ಕೀರ್ತನೆಗಳು 22:5 - ಪರಿಶುದ್ದ ಬೈಬಲ್5 ನಮ್ಮ ಪೂರ್ವಿಕರು ನಿನ್ನಲ್ಲಿ ಮೊರೆಯಿಟ್ಟಾಗ ಅವರನ್ನು ಶತ್ರುಗಳಿಂದ ಬಿಡಿಸಿದೆ. ನಿನ್ನಲ್ಲಿ ಭರವಸವಿಟ್ಟಿದ್ದ ಅವರಿಗೆ ನಿರಾಶೆಯಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿನಗೆ ಮೊರೆಯಿಟ್ಟು ವಿಮುಕ್ತರಾದರು; ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿನಗೆ ಮೊರೆಯಿಟ್ಟವರು ವಿಮುಕ್ತರಾದರಯ್ಯಾ I ವಿಶ್ವಾಸವಿಟ್ಟು ಹತಾಶರಾಗಲಿಲ್ಲವಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿನಗೆ ಮೊರೆಯಿಟ್ಟು ವಿಮುಕ್ತರಾದರು; ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ನಿಮಗೆ ಮೊರೆಯಿಟ್ಟದ್ದರಿಂದ ನೀವು ಅವರನ್ನು ರಕ್ಷಿಸಿದಿರಿ; ನಿಮ್ಮಲ್ಲಿ ಭರವಸೆಯಿಟ್ಟಿದ್ದರಿಂದ ಅವರು ಅಪಮಾನಕ್ಕೆ ಗುರಿಯಾಗಲಿಲ್ಲ. ಅಧ್ಯಾಯವನ್ನು ನೋಡಿ |
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.