ಕೀರ್ತನೆಗಳು 2:9 - ಪರಿಶುದ್ದ ಬೈಬಲ್9 ಕಬ್ಬಿಣದ ಗದೆಯು ಮಣ್ಣಿನ ಮಡಿಕೆಯನ್ನು ನುಚ್ಚುನೂರುಮಾಡುವಂತೆ ನೀನು ಅನ್ಯಜನಾಂಗಗಳನ್ನು ನಾಶಪಡಿಸುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನೀ ಬಡಿದು ಹಾಕುವೆ ಕಬ್ಬಿಣದ ಗದೆಯಿಂದವರನು I ನೀ ಒಡೆದು ಹಾಕುವೆ ಮಣ್ಣಿನ ಮಡಕೆಯಂತವರನು"II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಕಬ್ಬಿಣದ ಗದೆಯಿಂದ ನೀನು ಅವರನ್ನು ದಂಡಿಸಿ, ಮಣ್ಣಿನ ಮಡಕೆಯಂತೆ ಚೂರುಚೂರಾಗಿ ಅವರನ್ನು ಒಡೆದುಹಾಕುವೆ.” ಅಧ್ಯಾಯವನ್ನು ನೋಡಿ |
“ಅರಸನಾದ ನೆಬೂಕದ್ನೆಚ್ಚರನೇ, ಬೆಟ್ಟದಿಂದ ಒಂದು ದೊಡ್ಡ ಬಂಡೆ ಒಡೆದು ಬಂದದ್ದನ್ನು ನೀನು ನೋಡಿದೆ. ಯಾರೂ ಅದನ್ನು ಒಡೆಯಲಿಲ್ಲ! ಆ ಬಂಡೆಯು ಕಬ್ಬಿಣವನ್ನು, ಕಂಚನ್ನು, ಜೇಡಿಮಣ್ಣನ್ನು, ಬೆಳ್ಳಿಯನ್ನು, ಚಿನ್ನವನ್ನು ಚೂರುಚೂರು ಮಾಡಿತು. ಭವಿಷ್ಯದಲ್ಲಿ ಏನಾಗುವದೆಂಬುದನ್ನು ದೇವರು ನಿನಗೆ ಈ ರೀತಿಯಲ್ಲಿ ತೋರಿಸಿದ್ದಾನೆ. ನಿನ್ನ ಕನಸು ನಿಜ. ಅದರ ಅರ್ಥವು ನಂಬಿಕೆಗೆ ಯೋಗ್ಯವಾಗಿದೆ” ಎಂದು ವಿವರಿಸಿದನು.