Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:13 - ಪರಿಶುದ್ದ ಬೈಬಲ್‌

13 ಅವನು ಸುಖದಿಂದಿರುವನು. ಆತನು ವಾಗ್ದಾನ ಮಾಡಿದ ದೇಶವನ್ನು ಅವನ ಮಕ್ಕಳು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ಸುಖದಿಂದಲೇ ಇರುವರು; ಅವರ ಸಂತತಿಯವರು ದೇಶವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಾಳುವನಂಥವನು ಸುಖಸೌಭಾಗ್ಯದಿಂದ I ಬದುಕುವುದವನ ಸಂತತಿ ನಾಡಿನೊಡೆತನದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನು ಸುಖದಿಂದಲೇ ಇರುವನು; ಅವನ ಸಂತತಿಯವರು ದೇಶವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅಂಥವರು ಜೀವಮಾನವೆಲ್ಲಾ ಸಫಲರಾಗಿರುವರು. ಅಂಥವರ ಸಂತಾನವು ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:13
32 ತಿಳಿವುಗಳ ಹೋಲಿಕೆ  

ವಾಗ್ದಾನ ಮಾಡಲ್ಪಟ್ಟ ಭೂಮಿಯನ್ನು ದೀನರು ಪಡೆದುಕೊಳ್ಳುವರು; ಸಮಾಧಾನವನ್ನು ಅನುಭವಿಸುವರು.


ಭಯಭಕ್ತಿಯು ಒಳ್ಳೆಯ ಜೀವನಕ್ಕೆ ನಡೆಸುತ್ತದೆ. ಅದು ಅವನಿಗೆ ತೃಪ್ತಿಯನ್ನೂ ಕೊಡುವುದು; ಕೇಡಿನಿಂದಲೂ ತಪ್ಪಿಸಿ ಕಾಪಾಡುವುದು.


ಆದರೆ ನನಗೆ ವಿಧೇಯನಾಗುವವನು ಕ್ಷೇಮವಾಗಿಯೂ ಸುಖವಾಗಿಯೂ ಬದುಕುವನು. ಅವನು ಅಪಾಯಕ್ಕೆ ಭಯಪಡುವ ಅವಶ್ಯವಿಲ್ಲ.”


ದೀನರು ಧನ್ಯರು. ದೇವರು ವಾಗ್ದಾನ ಮಾಡಿದ ಭೂಮಿಯನ್ನು ಅವರು ಹೊಂದಿಕೊಳ್ಳುವರು.


ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿದ್ದಾನೆ. ಆತನು ರಣಶೂರನು. ನಿನ್ನನ್ನು ರಕ್ಷಿಸಿ ನಿನ್ನ ಮೇಲಿನ ತನ್ನ ಪ್ರೀತಿಯನ್ನು ತೋರ್ಪಡಿಸುವನು. ನಿನ್ನೊಂದಿಗೆ ಎಷ್ಟು ಸಂತೋಷದಲ್ಲಿರುವನೆಂದು ತೋರಿಸುವನು. ನಿನ್ನೊಂದಿಗೆ ನಗಾಡುತ್ತಾ ಹರ್ಷಿಸುವನು.


ಈ ವಾಗ್ದಾನವನ್ನು ನಿಮಗೂ ನಿಮ್ಮ ಮಕ್ಕಳಿಗೂ ಬಹು ದೂರದಲ್ಲಿರುವ ಜನರಿಗೂ ಕೊಡಲಾಗಿದೆ. ನಮ್ಮ ದೇವರಾದ ಪ್ರಭುವು ತನ್ನ ಬಳಿಗೆ ಕರೆಯುವ ಪ್ರತಿಯೊಬ್ಬರಿಗೂ ಈ ವಾಗ್ದಾನವನ್ನು ಕೊಟ್ಟಿದ್ದಾನೆ” ಎಂದು ಹೇಳಿದನು.


ಇನ್ನು ಮುಂದೆ ಜನರು ಬಿಟ್ಟೀಕೆಲಸ ಮಾಡುವದಿಲ್ಲ. ಇನ್ನು ಮುಂದೆ ಮಕ್ಕಳನ್ನು ಹೆರುವಾಗ ಕೇಡಾಗುತ್ತದೆಯೆಂಬ ಭಯವಿರುವುದಿಲ್ಲ. ನನ್ನ ಎಲ್ಲಾ ಜನರು ಮತ್ತು ಅವರ ಮಕ್ಕಳು ಯೆಹೋವನಿಂದ ಆಶೀರ್ವದಿಸಲ್ಪಡುವರು.


ಮನುಷ್ಯರ ಭಯ ಉರುಲಾಗಬಹುದು. ಆದರೆ ಯೆಹೋವನ ಮೇಲಿರುವ ಭರವಸೆ ಕ್ಷೇಮವಾಗಿಡುವುದು.


ನೀತಿವಂತನು ಬೇರೆಯವರಿಗೆ ಉದಾರವಾಗಿ ಕೊಡುವನು. ಅವನ ಮಕ್ಕಳು ಆಶೀರ್ವಾದ ಹೊಂದುವರು.


ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಈ ಜೀವಿತದಲ್ಲಿ ಸಂತೋಷಿಸುತ್ತಾ ಸುದಿನಗಳನ್ನು ನೋಡಲು ಅಪೇಕ್ಷಿಸುವವನು ಕೆಟ್ಟ ಮಾತುಗಳನ್ನಾಡದಿರಲಿ; ಸುಳ್ಳನ್ನು ನುಡಿಯದಿರಲಿ.


ಒಂದೇ ಜನಾಂಗವಾಗುವ ಬಯಕೆಯನ್ನು ನಾನು ಅವರಲ್ಲಿ ಉಂಟುಮಾಡುವೆನು. ಅವರು ತಮ್ಮ ಜೀವಮಾನವೆಲ್ಲಾ ನನ್ನನ್ನು ಆರಾಧಿಸಬೇಕೆಂಬ ಬಯಕೆಯನ್ನು ಹೊಂದಿರುವರು. ಹೌದು, ಅವರ ಬಯಕೆಯೂ ಅವರ ಮಕ್ಕಳ ಬಯಕೆಯೂ ಇದೇ ಆಗಿರುವುದು.


ಅವನ ಸಂತತಿಗಳವರು ಭೂಮಿಯ ಮೇಲೆ ಪ್ರಬಲರಾಗುವರು; ನೀತಿವಂತನ ಸಂತತಿಗಳವರು ಆಶೀರ್ವಾದವನ್ನು ಹೊಂದಿಕೊಳ್ಳುವರು.


ಆತನ ಸೇವಕರ ಸಂತತಿಗಳವರು ಆ ದೇಶವನ್ನು ಪಡೆದುಕೊಳ್ಳುವರು. ಆತನ ಹೆಸರನ್ನು ಪ್ರೀತಿಸುವ ಜನರು ಅಲ್ಲಿ ವಾಸಿಸುವರು.


ನಾವಾದರೋ ದೇವರು ವಾಗ್ದಾನ ಮಾಡಿರುವ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಎದುರುನೋಡುತ್ತಿದ್ದೇವೆ. ನೀತಿಯು ಅವುಗಳಲ್ಲಿ ವಾಸವಾಗಿರುವುದು.


ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ಅನುಗುಣವಾಗಿ ನಿಮ್ಮ ಪ್ರತಿಯೊಂದು ಕೊರತೆಯನ್ನು ನೀಗಿಸುವನು.


ಆಗ ಪ್ರತಿಯೊಂದು ಸುಂದರವೂ ರಮಣೀಯವೂ ಆಗಿರುವುದು. ಬೆಳೆಯು ಸುಭಿಕ್ಷವಾಗಿರುವುದು. ಆಹಾರ ಮತ್ತು ದ್ರಾಕ್ಷಾರಸ ಮಾತ್ರವೇ ಅಲ್ಲ, ಎಲ್ಲಾ ಯೌವನಸ್ಥರೂ ಯೌವನಸ್ಥೆಯರೂ ಹಾಗೆಯೇ ಇರುವರು.


