ಕೀರ್ತನೆಗಳು 20:5 - ಪರಿಶುದ್ದ ಬೈಬಲ್5 ದೇವರು ನಿನಗೆ ಸಹಾಯಮಾಡುವಾಗ ಹರ್ಷಿಸುವೆವು. ಆತನ ಹೆಸರನ್ನು ಕೊಂಡಾಡೋಣ. ಯೆಹೋವನು ನಿನ್ನ ಕೋರಿಕೆಗಳನ್ನೆಲ್ಲ ನೆರವೇರಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು; ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು. ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಜಯಘೋಷ ಮಾಡುವೆವು, ನಿನ್ನ ಗೆಲುವಿನ ನಿಮಿತ್ತ I ಧ್ವಜ ಹಾರಿಪೆವು, ಎಮ್ಮ ದೇವನ ನಾಮದ ನಿಮಿತ್ತ I ನಿನ್ನ ಕೋರಿಕೆಗಳೆಲ್ಲವನು, ಕೈಗೂಡಿಸಲಿ ಆತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿನ್ನ ಜಯದಲ್ಲಿ ಉತ್ಸಾಹಧ್ವನಿಮಾಡುವೆವು; ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು. ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾವು ದೇವರ ಜಯದಲ್ಲಿ ಆನಂದ ಘೋಷಮಾಡಿ, ನಮ್ಮ ದೇವರ ಹೆಸರಿನಲ್ಲಿಯೇ ನಾವು ನಮ್ಮ ಧ್ವಜಗಳನ್ನು ಎತ್ತುವೆವು. ಯೆಹೋವ ದೇವರು ನಿಮ್ಮ ಬಿನ್ನಹಗಳನ್ನೆಲ್ಲಾ ಪೂರೈಸಲಿ. ಅಧ್ಯಾಯವನ್ನು ನೋಡಿ |
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.