Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:8 - ಪರಿಶುದ್ದ ಬೈಬಲ್‌

8 ಯೆಹೋವನ ನಿಯಮಗಳು ನೀತಿಯ ಕಟ್ಟಳೆಗಳಾಗಿವೆ. ಅವು ಮನುಸ್ಸನ್ನು ಸಂತೋಷಗೂಳಿಸುತ್ತವೆ. ಯೆಹೋವನ ಆಜ್ಞೆಗಳು ಒಳ್ಳೆಯ ಆಜ್ಞೆಗಳಾಗಿವೆ. ಅವು ಕಣ್ಣುಗಳಿಗೆ ಬೆಳಕನ್ನು ನೀಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಒಸಗೆ I ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನ ನಿಯಮಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರ ಸೂತ್ರಗಳು ನೀತಿಯುಳ್ಳವುಗಳಾಗಿದ್ದು ಅವು ಹೃದಯಕ್ಕೆ ಆನಂದಕರವಾಗಿವೆ; ಯೆಹೋವ ದೇವರ ಆಜ್ಞೆಗಳು ಸ್ಪಷ್ಟವಾಗಿದ್ದು, ಕಣ್ಣುಗಳಿಗೆ ಪ್ರಕಾಶಕರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:8
44 ತಿಳಿವುಗಳ ಹೋಲಿಕೆ  

ಯೆಹೋವನ ಮಾತುಗಳು ಬೆಂಕಿಯಲ್ಲಿ ಏಳು ಸಲ ಶುದ್ಧೀಕರಿಸಿದ ಬೆಳ್ಳಿಯಂತೆ ಸತ್ಯವಾಗಿವೆ.


ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ ದಾರಿಗೆ ಬೆಳಕೂ ಆಗಿದೆ.


ನಿನ್ನ ಸಂದೇಶ ನನಗೆ ಬಂದಿತು. ನಾನು ನಿನ್ನ ಮಾತುಗಳನ್ನು ಆಹಾರವನ್ನಾಗಿ ಮಾಡಿಕೊಂಡೆ. ನಿನ್ನ ಸಂದೇಶದಿಂದ ನನಗೆ ತುಂಬಾ ಸಂತೋಷವಾಯಿತು. ನಿನ್ನನ್ನು ಹೆಸರಿಡಿದು ಕರೆಯುವುದರಿಂದ ನನಗೆ ಹೆಚ್ಚಿನ ಸಂತೋಷವಾಗಿತ್ತು. ನಿನ್ನ ಹೆಸರು ಸರ್ವಶಕ್ತನಾದ ಯೆಹೋವನು.


ದೇವರು ಹೇಳುವ ಪ್ರತಿಯೊಂದು ಮಾತೂ ನಂಬಿಕೆಗೆ ಯೋಗ್ಯವಾಗಿದೆ. ತನ್ನ ಬಳಿಗೆ ಬರುವ ಜನರಿಗೆ ದೇವರು ಆಶ್ರಯದುರ್ಗವಾಗಿದ್ದಾನೆ.


ನಾನು ನಿನ್ನ ಆಜ್ಞೆಗಳಿಗೆಲ್ಲಾ ಎಚ್ಚರಿಕೆಯಿಂದ ವಿಧೇಯನಾಗುವೆನು. ನಾನು ಸುಳ್ಳು ಉಪದೇಶಗಳನ್ನು ದ್ವೇಷಿಸುವೆನು.


ಜ್ಞಾನವನ್ನು ಕೊಡುವಾತನು ಯೆಹೋವನೇ. ವಿವೇಕ ಮತ್ತು ತಿಳುವಳಿಕೆ ಆತನ ಬಾಯಿಂದ ಬರುತ್ತವೆ.


ನಿನ್ನ ಉಪದೇಶಗಳು ನನಗೆ ಆನಂದಕರವಾಗಿವೆ; ಇಲ್ಲವಾಗಿದ್ದರೆ ಸಂಕಟವು ನನ್ನನ್ನು ನಾಶಮಾಡಿಬಿಡುತ್ತಿತ್ತು.


ನಾನು ನಿನ್ನ ಕಟ್ಟಳೆಗಳಿಗೆ ಪೂರ್ಣವಾಗಿ ವಿಧೇಯನಾಗಿರುವಂತೆ ಮಾಡು. ಆಗ ನನಗೆ ಅವಮಾನವಾಗುವುದಿಲ್ಲ.


ನಿನ್ನ ತಂದೆತಾಯಿಗಳ ಆಜ್ಞೆಗಳು ಮತ್ತು ಉಪದೇಶಗಳು ನಿನಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿವೆ. ಅವು ನಿನ್ನನ್ನು ಸರಿಪಡಿಸಿ ಜೀವಮಾರ್ಗದಲ್ಲಿ ನಡೆಯಲು ಸಹಾಯಮಾಡುತ್ತವೆ.


ನನ್ನ ಅಂತರಂಗದಲ್ಲಿ ದೇವರ ನಿಯಮದ ವಿಷಯದಲ್ಲಿ ನಾನು ಸಂತೋಷಪಡುತ್ತೇನೆ.


ನಾನು ಧರ್ಮಶಾಸ್ತ್ರಕ್ಕಾಗಿ ಜೀವಿಸುವುದನ್ನು ತೊರೆದುಬಿಟ್ಟೆನು. ನನ್ನನ್ನು ಧರ್ಮಶಾಸ್ತ್ರವೇ ಕೊಂದಿತು. ಈಗ ನಾನು ದೇವರಿಗಾಗಿ ಜೀವಿಸಬೇಕೆಂದು ಧರ್ಮಶಾಸ್ತ್ರದ ಪಾಲಿಗೆ ಸತ್ತುಹೋದೆನು. ನಾನು ಕ್ರಿಸ್ತನೊಂದಿಗೆ ಶಿಲುಬೆಗೇರಿಸಲ್ಪಟ್ಟೆನು.


ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಯಾರಿಗೂ ಸಾಧ್ಯವಿಲ್ಲ. ಧರ್ಮಶಾಸ್ತ್ರವು ನಮ್ಮ ಪಾಪವನ್ನು ಮಾತ್ರ ತೋರ್ಪಡಿಸುತ್ತದೆ.


ಪಾಪ ಮತ್ತು ಧರ್ಮಶಾಸ್ತ್ರ ಇವೆರಡೂ ಒಂದೇ ಎಂದು ನಾನು ಹೇಳುತ್ತಿರುವುದಾಗಿ ನೀವು ಭಾವಿಸಬಹುದು. ಆದರೆ ಅದು ನಿಜವಲ್ಲ. ಪಾಪವೆಂದರೆ ಏನೆಂಬುದನ್ನು ಕಲಿತುಕೊಳ್ಳಲು ಧರ್ಮಶಾಸ್ತ್ರವೊಂದೇ ನನಗೆ ಏಕೈಕ ಮಾರ್ಗವಾಗಿದೆ. ಧರ್ಮಶಾಸ್ತ್ರವಿಲ್ಲದಿದ್ದರೆ, ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ. “ಬೇರೆಯವರ ವಸ್ತುಗಳನ್ನು ನೀವು ಆಶಿಸಕೂಡದು” ಎಂದು ಧರ್ಮಶಾಸ್ತ್ರವು ಹೇಳಿದ್ದರಿಂದಲೇ ಅದು ನನಗೆ ತಿಳಿಯಿತು.


ನಾನು ನಿನ್ನ ಕಟ್ಟಳೆಗಳಲ್ಲಿ ಆನಂದಿಸುವೆನು, ನಿನ್ನ ಮಾತುಗಳನ್ನು ಮರೆಯುವುದಿಲ್ಲ.


ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ನಿನ್ನ ಒಡಂಬಡಿಕೆಯನ್ನು ಅಭ್ಯಾಸ ಮಾಡುವುದರಲ್ಲಿ ಆನಂದಿಸುವೆನು.


ನಾನು ನನ್ನ ಆತ್ಮವನ್ನು ನಿಮ್ಮಲ್ಲಿರಿಸುವೆನು. ನೀವು ನನ್ನ ನಿಯಮಗಳಿಗೆ ವಿಧೇಯರಾಗುವಷ್ಟು ನಿಮ್ಮ ಮನಸ್ಸನ್ನು ಬದಲಾಯಿಸುವೆನು. ಆಗ ನೀವು ನನ್ನ ಆಜ್ಞೆಗಳನ್ನು ಜಾಗ್ರತೆಯಿಂದ ಪಾಲಿಸುವಿರಿ.


ನೀನು ನಿನ್ನ ಕಟ್ಟಳೆಗಳನ್ನು ನನಗೆ ಕಲಿಸಿಕೊಟ್ಟದ್ದರಿಂದ ಸ್ತುತಿಗೀತೆಗಳು ನನ್ನಿಂದ ಹೊರಡುತ್ತವೆ.


ಕಷ್ಟಸಂಕಟಗಳು ನನಗೆ ಬಂದಿದ್ದವು. ನಿನ್ನ ಆಜ್ಞೆಗಳು ನನಗೆ ಆನಂದಕರವಾಗಿವೆ.


ಜನರು ನಿನ್ನ ವಾಕ್ಯವನ್ನು ಅರ್ಥಮಾಡಿಕೊಂಡಾಗ ಅದು ಅವರಿಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿರುವುದು. ನಿನ್ನ ವಾಕ್ಯವು ಸಾಮಾನ್ಯರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.


ನ್ಯಾಯನೀತಿಗಳುಳ್ಳ ಕಾರ್ಯಗಳನ್ನೇ ನಾನು ಮಾಡಿರುವೆ, ಕೆಡುಕರಿಗೆ ನನ್ನನ್ನು ಒಪ್ಪಿಸಿಕೊಡಬೇಡ.


ಇಗೋ, ನಿನ್ನ ಆಜ್ಞೆಗಳನ್ನು ಪ್ರೀತಿಸುವೆನು. ನನಗೆ ಒಳ್ಳೆಯವನಾಗಿದ್ದು ನನ್ನನ್ನು ಉಜ್ಜೀವನಗೊಳಿಸು.


ಯೆಹೋವನೇ, ನಿನಗೆ ಸ್ತೋತ್ರವಾಗಲಿ. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.


ತನ್ನ ಜನರು ತನ್ನ ಕಟ್ಟಳೆಗಳಿಗೆ ವಿಧೇಯರಾಗಲೆಂದೂ ತನ್ನ ಉಪದೇಶಗಳನ್ನು ಎಚ್ಚರಿಕೆಯಿಂದ ಪಾಲಿಸಲೆಂದೂ ಆತನು ಹೀಗೆ ಮಾಡಿದನು. ಯೆಹೋವನನ್ನು ಕೊಂಡಾಡಿರಿ.


ನನ್ನ ದೇವರೇ, ನಿನ್ನ ಚಿತ್ತಾನುಸಾರವಾಗಿ ಮಾಡುತ್ತೇನೆ. ನಿನ್ನ ಉಪದೇಶಗಳನ್ನು ಹೃದಯದಲ್ಲಿಟ್ಟುಕೊಂಡಿದ್ದೇನೆ” ಅಂದೆನು.


ನನ್ನ ದೇವರಾದ ಯೆಹೋವನೇ, ನನ್ನ ಮೇಲೆ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು. ಇಲ್ಲವಾದರೆ, ನಾನು ಸಾಯಲೇಬೇಕಾಗುವುದು!


ಅವರೊಳಗೆ ವ್ಯಾಜ್ಯವಿದ್ದರೆ ಅವರು ನನ್ನ ಬಳಿಗೆ ಬರುತ್ತಾರೆ. ಯಾವನು ನ್ಯಾಯವಂತನೆಂದು ನಾನು ತೀರ್ಮಾನಿಸುತ್ತೇನೆ. ಈ ರೀತಿಯಾಗಿ ನಾನು ದೇವರ ಕಟ್ಟಳೆಗಳನ್ನು ಮತ್ತು ಬೋಧನೆಗಳನ್ನು ಜನರಿಗೆ ಬೋಧಿಸುತ್ತೇನೆ” ಅಂದನು.


ನಾನೇ ಇದನ್ನು ನೆರವೇರಿಸುವೆನು; ಯಾಕೆಂದರೆ ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತುಗಳಿಗೆ ವಿಧೇಯನಾಗಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞೆಗಳನ್ನು, ಕಟ್ಟಳೆಗಳನ್ನು, ನಿಯಮಗಳನ್ನು ಕೈಕೊಂಡು ನಡೆದನು” ಎಂದು ಹೇಳಿದನು.


ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರೋಧವಾಗಿದೆ ಎಂಬುದು ಇದರರ್ಥವೇ? ಇಲ್ಲ! ಜೀವವನ್ನು ಕೊಡುವಂಥ ಧರ್ಮಶಾಸ್ತ್ರವಿದ್ದಿದ್ದರೆ ಅದನ್ನು ಅನುಸರಿಸುವುದರ ಮೂಲಕ ನೀತಿವಂತರಾಗಬಹುದಾಗಿತ್ತು.


ಒಳ್ಳೆಯದನ್ನು ಮಾಡುವದರಲ್ಲಿ ಸಂತೋಷಪಡುವವರೊಂದಿಗೆ ನೀನಿರುವೆ. ಅವರು ನಿನ್ನ ಮಾರ್ಗಗಳನ್ನು ನೆನಪಿನಲ್ಲಿಡುತ್ತಾರೆ. ಇಗೋ, ಗತಿಸಿದ ದಿವಸಗಳಲ್ಲಿ ನಾವು ನಿನಗೆ ವಿರುದ್ಧವಾಗಿ ಪಾಪಮಾಡಿದೆವು. ಆದ್ದರಿಂದ ನೀನು ನಮ್ಮ ಮೇಲೆ ಕೋಪಗೊಂಡೆ. ಈಗ ನಾವು ಹೇಗೆ ರಕ್ಷಿಸಲ್ಪಡುವೆವು?


ನನಗಂತೂ, ನಿನ್ನ ಕಟ್ಟಳೆಗಳು ನನ್ನ ಮನೆಯಲ್ಲಿ ಹಾಡುಗಳಾಗಿವೆ.


ನಿನ್ನ ಒಡಂಬಡಿಕೆಯು ನನಗೆ ಉತ್ತಮ ಸ್ನೇಹಿತನಂತಿದೆ. ಅದು ನನಗೆ ಬುದ್ಧಿಮಾತನ್ನು ಹೇಳಿಕೊಡುವುದು.


ಆಮೇಲೆ ಸೀನಾಯ ಬೆಟ್ಟಕ್ಕೆ ಇಳಿದುಬಂದೆ. ಪರಲೋಕದಿಂದ ಅವರೊಂದಿಗೆ ಮಾತನಾಡಿದೆ. ಅವರಿಗೆ ಒಳ್ಳೆಯ ಕಟ್ಟಳೆಗಳನ್ನು ದಯಪಾಲಿಸಿದೆ; ಸತ್ಯಬೋಧನೆಯನ್ನು ನೀಡಿದೆ, ವಿಧಿನಿಯಮಗಳನ್ನು ಕಲಿಸಿದೆ. ಅವುಗಳೆಲ್ಲಾ ಉತ್ತಮವಾದವುಗಳೇ.


ಅನಂತರ ಎಲ್ಲರೂ ವಿಶೇಷ ಊಟಕ್ಕೆ ಹೋದರು, ಅವರು ತಮ್ಮ ಆಹಾರವನ್ನು ಮತ್ತು ಪಾನೀಯವನ್ನು ಹಂಚಿಕೊಂಡರು. ಅವರೆಲ್ಲರೂ ಸಂತೋಷದಿಂದ ಆ ವಿಶೇಷ ದಿನವನ್ನು ಆಚರಿಸಿದರು, ಧರ್ಮೋಪದೇಶಕರು ಉಪದೇಶಿಸಿದ ಯೆಹೋವನ ಕಟ್ಟಳೆಗಳನ್ನು ಅವರು ಅರ್ಥಮಾಡಿಕೊಂಡರು.


ನಿಮ್ಮ ಹೆಂಡತಿಮಕ್ಕಳೊಂದಿಗೆ, ಸೇವಕಸೇವಕಿಯರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿರುವ ಲೇವಿಯರೊಂದಿಗೆ, ಪರದೇಶಿಗಳೊಂದಿಗೆ, ಅನಾಥರೊಂದಿಗೆ ಮತ್ತು ವಿಧವೆಯರೊಂದಿಗೆ ಆನಂದದಿಂದ ಹಬ್ಬ ಮಾಡಿರಿ.


ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.


ಆತನು ನಿಮಗೆ ಬರೆಯಿಸಿಕೊಟ್ಟ ನಿಯಮಗಳಿಗೆ, ಶಾಸ್ತ್ರಗಳಿಗೆ, ಉಪದೇಶಗಳಿಗೆ ಮತ್ತು ಆಜ್ಞೆಗಳಿಗೆ ನೀವು ವಿಧೇಯರಾಗಿರಬೇಕು. ನೀವು ಎಲ್ಲಾ ಕಾಲದಲ್ಲೂ ಇವುಗಳಿಗೆ ವಿಧೇಯತೆಯಿಂದಿರಬೇಕು. ನೀವು ಅನ್ಯದೇವತೆಗಳನ್ನು ಪೂಜಿಸಲೇಬಾರದು.


ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ. ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ.


ಆತನ ಪ್ರತಿಯೊಂದು ಕಾರ್ಯವು ಒಳ್ಳೆಯದೂ ನ್ಯಾಯವಾದದ್ದೂ ಆಗಿದೆ. ಆತನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು