ಯೆಹೋವನ ಉಪದೇಶಗಳು ನಿಷ್ಕಳಂಕವಾಗಿವೆ. ಅವು ದೇವಜನರಿಗೆ ಬಲವನ್ನು ಕೊಡುತ್ತವೆ. ಯೆಹೋವನ ಕಟ್ಟಳೆಯು ಭರವಸೆಗೆ ಯೋಗ್ಯವಾಗಿದೆ. ಅದು ಮೂಢರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ I ನಂಬಲರ್ಹ; ಪ್ರಭುವಿನ ಶಾಸನ ಮುಗ್ದರಿಗದು ಸುಜ್ಞಾನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆ ನಂಬಿಕೆಗೆ ಯೋಗ್ಯವಾದದ್ದು; ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರ ನಿಯಮವು ಸಂಪೂರ್ಣವಾಗಿದ್ದು, ಪ್ರಾಣಕ್ಕೆ ಜೀವಕರವಾಗಿದೆ; ಯೆಹೋವ ದೇವರ ಶಾಸನಗಳು ವಿಶ್ವಾಸಪಾತ್ರವಾಗಿದ್ದು, ಮುಗ್ಧನನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:7
41 ತಿಳಿವುಗಳ ಹೋಲಿಕೆ  

ಜನರು ನಿನ್ನ ವಾಕ್ಯವನ್ನು ಅರ್ಥಮಾಡಿಕೊಂಡಾಗ ಅದು ಅವರಿಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿರುವುದು. ನಿನ್ನ ವಾಕ್ಯವು ಸಾಮಾನ್ಯರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.


ಆತನ ಪ್ರತಿಯೊಂದು ಕಾರ್ಯವು ಒಳ್ಳೆಯದೂ ನ್ಯಾಯವಾದದ್ದೂ ಆಗಿದೆ. ಆತನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ.


ಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ.


ಈ ಜ್ಞಾನೋಕ್ತಿಗಳು ಸಾಮಾನ್ಯರಿಗೆ ಜಾಣತನವನ್ನು ಯೌವನಸ್ಥರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುತ್ತವೆ.


ಆತನು ತನ್ನ ಹೆಸರಿಗೆ ತಕ್ಕಂತೆ ನನ್ನ ಪ್ರಾಣಕ್ಕೆ ಚೈತನ್ಯ ನೀಡಿ ನೀತಿಮಾರ್ಗದಲ್ಲಿ ನನ್ನನ್ನು ನಡೆಸುವನು.


ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ ದಾರಿಗೆ ಬೆಳಕೂ ಆಗಿದೆ.


“ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ.


ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.


ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ. ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ.


ನಮ್ಮ ಪ್ರಭುವಾದ ಯೇಸುವನ್ನು ಕುರಿತು ಜನರಿಗೆ ತಿಳಿಸುವುದಕ್ಕಾಗಲಿ ಪ್ರಭುವಿಗಾಗಿ ಸೆರೆಯಲ್ಲಿರುವ ನನ್ನ ವಿಷಯದಲ್ಲಾಗಲಿ ನಾಚಿಕೆಪಟ್ಟುಕೊಳ್ಳಬೇಡ. ಅದಕ್ಕೆ ಬದಲಾಗಿ ಸುವಾರ್ತೆಗೋಸ್ಕರ ನನ್ನೊಡನೆ ಸಂಕಟವನ್ನು ಅನುಭವಿಸು. ಅದಕ್ಕೆ ಬೇಕಾದ ಶಕ್ತಿಯನ್ನು ದೇವರೇ ನಮಗೆ ದಯಪಾಲಿಸುತ್ತಾನೆ.


ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.


ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.


ಹಿಂದಿನ ಕಾಲದಲ್ಲಿ ಬರೆಯಲ್ಪಟ್ಟಿರುವ ಪ್ರತಿಯೊಂದೂ ನಮ್ಮ ಉಪದೇಶಕ್ಕಾಗಿಯೇ ಬರೆಯಲ್ಪಟ್ಟಿದೆ. ನಾವು ನಿರೀಕ್ಷೆ ಉಳ್ಳವರಾಗಿರಬೇಕೆಂದು ಆ ಸಂಗತಿಗಳು ಬರೆಯಲ್ಪಟ್ಟಿವೆ. ಪವಿತ್ರ ಗ್ರಂಥವು ನಮಗೆ ಕೊಡುವ ತಾಳ್ಮೆಯಿಂದಲೂ ಶಕ್ತಿಯಿಂದಲೂ ಈ ನಿರೀಕ್ಷೆ ಬರುತ್ತದೆ.


ನಿನ್ನ ಕಟ್ಟಳೆಗಳನ್ನು ಎಂದೆಂದಿಗೂ ನಿತ್ಯಸ್ವಾಸ್ತ್ಯವನ್ನಾಗಿ ಆರಿಸಿಕೊಂಡಿದ್ದೇನೆ. ಅವು ನನ್ನ ಹೃದಯಕ್ಕೆ ಆನಂದಕರವಾಗಿವೆ.


ಆ ಧರ್ಮಶಾಸ್ತ್ರದಲ್ಲಿ ಬರೆದ ವಿಷಯಗಳನ್ನು ಸದಾ ನೆನಪಿಡು. ಹಗಲೂ ರಾತ್ರಿ ಆ ಧರ್ಮಶಾಸ್ತ್ರವನ್ನು ಧ್ಯಾನಿಸು. ಆಗ ಅದರಲ್ಲಿ ಬರೆದ ವಿಷಯಗಳಿಗೆ ನೀನು ನಿಶ್ಚಿತವಾಗಿ ವಿಧೇಯನಾಗಿರುವೆ. ನೀನು ಹೀಗೆ ಮಾಡಿದರೆ ನೀನು ಮಾಡುವ ಪ್ರತಿಯೊಂದು ಕಾರ್ಯದಲ್ಲಿ ನೀನು ವಿವೇಕಶಾಲಿಯಾಗುವೆ ಮತ್ತು ಜಯಶಾಲಿಯಾಗುವೆ.


ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನ ಪಾಪಗಳನ್ನು ದೇವರು ಯೇಸುವಿನ ಮೂಲಕ ಕ್ಷಮಿಸುವನು. ಇದು ಸತ್ಯವೆಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.


ನಿನ್ನ ಉಪದೇಶಗಳು ನನಗೆ ಒಳ್ಳೆಯದಾಗಿವೆ. ಅವು ಹತ್ತುಸಾವಿರ ಬೆಳ್ಳಿಬಂಗಾರಗಳ ನಾಣ್ಯಗಳಿಗಿಂತಲೂ ಅಮೂಲ್ಯವಾಗಿವೆ.


ದೇವರ ಮಾರ್ಗಗಳು ನಿಷ್ಕಳಂಕವಾಗಿವೆ; ಯೆಹೋವನ ಮಾತುಗಳು ಸತ್ಯವಾಗಿವೆ. ಆತನು ತನ್ನಲ್ಲಿ ಭರವಸೆಯಿಟ್ಟಿರುವವರನ್ನು ಸಂರಕ್ಷಿಸುವನು.


ಆತನ ಆಜ್ಞೆಗಳನ್ನು ನಾನು ಮೀರಲೇ ಇಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಮೃಷ್ಟಾನ್ನಕ್ಕಿಂತಲೂ ಹೆಚ್ಚಾಗಿ ಪ್ರೀತಿಸಿದ್ದೇನೆ.


ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ನಿನ್ನ ಒಡಂಬಡಿಕೆಯು ನನಗೆ ಉತ್ತಮ ಸ್ನೇಹಿತನಂತಿದೆ. ಅದು ನನಗೆ ಬುದ್ಧಿಮಾತನ್ನು ಹೇಳಿಕೊಡುವುದು.


ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ನಿನ್ನ ಒಡಂಬಡಿಕೆಯನ್ನು ಅಭ್ಯಾಸ ಮಾಡುವುದರಲ್ಲಿ ಆನಂದಿಸುವೆನು.


ನೀವು ಪವಿತ್ರ ಗ್ರಂಥವನ್ನು ಜಾಗ್ರತೆಯಿಂದ ಅಧ್ಯಯನ ಮಾಡುತ್ತೀರಿ. ಆ ಪವಿತ್ರ ಗ್ರಂಥವು ನಿಮಗೆ ನಿತ್ಯಜೀವವನ್ನು ಕೊಡುತ್ತದೆ ಎಂಬುದು ನಿಮ್ಮ ಆಲೋಚನೆ. ಅದೇ ಪವಿತ್ರ ಗ್ರಂಥವು ನನ್ನ ಬಗ್ಗೆ ತಿಳಿಸುತ್ತದೆ!


ಯೆಹೋವನು, “ಒಡಂಬಡಿಕೆ ಮಾಡಿಕೊಂಡು ಅದಕ್ಕೆ ಮುದ್ರೆಹಾಕು. ಮುಂದಿನ ಪೀಳಿಗೆಗಾಗಿ ನನ್ನ ಬೋಧನೆಯನ್ನು ಜೋಪಾನವಾಗಿರಿಸು. ನನ್ನ ಹಿಂಬಾಲಕರ ಕಣ್ಣೆದುರಿನಲ್ಲೇ ಹೀಗೆ ಮಾಡು” ಎಂದು ಹೇಳಿದನು.


ನಿನ್ನ ಉಪದೇಶಗಳು ಶಾಶ್ವತವಾಗಿವೆ. ಅದನ್ನು ನಾನು ಬಹುಕಾಲದ ಹಿಂದೆಯೇ ನಿನ್ನ ಒಡಂಬಡಿಕೆಯ ಮೂಲಕ ಕಲಿತುಕೊಂಡೆ.


ಯೌವನಸ್ಥನು ಪವಿತ್ರನಾಗಿ ಜೀವಿಸುವುದು ಯಾವುದರಿಂದ? ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದರಿಂದಲೇ.


“ಯೆಹೋವನು ನನ್ನ ಕುಟುಂಬವನ್ನು ಸ್ಥಿರಗೊಳಿಸಿದನು. ಆತನು ನನ್ನೊಡನೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಈ ಒಡಂಬಡಿಕೆಯನ್ನು ಸಂಪೂರ್ಣವಾಗಿ ಸುಭದ್ರಗೊಳಿಸಿದನು. ಆತನು ನನಗೆ ಎಲ್ಲೆಲ್ಲಿಯೂ ಜಯ ಕೊಡುವನು. ಆತನು ನನಗೆ ಬೇಕಾದದ್ದನ್ನೆಲ್ಲಾ ಕೊಡುವನು.


ಆಗ ನಾನು ದೇವದೂತನನ್ನು ಆರಾಧಿಸಲು ಅವನ ಪಾದದ ಮುಂದೆ ಅಡ್ಡಬಿದ್ದೆನು. ಆದರೆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ಯೇಸುವಿನ ಸತ್ಯವನ್ನು ಹೊಂದಿರುವ ನಿನ್ನಂತೆಯೂ ನಿನ್ನ ಸಹೋದರರಂತೆಯೂ ನಾನು ಒಬ್ಬ ಸೇವಕನಾಗಿದ್ದೇನೆ. ಆದ್ದರಿಂದ ದೇವರನ್ನು ಆರಾಧಿಸು! ಏಕೆಂದರೆ ಯೇಸುವಿನ ಸತ್ಯವೇ ಪ್ರವಾದನೆಯ ಸಾಕ್ಷಿಯಾಗಿದೆ” ಎಂದು ಹೇಳಿದನು.


ಹೌದು, ಯೆಹೂದ್ಯರಿಗೆ ಅನೇಕ ವಿಶೇಷತೆಗಳಿವೆ. ಎಲ್ಲಕ್ಕಿಂತಲೂ ಅತಿಮುಖ್ಯವಾದದ್ದೇನೆಂದರೆ, ದೇವರು ಯೆಹೂದ್ಯರಲ್ಲಿ ಭರವಸವಿಟ್ಟು ತನ್ನ ಉಪದೇಶಗಳನ್ನು ಅವರಿಗೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು