ಕೀರ್ತನೆಗಳು 25:12 - ಪರಿಶುದ್ದ ಬೈಬಲ್12 ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಅತ್ಯುತ್ತಮವಾದ ಜೀವಮಾರ್ಗವನ್ನು ತೋರಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವರೋ ಅವರಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಪ್ರಭುವಿನ ಭಯಭಕುತಿಯುಳ್ಳವನಿಗೆ I ಲಭಿಪುದು ಖಚಿತ ಋಜುಮಾರ್ಗದ ಕಲಿಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯಾವನು ಯೆಹೋವನಲ್ಲಿ ಭಯಭಕ್ತಿಯುಳ್ಳವನೋ ಅವನಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯಾವನು ಯೆಹೋವ ದೇವರಿಗೆ ಭಯಪಡುವನೋ, ಅಂಥವನಿಗೆ ಅವರು ಆಯ್ದುಕೊಳ್ಳತಕ್ಕ ಮಾರ್ಗವನ್ನು ಬೋಧಿಸುವರು. ಅಧ್ಯಾಯವನ್ನು ನೋಡಿ |
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.