ಕೀರ್ತನೆಗಳು 22:6 - ಪರಿಶುದ್ದ ಬೈಬಲ್6 ಹೀಗಿರಲು, ನಾನು ಹುಳವೇ? ನಾನು ಮನುಷ್ಯನಲ್ಲವೇ? ನನ್ನ ವಿಷಯದಲ್ಲಿ ಜನರು ನಾಚಿಕೆಪಡುತ್ತಾರೆ; ಅವರು ನನ್ನನ್ನು ತಿರಸ್ಕರಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮನುಜ ನಾನು, ಕ್ರಿಮಿಕೀಟಕೆ ಸಮಾನನು I ಅಲಕ್ಷಿತನು, ಪರರಿಂದ ತಿರಸ್ಕೃತನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ನಾನು ಹುಳದಂಥವನೇ ಹೊರತು ಮನುಷ್ಯನಲ್ಲ; ನಾನು ಮನುಷ್ಯರಿಂದ ನಿಂದೆ ಹಾಗು ತಿರಸ್ಕಾರಕ್ಕೆ ಗುರಿಯಾಗಿದ್ದೇನೆ. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.
ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.