ಕೀರ್ತನೆಗಳು 23:4 - ಪರಿಶುದ್ದ ಬೈಬಲ್4 ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ನನ್ನೊಂದಿಗಿರುವುದರಿಂದ ಭಯಪಡುವುದಿಲ್ಲ. ನಿನ್ನ ದೊಣ್ಣೆಯೂ ಊರುಗೋಲೂ ನನ್ನನ್ನು ಸಂತೈಸುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ಹತ್ತಿರವಿರುವದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀವು ನನ್ನೊಂದಿಗಿರುವುದರಿಂದ ನಾನು ಕೇಡಿಗೆ ಹೆದರೆನು; ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ ನನ್ನನ್ನು ಸಂತೈಸುತ್ತವೆ. ಅಧ್ಯಾಯವನ್ನು ನೋಡಿ |
‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.