ಕೀರ್ತನೆಗಳು 24:6 - ಪರಿಶುದ್ದ ಬೈಬಲ್6 ಆತನನ್ನು ಅನುಸರಿಸುವವರು ಇಂಥವರೇ. ಸಹಾಯಕ್ಕಾಗಿ ಯಾಕೋಬನ ದೇವರ ಬಳಿಗೆ ಹೋಗುವವರು ಇಂಥವರೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇಂಥವರೆ ದೇವರ ದರ್ಶನಾಭ್ಯರ್ಥಿಗಳು I ಇಂಥವರೆ ಯಕೋಬ ದೇವನ ಭಕ್ತಾದಿಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇಂಥವರೇ ದೇವರನ್ನು ಹುಡುಕುವ ಸಂತತಿಯು; ಯಾಕೋಬನ ದೇವರೇ, ನಿಮ್ಮನ್ನು ಹುಡುಕುವವರು ಇಂಥವರೇ. ಅಧ್ಯಾಯವನ್ನು ನೋಡಿ |
ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.