ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.
ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.
ತಾವು ಸುರಕ್ಷಿತರಾಗಿದ್ದೇವೆ ಎಂದು ನೆನಸುವ ಜನಾಂಗಗಳ ಮೇಲೆ ನಾನು ಕೋಪಗೊಳ್ಳುವೆನು. ನಾನು ಸ್ವಲ್ಪ ಕೋಪಗೊಂಡಿದ್ದರಿಂದ ನನ್ನ ಜನರನ್ನು ಶಿಕ್ಷಿಸಲು ಆ ಜನಾಂಗಗಳನ್ನು ಉಪಯೋಗಿಸಿಕೊಂಡೆನು. ಆದರೆ ಆ ಜನಾಂಗಗಳು ಅತಿಯಾಗಿ ಅವರನ್ನು ಹಾನಿಮಾಡಿದರು.”
ಆಲೈಸಿರಿ! ಪಟ್ಟಣದೊಳಗಿಂದ ಮತ್ತು ದೇವಾಲಯದೊಳಗಿಂದ ದೊಡ್ಡ ಶಬ್ದವು ಕೇಳಿಸುತ್ತದೆ. ಯೆಹೋವನು ತನ್ನ ವೈರಿಗಳನ್ನು ಶಿಕ್ಷಿಸುವುದೇ ಆ ಶಬ್ದ. ಅವರಿಗೆ ತಕ್ಕ ಶಿಕ್ಷೆಯನ್ನು ಯೆಹೋವನು ಕೊಡುತ್ತಿದ್ದಾನೆ.
ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.