ಕೀರ್ತನೆಗಳು 22:29 - ಪರಿಶುದ್ದ ಬೈಬಲ್29 ಬಲಿಷ್ಠರೂ ದೃಢಕಾಯರೂ ತಿಂದು ದೇವರಮುಂದೆ ಅಡ್ಡಬೀಳುವರು. ಸಾಯುವವರೂ ಸತ್ತುಹೋಗಿರುವವರೂ ಆತನ ಮುಂದೆ ಅಡ್ಡಬೀಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ತಲೆಬಾಗುವರಾತನಿಗೆ ಧರೆಯ ಗರ್ವಿಗಳೆಲ್ಲರು I ಅಡ್ಡಬೀಳುವರವನಿಗೆ ಮರ್ತ್ಯಮಾನವರೆಲ್ಲರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣುಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಭೂಮಿಯ ಶ್ರೀಮಂತರೆಲ್ಲರು ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರು ಅವರ ಮುಂದೆ ಅಡ್ಡಬೀಳುವರು. ಅಧ್ಯಾಯವನ್ನು ನೋಡಿ |
ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”
ತಾನು ಮಹಾದೊಡ್ಡ ಜನವೆಂದು ಅಶ್ಶೂರವು ನೆನಸುತ್ತದೆ. ಆದರೆ ಸರ್ವಶಕ್ತನಾದ ಯೆಹೋವನು ಅಶ್ಶೂರದ ಮೇಲೆ ಭಯಂಕರವಾದ ವ್ಯಾಧಿಯನ್ನು ಬರಮಾಡುತ್ತಾನೆ. ಒಬ್ಬ ರೋಗಿ ತನ್ನ ಅಸ್ವಸ್ಥತೆಯಿಂದ ಹೇಗೆ ಕೃಶವಾಗುತ್ತಾನೋ ಹಾಗೆಯೇ ತನ್ನ ಶಕ್ತಿಯನ್ನೂ ಐಶ್ವರ್ಯವನ್ನೂ ಅಶ್ಶೂರವು ಕಳೆದುಕೊಂಡು ಬಲಹೀನನಾಗುವನು. ಅಶ್ಶೂರದ ಮಹಿಮಾಪ್ರಭಾವಗಳು ಇಲ್ಲದೆ ಹೋಗುವವು. ಬೆಂಕಿಯು ಸರ್ವವನ್ನು ಸುಟ್ಟು ನಾಶಮಾಡುವಂತೆ ಇರುವದು.