Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 21:9 - ಪರಿಶುದ್ದ ಬೈಬಲ್‌

9 ಯೆಹೋವನೇ, ನೀನು ರಾಜನೊಂದಿರುವಾಗ ಅವನು ಉರಿಯುವ ಕುಲಿಮೆಯಂತಿರುವನು. ಅವನ ಕೋಪವು ಧಗಧಗಿಸುವ ಬೆಂಕಿಯಂತೆ ಸುಡುವುದು; ಅವನು ಶತ್ರುಗಳನ್ನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಬರುವ ಕಾಲದಲ್ಲಿ ಅವರನ್ನು ಅಗ್ನಿಕುಂಡದಂತೆ ದಹಿಸಿಬಿಡುವಿರಿ. ಯೆಹೋವ ದೇವರು ತಮ್ಮ ಬೇಸರದಿಂದ ಅವರನ್ನು ದಂಡಿಸಿಬಿಡುವರು; ಬೆಂಕಿಯು ಅವರನ್ನು ಭಸ್ಮ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 21:9
28 ತಿಳಿವುಗಳ ಹೋಲಿಕೆ  

“ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನಮ್ಮ ದೇವರು ಬರುತ್ತಿದ್ದಾನೆ; ಆತನು ಸುಮ್ಮನಿರುವುದಿಲ್ಲ. ಆತನ ಮುಂಭಾಗದಲ್ಲಿ ಬೆಂಕಿಯು ಪ್ರಜ್ವಲಿಸುವುದು. ಆತನ ಸುತ್ತಲೂ ಬಿರುಗಾಳಿ ಬೀಸುವುದು.


ಆತನ ಮೂಗಿನಿಂದ ಹೊಗೆಯು ಬಂದಿತು; ಆತನ ಬಾಯಿಂದ ಅಗ್ನಿಜ್ವಾಲೆಯೂ ಬೆಂಕಿಯ ಕಿಡಿಗಳೂ ಬಂದವು.


ಪ್ರಭು ಯೇಸು ಪರಲೋಕದಿಂದ ಬೆಂಕಿಯ ಜ್ವಾಲೆಗಳೊಡನೆ ಪ್ರತ್ಯಕ್ಷನಾದಾಗ ದೇವರನ್ನು ತಿಳಿದಿಲ್ಲದವರಿಗೂ ಸುವಾರ್ತೆಗೆ ವಿಧೇಯರಾಗಿಲ್ಲದವರಿಗೂ ದಂಡನೆಯನ್ನು ಬರಮಾಡುತ್ತಾನೆ.


ಯೆಹೋವನು ಯಾಕೋಬನ ಮನೆಗಳನ್ನು ನಾಶಪಡಿಸಿದನು. ಆತನು ಕನಿಕರವಿಲ್ಲದೆ ಅವುಗಳನ್ನು ನುಂಗಿಬಿಟ್ಟನು. ತನ್ನ ಕೋಪದಲ್ಲಿ ಆತನು ಯೆಹೂದದ ಮಗಳ ಕೋಟೆಗಳನ್ನು ನಾಶಪಡಿಸಿದನು. ಯೆಹೋವನು ಯೆಹೂದ ರಾಜ್ಯವನ್ನೂ ಮತ್ತು ಅದರ ಅಧಿಪತಿಗಳನ್ನೂ ನೆಲಕ್ಕೆ ಅಪ್ಪಳಿಸಿದನು. ಆತನು ಯೆಹೂದ ರಾಜ್ಯಕ್ಕೆ ಅವಮಾನ ಮಾಡಿದ್ದಾನೆ.


ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


ಆತನ ಮಗನಿಗೆ ನಂಬಿಗಸ್ತರಾಗಿರಿ, ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!


“ಇವನನ್ನು ರಾಜನನ್ನಾಗಿ ಅಭಿಷೇಕಿಸಿದವನು ನಾನೇ. ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ಆಳುವವನು ಇವನೇ” ಎಂದು ಅವರಿಗೆ ಕೋಪದಿಂದ ಉತ್ತರಿಸುವನು. ಆಗ ಅವರೆಲ್ಲರೂ ಭಯಗೊಳ್ಳುವರು.


ನನ್ನ ಕೋಪವು ಬೆಂಕಿಯಂತೆ ದಹಿಸುವುದು; ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ಪರ್ವತಗಳ ಬುಡದ ಕೆಳಗೂ ದಹಿಸುವುದು.


ಆಮೇಲೆ ಮೃತ್ಯುವನ್ನೂ ಪಾತಾಳವನ್ನೂ ಬೆಂಕಿಯ ಕೆರೆಗೆ ಎಸೆಯಲಾಯಿತು. ಈ ಬೆಂಕಿಯ ಕೆರೆಯು ಎರಡನೆಯ ಮರಣ.


ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.


ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಆಗ ರಾಜನು ಬಹು ಕೋಪಗೊಂಡು ತನ್ನ ಸೈನ್ಯವನ್ನು ಕಳುಹಿಸಿ ಆ ಕೊಲೆಗಾರರನ್ನು ಕೊಲ್ಲಿಸಿದನು ಮತ್ತು ಅವರ ಪಟ್ಟಣವನ್ನು ಸುಟ್ಟುಹಾಕಿಸಿದನು.


ದೇವದೂತರು ಕೆಟ್ಟಜನರನ್ನು ಬೆಂಕಿಯ ಸ್ಥಳದೊಳಕ್ಕೆ ಎಸೆಯುವರು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ನೋವಿನಿಂದ ತಮ್ಮ ಹಲ್ಲುಗಳನ್ನು ಕಡಿಯುವರು.”


ಬೆಂಕಿಯ ಸ್ಥಳಕ್ಕೆ ಎಸೆದುಬಿಡುವರು. ಅಲ್ಲಿ ಅವರು ಗೋಳಾಡುತ್ತಾ ನೋವಿನಿಂದ ತಮ್ಮ ಹಲ್ಲುಗಳನ್ನು ಕಡಿಯುವರು.


ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.


ಮರಗಳನ್ನು ಕಡಿದುಹಾಕಲು ಕೊಡಲಿ ಈಗಲೇ ಸಿದ್ಧವಾಗಿದೆ. ಒಳ್ಳೆಯ ಫಲಬಿಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.


ಭೂಮಿಯು ಬಾಯ್ದೆರೆದು ಹೊಟ್ಟೆಕಿಚ್ಚುಪಟ್ಟ ದಾತಾನನನ್ನೂ ಅಬಿರಾಮನ ಪಂಗಡದವರನ್ನೂ ನುಂಗಿಬಿಟ್ಟಿತು.


ನನ್ನ ದುಃಖವನ್ನು ನೀನು ಅರ್ಥಮಾಡಿಕೊಳ್ಳುವೆ! ನನ್ನ ದುಃಖವು ಸಮುದ್ರದ ಮರಳಿಗಿಂತಲೂ ಹೆಚ್ಚು ಭಾರವಾಗಿದೆ. ಆದ್ದರಿಂದಲೇ ನನ್ನ ಮಾತುಗಳು ಮೂರ್ಖತನದಂತೆ ಕಾಣುತ್ತಿವೆ.


ಅಬ್ರಹಾಮನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಕಡೆಗೂ ಕಣಿವೆ ಪ್ರದೇಶದ ಕಡೆಗೂ ನೋಡಿದಾಗ ಆ ಪ್ರದೇಶದಿಂದ ಹೊಗೆ ಮೇಲೇರುತ್ತಿರುವುದನ್ನು ಕಂಡನು; ಧಗಧಗಿಸುವ ಬೆಂಕಿಯಿಂದ ಬರುವ ಹೊಗೆಯಂತೆ ಅದು ಕಂಡಿತು.


ಜೆರುಸಲೇಮಿನಲ್ಲಿ ದೇವರು ತನ್ನ ಹೆಸರನ್ನು ಸ್ಥಾಪಿಸಿರುತ್ತಾನೆ. ಆದ್ದರಿಂದ ಯಾವ ಅರಸನಾಗಲಿ ಅಧಿಕಾರಿಯಾಗಲಿ ಈ ಆಜ್ಞೆಗೆ ವಿರುದ್ಧವಾಗಿ ನಡೆದರೆ ದೇವರೇ ಅವನನ್ನು ಸೋಲಿಸುವನು; ಯಾರಾದರೂ ಆ ದೇವಾಲಯವನ್ನು ಕೆಡವಲು ಪ್ರಯತ್ನಿಸಿದರೆ ಅಂಥವರನ್ನು ದೇವರೇ ನಾಶಮಾಡುವನು. ಇದನ್ನು ದಾರ್ಯಾವೆಷನೆಂಬ ನಾನೇ ಆಜ್ಞಾಪಿಸಿರುತ್ತೇನೆ. ಈ ಆಜ್ಞೆಯನ್ನು ಬೇಗನೆ ಮತ್ತು ಸಂಪೂರ್ಣವಾಗಿ ನೆರವೇರಿಸಬೇಕು.


ನಾನು ನನ್ನ ಶತ್ರುಗಳನ್ನು ಸೋಲಿಸಿ ಅವರನ್ನು ಏಳಲಾರದಂತೆ ಮಾಡುವೆನು; ನನ್ನ ಶತ್ರುಗಳು ನನ್ನ ಪಾದಗಳ ಕೆಳಗೇ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು