ಕೀರ್ತನೆಗಳು 22:15 - ಪರಿಶುದ್ದ ಬೈಬಲ್15 ನನ್ನ ಶಕ್ತಿಯು ಒಡೆದುಹೋದ ಮಡಿಕೆಯ ಒಣ ತುಂಡಿನಂತಿದೆ. ನನ್ನ ನಾಲಿಗೆಯು ಬಾಯಿ ಮೇಲ್ಭಾಗಕ್ಕೆ ಅಂಟಿಕೊಳ್ಳುತ್ತಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಅಂಗುಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನನ್ನ ಬಾಯಿ ಬೋಕಿಯ ಹಾಗೆ ಒಣಗಿಹೋಗಿದೆ, ನನ್ನ ನಾಲಿಗೆ ಅಂಗಳಕ್ಕೆ ಹತ್ತಿದೆ, ನೀವು ನನ್ನನ್ನು ಮಣ್ಣಿಗೆ ಸೇರಿಸುವಿರಿ. ಅಧ್ಯಾಯವನ್ನು ನೋಡಿ |
ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.