ಬೆನ್ಯಾಮೀನನ ವಿಷಯವಾಗಿ ಮೋಶೆಯು ಹೇಳಿದ್ದೇನೆಂದರೆ: “ಯೆಹೋವನು ಬೆನ್ಯಾಮೀನನನ್ನು ಪ್ರೀತಿಸುತ್ತಾನೆ. ಬೆನ್ಯಾಮೀನನು ಆತನ ಬಳಿಯಲ್ಲಿ ಸುರಕ್ಷಿತವಾಗಿ ವಾಸಮಾಡುತ್ತಾನೆ. ಯೆಹೋವನು ಅವನನ್ನು ಯಾವಾಗಲೂ ಸಂರಕ್ಷಿಸುತ್ತಾನೆ. ಅವನ ಪ್ರಾಂತ್ಯದಲ್ಲಿ ಯೆಹೋವನು ವಾಸಿಸುವನು.”


ಸಧರ್ಮಿಯು ಒಳ್ಳೆಯ ರೀತಿಯಲ್ಲಿ ಜೀವಿಸುತ್ತಾನೆ; ಅವನ ಮಕ್ಕಳಿಗೆ ಆಶೀರ್ವಾದವಾಗುವುದು.


ಮೃಷ್ಟಾನ್ನವನ್ನು ತಿಂದಿರುವವನಂತೆ ತೃಪ್ತನಾಗಿರುವೆನು. ನನ್ನ ಬಾಯಿ ನಿನ್ನನ್ನು ಕೊಂಡಾಡುವುದು.


ದೇವರು ವಾಗ್ದಾನ ಮಾಡಿದ ಭೂಮಿಯನ್ನು ನೀತಿವಂತರು ಪಡೆದುಕೊಂಡು ಅಲ್ಲಿ ಸದಾಕಾಲ ವಾಸಿಸುವರು.


ನೀತಿವಂತರು ಆಶೀರ್ವದಿಸಿದರೆ, ವಾಗ್ದಾನಮಾಡಲ್ಪಟ್ಟ ಭೂಮಿಯನ್ನು ಜನರು ಪಡೆದುಕೊಳ್ಳುವರು. ಆದರೆ ಅವರು ಶಪಿಸಿದರೆ, ಜನರು ನಾಶವಾಗುವರು.


ನಿನ್ನ ಆಲಯದ ಸಮೃದ್ಧಿಯಿಂದ ಅವರು ನವಚೈತನ್ಯವನ್ನು ಪಡೆದುಕೊಳ್ಳುವರು. ನಿನ್ನ ಶ್ರೇಷ್ಠ ನದಿಯಲ್ಲಿ ಕುಡಿಯಲು ಅವರಿಗೆ ಆಸ್ಪದನೀಡು.


ದೇವರೇ, ನೀನು ನಿನ್ನ ಭಕ್ತರಿಗಾಗಿ ಅಮೂಲ್ಯವಾದವುಗಳನ್ನು ಅಡಗಿಸಿಟ್ಟಿರುವೆ. ನಿನ್ನಲ್ಲಿ ಭರವಸವಿಟ್ಟಿರುವ ಜನರಿಗಾಗಿ ಎಲ್ಲರ ಮುಂದೆ ನೀನು ಮಾಡುವ ಒಳ್ಳೆಯ ಕಾರ್ಯಗಳು ಎಷ್ಟೋ ವಿಶೇಷವಾಗಿವೆ.


ದುಷ್ಟರಾದರೋ ನಾಶವಾಗುವರು. ಯೆಹೋವನಲ್ಲಿ ಮೊರೆಯಿಡುವವರಾದರೋ ವಾಗ್ದಾನ ಮಾಡಲ್ಪಟ್ಟ ಭೂಮಿಯನ್ನು ಪಡೆದುಕೊಳ್ಳುವರು.


ಯೆಹೋವನನ್ನೇ ನಿರೀಕ್ಷಿಸಿಕೊಂಡು ಆತನ ಮಾರ್ಗವನ್ನು ಅನುಸರಿಸಿರಿ. ಆಗ ಆತನು ನಿಮ್ಮನ್ನು ಜಯಶಾಲಿಗಳನ್ನಾಗಿ ಮಾಡುವನು; ದೇವರು ವಾಗ್ದಾನ ಮಾಡಿದ ಭೂಮಿಯನ್ನು ನೀವು ಪಡೆದುಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು