ಕೀರ್ತನೆಗಳು 24:5 - ಪರಿಶುದ್ದ ಬೈಬಲ್5 ಅವರನ್ನು ಯೆಹೋವನು ಆಶೀರ್ವದಿಸಿ ಕಾಪಾಡುವನು; ದೇವರು ಅವರನ್ನು ನಿರಪರಾಧಿಗಳೆಂದು ಪ್ರಕಟಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಲಭಿಸುವುದಾತನಿಗೆ ಶುಭ ಪ್ರಭುವಿನಿಂದ I ನೀತಿಯ ಸತ್ಫಲ ರಕ್ಷಕ ದೇವನಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇಂಥವರೇ ಯೆಹೋವ ದೇವರಿಂದ ಆಶೀರ್ವಾದವನ್ನು ಹೊಂದುವರು. ತಮ್ಮ ರಕ್ಷಕ ಆಗಿರುವ ದೇವರಿಂದಲೇ ನಿರ್ದೋಷಿಯಾಗುವರು. ಅಧ್ಯಾಯವನ್ನು ನೋಡಿ |
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.