Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 23:1 - ಪರಿಶುದ್ದ ಬೈಬಲ್‌

1 ಯೆಹೋವನೇ ನನಗೆ ಕುರುಬನು. ನನಗೆ ಕೊರತೆಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನಗೆ ಕುರುಬನು; ಕೊರತೆಪಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರಭು ಕುರಿಗಾಹಿಯಾಗಿರಲು ನನಗೆ I ಕುಂದುಕೊರತೆಗಳೆಲ್ಲಿಯವು ಎನಗೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ನನಗೆ ಕುರುಬನು; ಕೊರತೆಪಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ನನ್ನ ಕುರುಬ ಆಗಿದ್ದಾರೆ, ನನಗೆ ಕೊರತೆಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 23:1
25 ತಿಳಿವುಗಳ ಹೋಲಿಕೆ  

ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ಅನುಗುಣವಾಗಿ ನಿಮ್ಮ ಪ್ರತಿಯೊಂದು ಕೊರತೆಯನ್ನು ನೀಗಿಸುವನು.


“ನಾನೇ ಒಳ್ಳೆಯ ಕುರುಬ. ಒಳ್ಳೆಯ ಕುರುಬನು ಕುರಿಗಳಿಗಾಗಿ ತನ್ನ ಪ್ರಾಣವನ್ನು ಕೊಡುತ್ತಾನೆ.


ಯೆಹೋವನು ತನ್ನ ಜನರನ್ನು ನಡಿಸುತ್ತಾನೆ. ಕುರಿಗಳನ್ನು ನಡಿಸುವ ಕುರುಬನಂತೆ ಯೆಹೋವನು ತನ್ನ ಭುಜಬಲದಿಂದ ತನ್ನ ಕುರಿಗಳನ್ನು ಒಟ್ಟುಗೂಡಿಸುವನು. ಯೆಹೋವನು ಕುರಿಮರಿಗಳನ್ನು ಎತ್ತಿಕೊಂಡು ಅಪ್ಪಿಕೊಳ್ಳುವನು. ಅದರ ತಾಯಿ ಆತನ ಪಕ್ಕದಲ್ಲೇ ನಡೆಯುವವು.


“ನಾನು ಕುರಿಗಳಿಗಾಗಿ (ಜನರಿಗಾಗಿ) ಚಿಂತಿಸುವ ಕುರುಬನಾಗಿದ್ದೇನೆ. ನನ್ನ ತಂದೆಯು ನನ್ನನ್ನು ತಿಳಿದಿರುವಂತೆ ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ಮತ್ತು ನಾನು ನನ್ನ ತಂದೆಯನ್ನು ತಿಳಿದಿರುವಂತೆ ನನ್ನ ಕುರಿಗಳು ನನ್ನನ್ನು ತಿಳಿದಿವೆ. ಈ ಕುರಿಗಳಿಗೋಸ್ಕರ ನನ್ನ ಜೀವವನ್ನೇ ಕೊಡುತ್ತೇನೆ.


ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.


ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ನೀವು ದಾರಿ ತಪ್ಪಿದ ಕುರಿಗಳಾಗಿದ್ದಿರಿ. ಆದರೆ ಈಗ ನೀವು ನಿಮ್ಮ ಕುರುಬನ ಬಳಿಗೆ ಅಂದರೆ ನಿಮ್ಮ ಆತ್ಮಗಳನ್ನು ಕಾಪಾಡುವಾತನ ಬಳಿಗೆ ಹಿಂತಿರುಗಿ ಬಂದಿರುವಿರಿ.


ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.


ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.


ದೇವರು ತನ್ನ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೊಸ್ಕರ ಕೊಟ್ಟನು. ಆದ್ದರಿಂದ ಈಗ, ದೇವರು ಯೇಸುವಿನೊಂದಿಗೆ ನಮಗೆ ಎಲ್ಲವನ್ನು ಖಂಡಿತವಾಗಿ ಕೊಡುತ್ತಾನೆ.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


ಆಗ ಇಸ್ರೇಲರನ್ನು ಆಳುವಾತನು ಯೆಹೋವನ ಶಕ್ತಿಯಲ್ಲಿಯೂ ತನ್ನ ದೇವರಾದ ಯೆಹೋವನ ಹೆಸರಿನಲ್ಲಿಯೂ ನಿಂತು ತನ್ನ ಮಂದೆಗೆ ಆಹಾರವನ್ನೀಯುವನು. ಆತನ ಮಹತ್ತು ಭೂಮಿಯ ಕಟ್ಟಕಡೆಗೆ ಪ್ರಸರಿಸುವದರಿಂದ ಅವರು ಸಮಾಧಾನದಿಂದ ವಾಸಿಸುವರು.


ಬಳಿಕ ಆತನು ಕುರುಬನಂತೆ ಇಸ್ರೇಲನ್ನು ನಡೆಸಿದನು. ಆತನು ತನ್ನ ಜನರನ್ನು ಕುರಿಗಳಂತೆ ಅರಣ್ಯದಲ್ಲಿ ನಡೆಸಿದನು.


“ಜನಾಂಗಗಳೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಈ ಸಂದೇಶವನ್ನು ಸಮುದ್ರದಡದ ದೂರದೂರದ ಪ್ರದೇಶಗಳಲ್ಲಿ ತಿಳಿಸಿರಿ. ‘ಇಸ್ರೇಲರನ್ನು ಚದರಿಸಿದಾತನು ಅವರನ್ನು ಮತ್ತೆ ಒಟ್ಟುಗೂಡಿಸುವನು. ಆತನು ತನ್ನ ಹಿಂಡನ್ನು ಕುರುಬನಂತೆ ನೋಡಿಕೊಳ್ಳುವನು’ ಎಂದು ಹೇಳಿರಿ.


ನಾವು ನಿನ್ನ ಜನರೂ ನೀನು ಪಾಲಿಸುವ ಮಂದೆಯೂ ಆಗಿದ್ದೇವೆ. ನಾವು ನಿನ್ನನ್ನು ಎಂದೆಂದಿಗೂ ಕೊಂಡಾಡುವೆವು. ನಿನ್ನನ್ನು ಸದಾಕಾಲ ಸ್ತುತಿಸುವೆವು.


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ಯೆಹೋವನಲ್ಲಿ ನಿಮಗಿರಬೇಕಾದ ಭಯಭಕ್ತಿಯನ್ನು ಕಲಿಸಿಕೊಡುವೆನು.


ಹುಲ್ಲುಗಾವಲಿಗೆ ನಾನು ಅವುಗಳನ್ನು ನಡೆಸುವೆನು. ಇಸ್ರೇಲಿನ ಎತ್ತರವಾದ ಬೆಟ್ಟಗಳಲ್ಲಿ ಅವು ಮೇಯುವವು. ಅಲ್ಲಿ ಒಳ್ಳೆಯ ಸ್ಥಳದಲ್ಲಿ ಅವುಗಳು ಮಲಗಿ ಹುಲ್ಲನ್ನು ಮೇಯುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು