ಕೀರ್ತನೆಗಳು 22:3 - ಪರಿಶುದ್ದ ಬೈಬಲ್3 ದೇವರೇ, ಪರಿಶುದ್ಧನು ನೀನೇ. ನೀನು ರಾಜನಂತೆ ಕುಳಿತಿರುವೆ. ಇಸ್ರೇಲರ ಸ್ತುತಿಗಳೇ ನಿನ್ನ ಸಿಂಹಾಸನ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ, ನೀನು ಪವಿತ್ರಸ್ವರೂಪನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದರೂ ದೇವಾ, ನೀನಂತು ಪರಮಪೂಜ್ಯನು I ಇಸ್ರಯೇಲರ ಸ್ತುತ್ಯ ಸಿಂಹಾಸನದಲಿ ಆಸೀನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇಸ್ರಾಯೇಲ್ಯರ ಸ್ತೋತ್ರಸಿಂಹಾಸನದಲ್ಲಿರುವಾತನೇ, ನೀನು ಪವಿತ್ರಸ್ವರೂಪನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀವು ಪರಿಶುದ್ಧರು; ನೀವು ಇಸ್ರಾಯೇಲರ ಸ್ತೋತ್ರ ಸಿಂಹಾಸನದಲ್ಲಿರುವಿರಿ. ಅಧ್ಯಾಯವನ್ನು ನೋಡಿ |
ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”