Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:2 - ಪರಿಶುದ್ದ ಬೈಬಲ್‌

2 ನನ್ನ ದೇವರೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ. ವೈರಿಗಳು ನನ್ನನ್ನು ನೋಡಿ ಗೇಲಿ ಮಾಡದಂತಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಶತ್ರುಗಾಗದಿರಲಿ ಸಡಗರ I ನನಗೊದಗದಿರಲಿ ಮುಜುಗರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನಗೆ ಆಶಾಭಂಗಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ದೇವರೇ, ನಾನು ನಿಮ್ಮಲ್ಲಿ ಭರವಸೆಯಿಟ್ಟಿದ್ದೇನೆ; ನಾನು ನಾಚಿಕೆಪಡದಂತೆ ಮಾಡಿರಿ; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:2
32 ತಿಳಿವುಗಳ ಹೋಲಿಕೆ  

ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಆತನಲ್ಲಿ ನಂಬಿಕೆಯಿಡುವ ಯಾವ ವ್ಯಕ್ತಿಯೂ ನಾಚಿಕೆಗೆ ಗುರಿಯಾಗುವುದೇ ಇಲ್ಲ.”


ನನಗೆ ಕೇಡುಮಾಡಲು ವೈರಿಗೆ ನೀನು ಅವಕಾಶ ಕೊಡದಿದ್ದರೆ, ನೀನು ನನ್ನನ್ನು ಸ್ವೀಕರಿಸಿಕೊಂಡಿರುವೆ ಎಂದು ತಿಳಿದುಕೊಳ್ಳುವೆನು.


ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ; ಎಂದಿಗೂ ಆಶಾಭಂಗಪಡಿಸಬೇಡ.


ನಮ್ಮ ಈ ನಿರೀಕ್ಷೆಯು ನಮ್ಮನ್ನು ಎಂದಿಗೂ ನಿರಾಶರನ್ನಾಗಿ ಮಾಡುವುದಿಲ್ಲ. ಅದು ಎಂದಿಗೂ ವ್ಯರ್ಥವಾಗುವುದಿಲ್ಲ. ಏಕೆಂದರೆ ದೇವರು ನಮಗೆ ಉಡುಗೊರೆಯಾಗಿ ಕೊಟ್ಟಿರುವ ಪವಿತ್ರಾತ್ಮನ ಮೂಲಕ ತನ್ನ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾನೆ.


ನಮ್ಮ ಪೂರ್ವಿಕರು ನಿನ್ನಲ್ಲಿ ಮೊರೆಯಿಟ್ಟಾಗ ಅವರನ್ನು ಶತ್ರುಗಳಿಂದ ಬಿಡಿಸಿದೆ. ನಿನ್ನಲ್ಲಿ ಭರವಸವಿಟ್ಟಿದ್ದ ಅವರಿಗೆ ನಿರಾಶೆಯಾಗಲಿಲ್ಲ.


ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ನೀನು ನನಗೆ ಬೇಕೇಬೇಕು. ನನ್ನನ್ನು ಬೆನ್ನಟ್ಟುತ್ತಿರುವ ಜನರಿಂದ ನನ್ನನ್ನು ರಕ್ಷಿಸು. ಅವರು ನನಗಿಂತ ಬಹು ಬಲಿಷ್ಠರಾಗಿದ್ದಾರೆ.


ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ. ಕರುಣೆತೋರಿ ನನ್ನನ್ನು ರಕ್ಷಿಸು.


ನಾನು ಈ ಪಟ್ಟಣವನ್ನು ರಕ್ಷಿಸಿ ಕಾಪಾಡುವೆನು. ನನಗೋಸ್ಕರವಾಗಿಯೇ ಇದನ್ನು ಮಾಡುವೆನು. ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಮಾಡುವೆನು.”


ಯೆಹೋವನು ಎಷ್ಟು ಒಳ್ಳೆಯವನೆಂಬುದನ್ನು ಅನುಭವದಿಂದಲೇ ತಿಳಿದುಕೊಳ್ಳಿರಿ. ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಭಾಗ್ಯವಂತರು.


ಯೆಹೋವನೇ, ನಿನ್ನಲ್ಲಿ ಭರವಸವಿಟ್ಟವರಿಗೆ ನೀನು ನಿಜವಾದ ಸಮಾಧಾನವನ್ನು ಅನುಗ್ರಹಿಸುವೆ.


ಯೆಹೋವನೇ, ದುಷ್ಟಜನರು ಎಷ್ಟರವರೆಗೆ ಪರಿಹಾಸ್ಯ ಮಾಡುವರು? ಇನ್ನೆಷ್ಟರವರೆಗೆ ಪರಿಹಾಸ್ಯ ಮಾಡುವರು?


ಪವಿತ್ರ ಗ್ರಂಥವು ಹೇಳುವುದೇನೆಂದರೆ, “ನಾನು ಅಮೂಲ್ಯವಾದ ಮೂಲೆಗಲ್ಲನ್ನು ಆರಿಸಿದ್ದೇನೆ. ನಾನು ಆ ಕಲ್ಲನ್ನು ಚಿಯೋನಿನಲ್ಲಿ ಇಟ್ಟಿರುವೆನು; ಆತನನ್ನು ನಂಬುವವನು ಎಂದಿಗೂ ಆಶಾಭಂಗಪಡುವುದಿಲ್ಲ”


ನಿನ್ನ ಮಕ್ಕಳಿಗೆ ಅರಸರು ಉಪಾಧ್ಯಾಯರಾಗಿರುವರು. ರಾಜಪುತ್ರಿಯರು ನಿನ್ನ ಮಕ್ಕಳನ್ನು ನೋಡಿಕೊಳ್ಳುವರು. ಆ ಅರಸರೂ ರಾಜಪುತ್ರಿಯರೂ ನಿನಗೆ ಅಡ್ಡಬೀಳುವರು. ನಿನ್ನ ಕಾಲಿನ ಧೂಳಿಗೆ ಮುತ್ತು ಕೊಡುವರು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ. ನನ್ನ ಮೇಲೆ ಭರವಸವಿಡುವವನು ಆಶಾಭಂಗಪಡನು ಎಂದು ಆಗ ನೀನು ತಿಳಿದುಕೊಳ್ಳುವಿ.”


ಆದರೆ ನೀನು ನಮ್ಮ ದೇವರಾದ ಯೆಹೋವನು. ಆದ್ದರಿಂದ ದಯಮಾಡಿ ನಮ್ಮನ್ನು ಅಶ್ಶೂರದ ಅರಸನ ಕೈಯಿಂದ ರಕ್ಷಿಸು. ಆಗ ಭೂಮಿಯ ಎಲ್ಲಾ ರಾಜ್ಯಗಳೂ ಯೆಹೋವನಾದ ನೀನೇ ದೇವರೆಂದು ತಿಳಿದುಕೊಳ್ಳುವವು.”


ಯೆಹೋವನು ನೀತಿವಂತರಿಗೆ ಸಹಾಯಕನಾಗಿ ಅವರನ್ನು ರಕ್ಷಿಸುತ್ತಾನೆ. ನೀತಿವಂತರು ಆತನನ್ನು ಆಶ್ರಯಿಸಿಕೊಂಡಾಗ ಆತನು ಅವರನ್ನು ದುಷ್ಟರಿಂದ ತಪ್ಪಿಸಿ ಕಾಪಾಡುವನು.


ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣಾಬಲವೂ ನನ್ನ ದುರ್ಗವೂ ಆಗಿದ್ದಾನೆ.


ನನ್ನ ದೇವರಾದ ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿರುವೆ. ನನ್ನನ್ನು ಹಿಂದಟ್ಟುತ್ತಿರುವವರಿಂದ ನನ್ನನ್ನು ತಪ್ಪಿಸಿ ಕಾಪಾಡು!


“ಯೆಹೋವನಿಗೆ ಮೊರೆಯಿಡು, ಆತನು ನಿನ್ನನ್ನು ರಕ್ಷಿಸಬಹುದು. ಆತನು ನಿನ್ನನ್ನು ಬಹಳವಾಗಿ ಇಷ್ಟಪಡುವುದಾದರೆ ನಿನ್ನನ್ನು ಖಂಡಿತವಾಗಿ ರಕ್ಷಿಸುವನು” ಎಂದು ಹೇಳುತ್ತಾರೆ.


ನನ್ನ ದೇವರೇ, ನನ್ನ ದೇವರೇ! ಯಾಕೆ ನನ್ನನ್ನು ತೊರೆದಿರುವೆ? ನನ್ನನ್ನು ರಕ್ಷಿಸದೆ ಯಾಕೆ ಬಹುದೂರವಾಗಿರುವೆ! ಸಹಾಯಕ್ಕಾಗಿ ನಾನು ಗೋಳಾಡುತ್ತಿದ್ದರೂ ಕೇಳದೆ ಯಾಕೆ ಬಹದೂರವಾಗಿರುವೆ?


ನೀವು ಅವುಗಳನ್ನು ಗಾಳಿಗೆ ತೂರಿಬಿಡುವಿರಿ. ಗಾಳಿಯು ಅವುಗಳನ್ನು ಹಾರಿಸಿ ಚದರಿಸಿಬಿಡುವುದು. ಆಗ ನೀವು ಯೆಹೋವನಲ್ಲಿ ಸಂತಸಪಡುವಿರಿ. ಇಸ್ರೇಲರ ಪರಿಶುದ್ಧನಲ್ಲಿ ಹೆಚ್ಚಳಪಡುವಿರಿ.


“ಯೆಹೂದದ ಅರಸನಾದ ಹಿಜ್ಕೀಯನಿಗೆ ನೀವು ಹೀಗೆ ಹೇಳಬೇಕು: ‘ನೀನು ನಂಬುವ ದೇವರಿಂದ ನೀನು ಮೋಸ ಹೋಗಬೇಡ. “ಜೆರುಸಲೇಮ್ ಅಶ್ಶೂರದ ಅರಸನ ಕೈಯಿಂದ ಸೋಲಿಸಲ್ಪಡಲು ದೇವರು ಅವಕಾಶ ಕೊಡುವುದಿಲ್ಲ” ಎಂದು ಹೇಳಬೇಡ.


ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುವನು: “ಚೀಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು, ಇದು ಬಹು ಅಮೂಲ್ಯವಾದ ಕಲ್ಲು. ಈ ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಆ ಕಲ್ಲಿನ ಮೇಲೆ ಭರವಸವಿಡುವ ಯಾವನು ಆಶಾಭಂಗಪಡುವುದಿಲ್ಲ.


ದೇವರೇ, ನನ್ನನ್ನು ಕರುಣಿಸು; ವೈರಿಗಳು ನನ್ನ ಮೇಲೆ ಆಕ್ರಮಣಮಾಡಿದ್ದಾರೆ. ಅವರು ಸತತವಾಗಿ ನನ್ನನ್ನು ಬೆನ್ನಟ್ಟಿ ಹೋರಾಡುತ್ತಿದ್ದಾರೆ.


ಇಸ್ರೇಲಿನ ಜನರು ಸೋತುಹೋದರು. ಯೆಹೂದದ ಜನರಿಗೆ ಜಯ ದೊರಕಿತು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಮೇಲೆ ಭರವಸವನ್ನಿಟ್ಟಿದರು.


ನಾನಂತೂ ನಿನ್ನ ಶಾಶ್ವತವಾದ ಪ್ರೀತಿಯಲ್ಲಿ ಭರವಸೆಯಿಟ್ಟಿದ್ದೇನೆ. ನಿನ್ನ ರಕ್ಷಣೆಯ ನಿಮಿತ್ತ ನನ್ನ ಹೃದಯವು ಹರ್ಷಿಸುವುದು.


ನನಗೆ ಕಿವಿಗೊಡು. ಬೇಗನೆ ಬಂದು, ನನ್ನನ್ನು ರಕ್ಷಿಸು. ನನಗೆ ಬಂಡೆಯೂ ನನ್ನ ಆಶ್ರಯಸ್ಥಾನವೂ ಕೋಟೆಯೂ ಆಗಿದ್ದು ನನ್ನನ್ನು ಕಾಪಾಡು!


ನನ್ನ ಜೀವವು ನಿನ್ನ ಕೈಯಲ್ಲಿದೆ. ವೈರಿಗಳಿಂದ ನನ್ನನ್ನು ರಕ್ಷಿಸು; ನನ್ನನ್ನು ಅಟ್ಟಿಸಿಕೊಂಡು ಬರುತ್ತಿರುವ ಜನರಿಂದ ನನ್ನನ್ನು ರಕ್ಷಿಸು.


ನಾನು ಯೆಹೋವನಿಗೆ, “ನೀನೇ ನನ್ನ ಆಶ್ರಯಸ್ಥಾನವೂ ನನ್ನ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ” ಎಂದು ಹೇಳುವೆನು.


ಜನರು ನನ್ನನ್ನು ಹಿಂಸಿಸುತ್ತಿದ್ದಾರೆ. ಆ ಜನರು ಲಜ್ಜೆಪಡುವಂತೆ ಮಾಡು. ನನ್ನನ್ನು ನಿರಾಶೆಗೊಳಿಸಬೇಡ. ಆ ಜನರಿಗೆ ಭೀತಿಯುಂಟಾಗಲಿ, ಆದರೆ ನನಗೆ ಭಯವಾಗುವಂತೆ ಮಾಡಬೇಡ. ನನ್ನ ವೈರಿಗಳಿಗೆ ಭಯಂಕರವಾದ ವಿನಾಶದ ದಿನವು ಬರುವಂತೆ ಮಾಡು. ಅವರನ್ನು ಮುರಿದುಬಿಡು, ಮತ್ತೆಮತ್ತೆ ಮುರಿದುಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು