Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:17 - ಪರಿಶುದ್ದ ಬೈಬಲ್‌

17 ನನ್ನ ಮೂಳೆಗಳೆಲ್ಲಾ ಎದ್ದುಕಾಣುತ್ತಿವೆ! ಜನರು ನನ್ನನ್ನು ದಿಟ್ಟಿಸಿ ನೋಡುತ್ತಿದ್ದಾರೆ! ಅವರು ನನ್ನನ್ನೇ ನೋಡುತ್ತಿದ್ದಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು; ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಎಣಿಸಬಹುದಿದೆ ನನ್ನೆಲುಬುಗಳೆಲ್ಲವನು I ಹಿಗ್ಗುತಿಹರು ದುರುಗುಟ್ಟಿ ನೋಡೆನ್ನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನ್ನ ಎಲುಬುಗಳನ್ನೆಲ್ಲಾ ಎಣಿಸುವದಕ್ಕಾಗುವದು; ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನನ್ನ ಎಲುಬುಗಳನ್ನೆಲ್ಲಾ ಎಣಿಸುವಂತಾಗಿದೆ; ಅವರು ನನ್ನನ್ನು ಕಂಡು ಹಿಗ್ಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:17
8 ತಿಳಿವುಗಳ ಹೋಲಿಕೆ  

ಜನರು ನೋಡುತ್ತಾ ಅಲ್ಲಿ ನಿಂತಿದ್ದರು. ಯೆಹೂದ್ಯನಾಯಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು, “ಇವನು ದೇವರಿಂದ ಆರಿಸಲ್ಪಟ್ಟ ಕ್ರಿಸ್ತನಾಗಿದ್ದರೆ ತನ್ನನ್ನು ರಕ್ಷಿಸಿಕೊಳ್ಳಲಿ. ಇವನು ಬೇರೆಯವರನ್ನು ರಕ್ಷಿಸಿದನಲ್ಲವೇ?” ಅಂದರು.


ಅನೇಕಾನೇಕ ಜನರು ಯೇಸುವನ್ನು ಹಿಂಬಾಲಿಸಿದರು. ದೊಡ್ಡಗುಂಪಾಗಿ ಸೇರಿದ್ದ ಸ್ತ್ರೀಯರು ಯೇಸುವಿಗಾಗಿ ದುಃಖಪಟ್ಟು ಎದೆ ಬಡಿದುಕೊಂಡು ಗೋಳಾಡುತ್ತಿದ್ದರು.


ಆದರೆ ನನ್ನ ಜನರು ನನ್ನ ಸೇವಕನನ್ನು ನೋಡಿದಾಗ ಆಶ್ಚರ್ಯಗೊಂಡರು. ಆತನು ಮನುಷ್ಯನೆಂಬ ಗುರುತೇ ಅವರಿಗೆ ಸಿಕ್ಕಲಿಲ್ಲ. ಆತನ ರೂಪವು ವಿಕಾರವಾಗುವಷ್ಟರ ಮಟ್ಟಿಗೆ ಆತನು ಗಾಯಗೊಂಡಿದ್ದನು.


ಅವನು ಆಸ್ತಿಪಂಜರದಂತೆ ಕ್ಷೀಣವಾಗುವನು. ಕಾಣದಿದ್ದ ಅವನ ಎಲುಬುಗಳು ಚರ್ಮಕ್ಕೆ ಅಂಟಿಕೊಂಡು ಅವು ಹೊರತೋರುತ್ತವೆ.


ಸೈನಿಕರು ಯೇಸುವನ್ನು ಕಾಯುತ್ತಾ ಅಲ್ಲೇ ಕುಳಿತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು