ಕೀರ್ತನೆಗಳು 24:4 - ಪರಿಶುದ್ದ ಬೈಬಲ್4 ಅವರು ದುಷ್ಕೃತ್ಯಗಳನ್ನು ಮಾಡಿಲ್ಲದವರೂ ಶುದ್ಧ ಹೃದಯವುಳ್ಳವರೂ ನನ್ನ ಹೆಸರಿನಲ್ಲಿ ಮೋಸ ಪ್ರಮಾಣ ಮಾಡದವರೂ ವಿಗ್ರಹಗಳನ್ನು ಆರಾಧಿಸದವರೂ ಆಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅಂಥವನಿರಬೇಕು ಶುದ್ಧಹಸ್ತನು, ಸುಮನಸ್ಕನು I ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯಾವನು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ ಮೋಸಪ್ರಮಾಣಮಾಡದೆ ಶುದ್ಧಹಸ್ತವೂ ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಶುದ್ಧಹಸ್ತಗಳೂ ನಿರ್ಮಲವಾದ ಹೃದಯವೂ ಉಳ್ಳವನಾಗಿದ್ದು; ವಂಚನೆಯಿಂದ ಮುಕ್ತನಾಗಿ, ಮೋಸದಿಂದ ಆಣೆ ಇಡದೆಯೂ ಇರುವವನೇ. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.