Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 2:12 - ಪರಿಶುದ್ದ ಬೈಬಲ್‌

12 ಆತನ ಮಗನಿಗೆ ನಂಬಿಗಸ್ತರಾಗಿರಿ, ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 2:12
30 ತಿಳಿವುಗಳ ಹೋಲಿಕೆ  

ಯಾವನು ಯೆಹೋವನಲ್ಲಿ ಭರವಸವಿಟ್ಟಿದ್ದಾನೋ ಅವನೇ ಧನ್ಯನು. ಸಹಾಯಕ್ಕಾಗಿ ವಿಗ್ರಹಗಳ ಕಡೆಗೂ ಸುಳ್ಳುದೇವರುಗಳ ಕಡೆಗೂ ತಿರುಗಿಕೊಳ್ಳದವನೇ ಭಾಗ್ಯವಂತನು.


ಜನರು ತಂದೆಯನ್ನು ಗೌರವಿಸುವಂತೆ ಮಗನನ್ನು ಗೌರವಿಸಬೇಕೆಂದು ದೇವರು ಹೀಗೆ ಮಾಡಿದನು. ಮಗನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿರುವ ತಂದೆಯನ್ನೂ ಸನ್ಮಾನಿಸದವನಾಗಿದ್ದಾನೆ.


ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವವರು ಭಾಗ್ಯವಂತರೇ ಸರಿ!


ಯೆಹೋವನು ಎಷ್ಟು ಒಳ್ಳೆಯವನೆಂಬುದನ್ನು ಅನುಭವದಿಂದಲೇ ತಿಳಿದುಕೊಳ್ಳಿರಿ. ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಭಾಗ್ಯವಂತರು.


ಆದರೆ ಯೆಹೋವನಲ್ಲಿ ನಂಬಿಕೆಯುಳ್ಳ ಮನುಷ್ಯನು ದೇವರ ಕೃಪೆಗೆ ಪಾತ್ರನಾಗುವನು. ಏಕೆಂದರೆ ತಾನು ನಂಬಿಕೆಯುಳ್ಳವನೆಂದು ಅವನು ಯೆಹೋವನಿಗೆ ತೋರಿಸಿಕೊಡುವನು.


ಯೆಹೋವನು ನಿಮಗೆ ಕರುಣೆ ತೋರಿಸಲು ಇಷ್ಟಪಡುತ್ತಾನೆ. ಆತನು ನಿಮ್ಮನ್ನು ಎದುರು ನೋಡುತ್ತಿದ್ದಾನೆ. ಆತನು ಎದ್ದು ನಿಮ್ಮನ್ನು ಸಂತೈಸಲು ಬಯಸುತ್ತಾನೆ. ದೇವರಾದ ಯೆಹೋವನು ನ್ಯಾಯವಂತನಾಗಿದ್ದಾನೆ. ಆತನ ಸಹಾಯವನ್ನು ನಿರೀಕ್ಷಿಸುವವರೆಲ್ಲರೂ ಆಶೀರ್ವದಿಸಲ್ಪಡುವರು.


ಉಪದೇಶವನ್ನು ಗಮನವಿಟ್ಟು ಕೇಳುವವನು ಅದರ ಲಾಭ ಹೊಂದುವನು; ಯೆಹೋವನಲ್ಲಿ ಭರವಸೆ ಇಡುವವನು ಆಶೀರ್ವಾದ ಹೊಂದುವನು.


ಪವಿತ್ರ ಗ್ರಂಥವು ಹೇಳುವುದೇನೆಂದರೆ, “ನಾನು ಅಮೂಲ್ಯವಾದ ಮೂಲೆಗಲ್ಲನ್ನು ಆರಿಸಿದ್ದೇನೆ. ನಾನು ಆ ಕಲ್ಲನ್ನು ಚಿಯೋನಿನಲ್ಲಿ ಇಟ್ಟಿರುವೆನು; ಆತನನ್ನು ನಂಬುವವನು ಎಂದಿಗೂ ಆಶಾಭಂಗಪಡುವುದಿಲ್ಲ”


ಕ್ರಿಸ್ತನನ್ನು ನಿರೀಕ್ಷಿಸಿಕೊಂಡಿರುವವರಲ್ಲಿ ನಾವೇ ಮೊದಲಿಗರು. ದೇವರ ಮಹಿಮೆಗೆ ಸ್ತೋತ್ರವನ್ನು ಉಂಟುಮಾಡಬೇಕೆಂದೇ ನಮ್ಮನ್ನು ಆರಿಸಿಕೊಳ್ಳಲಾಯಿತು.


ಎಲೀಯನೇ, ಇಸ್ರೇಲಿನಲ್ಲಿ ನಂಬಿಗಸ್ಥನಾದ ವ್ಯಕ್ತಿಯು ನೀನೊಬ್ಬನು ಮಾತ್ರ ಅಲ್ಲ. ಆ ದುಷ್ಟಜನರು ಅನೇಕ ಜನರನ್ನು ಕೊಲ್ಲುತ್ತಾರೆ. ಆದರೂ, ಅದಾದ ನಂತರ, ಬಾಳನಿಗೆ ಎಂದೆಂದೂ ಬಾಗಿ ನಮಸ್ಕರಿಸದಿರುವ ಏಳು ಸಾವಿರ ಜನರು ಇನ್ನೂ ಇಸ್ರೇಲಿನಲ್ಲಿ ವಾಸಮಾಡುತ್ತಿದ್ದಾರೆ! ಬಾಳನ ವಿಗ್ರಹಕ್ಕೆ ಎಂದೂ ಮುದ್ದಿಡದ ಆ ಏಳು ಸಾವಿರ ಜನರನ್ನು ನಾನು ಅಲ್ಲಿ ಉಳಿಸುವೆನು.”


ಪವಿತ್ರ ಗ್ರಂಥವು ಆ ಕಲ್ಲಿನ ಬಗ್ಗೆ ಹೀಗೆ ತಿಳಿಸಿದೆ: “ಇಗೋ, ನಾನು ಸಿಯೋನಿನಲ್ಲಿ ಜನರನ್ನು ಎಡವಿಬೀಳಿಸುವ ಒಂದು ಕಲ್ಲನ್ನು ಇಡುತ್ತೇನೆ. ಈ ಬಂಡೆಯಿಂದಾಗಿ ಜನರು ಎಡವಿಬೀಳುತ್ತಾರೆ. ಆದರೆ ಆ ಬಂಡೆಯಲ್ಲಿ ನಂಬಿಕೆಯಿಡುವವನು ಎಂದಿಗೂ ಆಶಾಭಂಗ ಹೊಂದುವುದಿಲ್ಲ.”


“ಇವನನ್ನು ರಾಜನನ್ನಾಗಿ ಅಭಿಷೇಕಿಸಿದವನು ನಾನೇ. ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ಆಳುವವನು ಇವನೇ” ಎಂದು ಅವರಿಗೆ ಕೋಪದಿಂದ ಉತ್ತರಿಸುವನು. ಆಗ ಅವರೆಲ್ಲರೂ ಭಯಗೊಳ್ಳುವರು.


ಯೆಹೋವನು ನೀತಿವಂತರನ್ನು ಸಂರಕ್ಷಿಸುವನು; ದುಷ್ಟರನ್ನಾದರೋ ನಾಶಪಡಿಸುವನು.


ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:


ಈಗ ಇಸ್ರೇಲರು ಹೆಚ್ಚೆಚ್ಚಾಗಿ ಪಾಪ ಮಾಡುತ್ತಿರುತ್ತಾರೆ. ತಮಗಾಗಿ ವಿಗ್ರಹಗಳನ್ನು ಮಾಡಿಕೊಳ್ಳುತ್ತಾರೆ. ಅಕ್ಕಸಾಲಿಗರು ಬೆಳ್ಳಿಯಿಂದ ವಿಗ್ರಹಗಳನ್ನು ಮಾಡುವರು. ತಾವು ಮಾಡಿದ ಮೂರ್ತಿಗಳೊಂದಿಗೆ ಮಾತನಾಡುವರು. ಆ ವಿಗ್ರಹಗಳಿಗೆ ಯಜ್ಞವನ್ನರ್ಪಿಸುವರು. ಬಂಗಾರದ ಬಸವನ ವಿಗ್ರಹಕ್ಕೆ ಮುದ್ದು ಕೊಡುವರು.


ಯೆಹೋವನ ಒಡಂಬಡಿಕೆಯ ಕುರಿತು ಹೇಳುತ್ತಿರುವೆ. ಆತನು ನನಗೆ, “ಈ ಹೊತ್ತು ನಾನು ನಿನಗೆ ತಂದೆಯಾದೆ! ನೀನೇ ನನ್ನ ಮಗನು.


ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಆತನಲ್ಲಿ ನಂಬಿಕೆಯಿಡುವ ಯಾವ ವ್ಯಕ್ತಿಯೂ ನಾಚಿಕೆಗೆ ಗುರಿಯಾಗುವುದೇ ಇಲ್ಲ.”


ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.


ನೀವು ಕ್ರಿಸ್ತನ ಮೂಲಕ ದೇವರನ್ನು ನಂಬಿದ್ದೀರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ನಂತರ ದೇವರು ಆತನಿಗೆ ಪ್ರಭಾವವನ್ನು ದಯಪಾಲಿಸಿದನು. ಆದ್ದರಿಂದ ನಿಮ್ಮ ನಂಬಿಕೆ ಮತ್ತು ನಿರೀಕ್ಷೆಗಳು ದೇವರಲ್ಲಿರಲಿ.


ಆದ್ದರಿಂದ ನಾನು ನಿನ್ನನ್ನು ದೇಶದ ರಾಜ್ಯಪಾಲನನ್ನಾಗಿ ನೇಮಿಸುವೆನು; ಜನರು ನಿನ್ನ ಆಜ್ಞೆಗಳಿಗೆಲ್ಲಾ ವಿಧೇಯರಾಗುವರು. ಈ ದೇಶದಲ್ಲಿ ನಿನಗೆ ಅಧಿಪತಿಯಾಗಿರುವವನು ನಾನೊಬ್ಬನೇ” ಎಂದು ಹೇಳಿದನು.


ನೀತಿವಂತರಿಗೆ ಕೇಡುಮಾಡಲು ಕೆಡುಕರು ಒಟ್ಟಾಗಿ ಸೇರಿದ್ದಾರೆ. ನೀನಾದರೋ ನೀತಿವಂತರನ್ನು ಮರೆಮಾಡಿ ಕಾಪಾಡುವೆ; ಅವರನ್ನು ನಿನ್ನ ಆಶ್ರಯಸ್ಥ್ಥಾನದಲ್ಲಿ ಅಡಗಿಸಿಡುವೆ.


ಯೆಹೋವನ ಜನರೇ, ಆತನನ್ನು ಆರಾಧಿಸಿರಿ. ಆತನ ಭಕ್ತರಿಗೆ ಬೇರೆ ಯಾವ ಆಶ್ರಯಸ್ಥಾನವೂ ಇಲ್ಲ.


ನನ್ನ ಶತ್ರುವಿಗೂ ನನ್ನನ್ನು ಕೊಲ್ಲಬೇಕೆಂದಿರುವವರಿಗೂ ಯೆಹೋವನು ಅವುಗಳನ್ನು ಮಾಡಲಿ.


ನೀವು ಒಣಗಿ, ಸತ್ತ ಹೂವಿನೋಪಾದಿಯಾಗುವ ಮೊದಲೇ ನಿಮ್ಮ ಜೀವಿತವನ್ನು ಮಾರ್ಪಡಿಸಿರಿ. ಬಿಸಿಲೇರಿದಾಗ ಹೂವು ಬಾಡಿಹೋಗಿ ಒಣಗುತ್ತದೆ. ಅದೇ ಪ್ರಕಾರ ಯೆಹೋವನು ತನ್ನ ಕೋಪವನ್ನು ಪ್ರದರ್ಶಿಸುವಾಗ ನೀವು ಹಾಗೆ ಆಗುವಿರಿ. ಆದ್ದರಿಂದ ಯೆಹೋವನ ಕೋಪದ ದಿನವು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ ನಿಮ್ಮ ಜೀವಿತವನ್ನು ಬದಲಾಯಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು