Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:9 - ಪರಿಶುದ್ದ ಬೈಬಲ್‌

9 ಯೆಹೋವನಲ್ಲಿಡುವ ಭಯಭಕ್ತಿಯು ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದು. ಯೆಹೋವನ ವಿಧಿಗಳು ಯಥಾರ್ಥವಾಗಿವೆ; ಅವು ಯಾವಾಗಲೂ ನ್ಯಾಯಾನುಸಾರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪ್ರಭುವಿನ ಭೀತಿ ಪವಿತ್ರ; ಅದೆಂದಿಗೂ ಶಾಶ್ವತ I ಪ್ರಭುವಿನ ತೀರ್ಪು ಯಥಾರ್ಥ; ಪರಿಪೂರ್ಣ ನ್ಯಾಯಯುತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ವಿಧಿಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರ ಭಯವು ಶುದ್ಧವಾಗಿದ್ದು, ಎಂದೆಂದಿಗೂ ಶಾಶ್ವತವಾಗಿದೆ. ಯೆಹೋವ ದೇವರ ತೀರ್ಪುಗಳು ಸತ್ಯವಾಗಿದ್ದು, ಅವೆಲ್ಲವೂ ನೀತಿಯುಳ್ಳದ್ದಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:9
36 ತಿಳಿವುಗಳ ಹೋಲಿಕೆ  

ಆದರೆ ನೀವು ಯೆಹೋವನನ್ನು ಗೌರವಿಸಬೇಕು. ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವನ ಸೇವೆಯನ್ನು ನಿಜವಾಗಿಯೂ ಮಾಡಬೇಕು. ಆತನು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಳ್ಳಿರಿ.


ನಿನ್ನ ನೀತಿಯು ಶಾಶ್ವತವಾದದ್ದು. ನಿನ್ನ ಉಪದೇಶಗಳು ನಂಬಿಕೆಗೆ ಯೋಗ್ಯವಾಗಿವೆ.


ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸುತ್ತಾ ಪವಿತ್ರರಾಗಿ ಜೀವಿಸುವವರು ಧನ್ಯರಾಗಿದ್ದಾರೆ.


ಅವರು ದೇವರ ಸೇವಕನಾದ ಮೋಶೆಯ ಗೀತೆಯನ್ನು ಮತ್ತು ಕುರಿಮರಿಯಾದಾತನ ಗೀತೆಯನ್ನು ಹಾಡಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ನೀನು ಮಹತ್ತಾದ ಕಾರ್ಯಗಳನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ಮಾಡುವೆ. ಸರ್ವಜನಾಂಗಗಳ ರಾಜನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.


ಆತನು ದೊಡ್ಡವರೂ ಚಿಕ್ಕವರೂ ಎಂದೆನ್ನದೆ ತನ್ನ ಭಕ್ತರನ್ನೆಲ್ಲಾ ಆಶೀರ್ವದಿಸುವನು.


ಯೆಹೋವನ ಮೇಲಿರುವ ಭಯಭಕ್ತಿಗಳಿಂದಲೇ ಜ್ಞಾನವು ಆರಂಭವಾಗುತ್ತದೆ. ಆತನಲ್ಲಿ ಭಯಭಕ್ತಿಯುಳ್ಳವರು ಜ್ಞಾನಪೂರ್ಣರಾಗಿದ್ದಾರೆ. ಆತನಿಗೆ ಸದಾಕಾಲ ಸ್ತೋತ್ರವಾಗಲಿ.


ನಾನು ಹೋಗಿ ರಾಜನಾದ ಅಹಾಬನಿಗೆ ನೀನು ಇಲ್ಲಿರುವೆಯೆಂಬುದನ್ನು ತಿಳಿಸಿದರೆ, ನಂತರ ಯೆಹೋವನು ನಿನ್ನನ್ನು ಬೇರೊಂದು ಸ್ಥಳಕ್ಕೆ ಕರೆದೊಯ್ಯುವನು. ರಾಜನಾದ ಅಹಾಬನು ಇಲ್ಲಿಗೆ ಬಂದಾಗ, ನಿನ್ನನ್ನು ಕಂಡುಹಿಡಿಯಲು ಸಮರ್ಥನಾಗುವುದಿಲ್ಲ. ಆಗ ಅವನು ನನ್ನನ್ನು ಕೊಂದುಬಿಡುತ್ತಾನೆ! ನನ್ನ ಬಾಲ್ಯದಿಂದಲೂ ನಾನು ಯೆಹೋವನನ್ನೇ ಅನುಸರಿಸುತ್ತಿದ್ದೇನೆ.


ನಾನು ನಿಮಗೆ ಈ ಹೊತ್ತು ಕೊಡುವ ಉಪದೇಶಗಳಿಗೆ ನ್ಯಾಯದಲ್ಲೂ ಒಳ್ಳೆಯದರಲ್ಲೂ ಸರಿಸಮಾನವಾದ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಬೇರೆ ಯಾವ ದೊಡ್ಡ ದೇಶವೂ ಹೊಂದಿಲ್ಲ!


ಮೂರು ದಿನಗಳಾದ ಮೇಲೆ ಯೋಸೇಫನು ಅವರಿಗೆ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು. ನೀವು ಈ ಕಾರ್ಯವೊಂದನ್ನು ಮಾಡಿದರೆ ನಾನು ನಿಮ್ಮನ್ನು ಉಳಿಸುತ್ತೇನೆ;


ಆತನ ತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ನಮ್ಮ ದೇವರು ವೇಶ್ಯೆಯನ್ನು ದಂಡಿಸಿದನು. ಅವಳ ಲೈಂಗಿಕ ಪಾಪದಿಂದಲೇ ಲೋಕವು ಕೆಟ್ಟುಹೋಯಿತು. ಆತನು ತನ್ನ ಸೇವಕರ ರಕ್ತಕ್ಕೆ ಪ್ರತಿಯಾಗಿ ಆ ವೇಶ್ಯೆಯನ್ನು ದಂಡಿಸಿದನು.”


ಯಜ್ಞವೇದಿಕೆಯಿಂದ ಹೀಗೆ ಹೇಳುವುದನ್ನೂ ನಾನು ಕೇಳಿಸಿಕೊಂಡೆನು: “ಹೌದು, ದೇವರಾದ ಪ್ರಭುವೇ, ಸರ್ವಶಕ್ತನೇ, ನಿನ್ನ ತೀರ್ಪುಗಳೆಲ್ಲಾ ಸತ್ಯವಾಗಿವೆ ಮತ್ತು ನ್ಯಾಯವಾಗಿವೆ.”


ಅಪರಾಧಗಳನ್ನು ಮಾಡುವ ಜನರಿಗೆ ದೇವರು ತೀರ್ಪು ಮಾಡುತ್ತಾನೆ. ಆತನ ತೀರ್ಪು ನ್ಯಾಯವಾದುದೆಂದು ನಮಗೆ ಗೊತ್ತಿದೆ.


ಆದರೆ ಯೆಹೋವನೇ, ನಾವು ನಿನ್ನ ನ್ಯಾಯವಿಚಾರಣೆಯ ರೀತಿಗಾಗಿ ಕಾಯುತ್ತಿದ್ದೇವೆ. ನಮ್ಮ ಆತ್ಮಗಳು ನಿನ್ನನ್ನೂ ನಿನ್ನ ನಾಮವನ್ನೂ ನೆನಪು ಮಾಡುತ್ತವೆ.


ನಿನ್ನ ವಿಧಿನಿಯಮಗಳು ಒಳ್ಳೆಯವೇ. ಅವುಗಳಿಗೆ ವಿಧೇಯನಾಗಿರುವುದಾಗಿ ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.


ನಾನು ನಿನ್ನ ನ್ಯಾಯವನ್ನೂ ನೀತಿಯನ್ನೂ ಕಲಿತಂತೆಲ್ಲಾ ನಿನ್ನನ್ನು ಕೊಂಡಾಡುವೆನು.


ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ.


ದುಷ್ಟನು ಪಾಪದಿಂದ ಪ್ರಭಾವಿತನಾಗಿ, “ನಾನು ದೇವರಿಗೆ ಭಯಪಡುವುದೂ ಇಲ್ಲ ಆತನನ್ನು ಗೌರವಿಸುವುದೂ ಇಲ್ಲ” ಎಂದುಕೊಳ್ಳುವನು.


ಅವರು ಕುಯುಕ್ತಿಗಳನ್ನೇ ಮಾಡುತ್ತಾ ದೇವರ ಕಟ್ಟಳೆಗಳನ್ನೂ ಬುದ್ಧಿಮಾತುಗಳನ್ನೂ ಗಣನೆಗೆ ತೆಗೆದುಕೊಳ್ಳುವುದಿಲ್ಲ. ದೇವರ ವೈರಿಗಳು ಆತನ ಉಪದೇಶಗಳನ್ನು ಕಡೆಗಣಿಸುವರು.


ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ.


ಬಳಿಕ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರಿಗೆ ನೇಮಿಸಬೇಕಾದ ಇತರ ಕಟ್ಟಳೆಗಳು ಯಾವುವೆಂದರೆ:


ಯೆಹೋವನ ದೂತನು, “ನಿನ್ನ ಮಗನನ್ನು ವಧಿಸಬೇಡ. ಅವನಿಗೆ ನೋವು ಮಾಡಬೇಡ. ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೂ ಹಿಂಜರಿಯಲಿಲ್ಲ; ಆದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ತೋರಿಬಂದಿದೆ” ಎಂದು ಹೇಳಿದನು.


ಆದ್ದರಿಂದ ದೇವರು ದಯೆ ಉಳ್ಳವನಾಗಿದ್ದರೂ ಬಹುಕಠಿಣನೂ ಆಗಿದ್ದಾನೆ ಎಂಬುದನ್ನು ಗಮನಿಸು. ದೇವರು ತನ್ನನ್ನು ಹಿಂಬಾಲಿಸದಿರುವ ಜನರನ್ನು ದಂಡಿಸುತ್ತಾನೆ. ಆದರೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡಿದ್ದರೆ, ದೇವರು ನಿನಗೆ ದಯಾಳುವಾಗಿರುತ್ತಾನೆ. ಇಲ್ಲವಾದರೆ, ನಿನ್ನನ್ನು ಮರದಿಂದ ಕಡಿದುಹಾಕಲಾಗುವುದು.


ಆ ಜನರು, “ಕೊರ್ನೇಲಿಯ ಎಂಬ ಒಬ್ಬ ಸೇನಾಧಿಕಾರಿ ಇದ್ದಾನೆ. ಅವನು ಧಾರ್ಮಿಕ ವ್ಯಕ್ತಿ. ಅವನು ದೇವರನ್ನು ಆರಾಧಿಸುತ್ತಾನೆ. ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನೀನು ಹೇಳುವ ಸಂಗತಿಗಳನ್ನು ಕೇಳಬೇಕೆಂದು ದೇವದೂತನೊಬ್ಬನು ಕೊರ್ನೇಲಿಯನಿಗೆ ತಿಳಿಸಿದ್ದಾನೆ” ಎಂದು ಹೇಳಿದರು.


ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.


ಆತನು ಯಾಕೋಬಿಗೆ ತನ್ನ ಆಜ್ಞೆಗಳನ್ನು ಕೊಟ್ಟನು. ಇಸ್ರೇಲಿಗೆ ತನ್ನ ಕಟ್ಟಳೆಗಳನ್ನೂ ನಿಯಮಗಳನ್ನೂ ಕೊಟ್ಟನು.


ಯೆಹೋವನೇ, ನಿನ್ನ ತೀರ್ಪುಗಳು ನ್ಯಾಯವಾದವುಗಳೆಂದು ನನಗೆ ತಿಳಿದಿದೆ. ನೀನು ನನ್ನನ್ನು ಶಿಕ್ಷಿಸಿದ್ದು ನನ್ನ ದೃಷ್ಟಿಯಲ್ಲಿ ನ್ಯಾಯವಾಗಿತ್ತು.


ನಿನ್ನ ಒಳ್ಳೆಯ ನಿರ್ಧಾರಗಳಿಗಾಗಿ ಕೃತಜ್ಞತೆ ಸಲ್ಲಿಸಲು ನಾನು ಮಧ್ಯರಾತ್ರಿಯಲ್ಲಿ ಎದ್ದೇಳುವೆನು.


ಅವಮಾನವನ್ನು ನನ್ನಿಂದ ತೊಲಗಿಸು. ನಾನು ಅದಕ್ಕೆ ಹೆದರಿಕೊಂಡಿದ್ದೇನೆ. ನಿನ್ನ ಜ್ಞಾನದ ನಿರ್ಧಾರಗಳು ಒಳ್ಳೆಯವುಗಳಾಗಿವೆ.


ಯೆಹೋವನೇ, ಅಸಹಾಯಕರನ್ನು ಪರಿಪಾಲಿಸು. ಅವರನ್ನು ಶಾಶ್ವತವಾಗಿ ಸಂರಕ್ಷಿಸು.


ನಿನ್ನ ಕಟ್ಟಳೆಗಳನ್ನು ಎಂದೆಂದಿಗೂ ನಿತ್ಯಸ್ವಾಸ್ತ್ಯವನ್ನಾಗಿ ಆರಿಸಿಕೊಂಡಿದ್ದೇನೆ. ಅವು ನನ್ನ ಹೃದಯಕ್ಕೆ ಆನಂದಕರವಾಗಿವೆ.


ನಾನು ಗುಪ್ತವಾಗಿ ಮಾತನಾಡದೆ ಬಹಿರಂಗವಾಗಿಯೇ ಮಾತನಾಡಿದ್ದೇನೆ. ಈ ಭೂಮಿಯ ಕತ್ತಲೆಯ ಸ್ಥಳದಲ್ಲಿ ನನ್ನ ಮಾತುಗಳನ್ನು ಅಡಗಿಸಿಡಲಿಲ್ಲ. ನನ್ನನ್ನು ಕಂಡುಹಿಡಿಯಲು ಗುಪ್ತಸ್ಥಳದಲ್ಲಿ ಹುಡುಕಿರಿ ಎಂದು ನಾನು ಯಾಕೋಬನ ಜನರಿಗೆ ಹೇಳಲಿಲ್ಲ. ನಾನೇ ಯೆಹೋವನು. ನಾನು ಸತ್ಯವನ್ನೇ ಆಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು