ಕೀರ್ತನೆಗಳು 20:6 - ಪರಿಶುದ್ದ ಬೈಬಲ್6 ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು. ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು; ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಒದಗುವನು ಪ್ರಭುವು ಅಭಿಷಿಕ್ತನಿಗೆ I ಓಗೊಡುವನು ಸ್ವರ್ಗದಿಂದಾತನಿಗೆ I ಗೆಲುವನೀವನು ಭುಜಬಲದಿಂದವನಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು; ತನ್ನ ಭುಜಬಲದಿಂದ ಅವನಿಗೆ ವಿಜಯವನ್ನುಂಟು ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಈಗ ನಾನು ಇದನ್ನು ಬಲ್ಲೆನು: ಯೆಹೋವ ದೇವರು ತಮ್ಮ ಅಭಿಷಿಕ್ತನಿಗೆ ಜಯ ನೀಡುವರು. ತಮ್ಮ ಜಯದ ಬಲಗೈಯ ಶಕ್ತಿಯಿಂದಲೂ ತಮ್ಮ ಪರಿಶುದ್ಧ ಪರಲೋಕದಿಂದಲೂ ಅವನಿಗೆ ಉತ್ತರಕೊಡುವರು. ಅಧ್ಯಾಯವನ್ನು ನೋಡಿ |
ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.