Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:5 - ಪರಿಶುದ್ದ ಬೈಬಲ್‌

5 ನನಗೆ ಮಾರ್ಗದರ್ಶನ ನೀಡು; ನಿನ್ನ ಸತ್ಯಗಳನ್ನು ನನಗೆ ಉಪದೇಶಿಸು. ನೀನೇ ನನ್ನ ದೇವರು, ನೀನೇ ನನ್ನ ರಕ್ಷಕ. ಹಗಲೆಲ್ಲಾ ನಿನ್ನಲ್ಲಿ ಭರವಸವಿಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸನ್ಮಾರ್ಗದಲಿ ಮುನ್ನಡೆಸೆನ್ನ ದೇವಾ, ಮುಕ್ತಿದಾತ I ಕಲಿಸೆನಗೆ, ನಿನಗಾಗಿ ಕಾದಿರುವೆ ಸತತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡಿಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ಸತ್ಯದಲ್ಲಿ ಮಾರ್ಗದರ್ಶನ ನೀಡಿ ನನಗೆ ಬೋಧಿಸಿರಿ; ಏಕೆಂದರೆ ನೀವು ನನ್ನ ರಕ್ಷಕ ಆಗಿರುವ ದೇವರಾಗಿದ್ದೀರಿ; ನಿಮ್ಮನ್ನು ನಾನು ದಿನವೆಲ್ಲಾ ನಿರೀಕ್ಷಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:5
36 ತಿಳಿವುಗಳ ಹೋಲಿಕೆ  

ನನಗೆ ಕಿವಿಗೊಡುವವನು ಧನ್ಯನಾಗಿದ್ದಾನೆ. ಅವನು ಪ್ರತಿದಿನ ನನ್ನ ಮನೆಬಾಗಿಲುಗಳ ಬಳಿಯಲ್ಲೂ ನನ್ನ ಬಾಗಿಲಿನ ನಿಲುವುಗಳ ಬಳಿಯಲ್ಲೂ ಕಾದುಕೊಂಡಿರುತ್ತಾನೆ.


ಯೆಹೋವನ ಒಡಂಬಡಿಕೆಯನ್ನೂ ವಾಗ್ದಾನಗಳನ್ನೂ ಅನುಸರಿಸುವ ಜನರಿಗೆ ಆತನ ಮಾರ್ಗಗಳೆಲ್ಲ ಕರುಣೆಯುಳ್ಳವೂ ಸತ್ಯವೂ ಆಗಿವೆ.


ಯೆಹೋವನು ನಿಮಗೆ ಕರುಣೆ ತೋರಿಸಲು ಇಷ್ಟಪಡುತ್ತಾನೆ. ಆತನು ನಿಮ್ಮನ್ನು ಎದುರು ನೋಡುತ್ತಿದ್ದಾನೆ. ಆತನು ಎದ್ದು ನಿಮ್ಮನ್ನು ಸಂತೈಸಲು ಬಯಸುತ್ತಾನೆ. ದೇವರಾದ ಯೆಹೋವನು ನ್ಯಾಯವಂತನಾಗಿದ್ದಾನೆ. ಆತನ ಸಹಾಯವನ್ನು ನಿರೀಕ್ಷಿಸುವವರೆಲ್ಲರೂ ಆಶೀರ್ವದಿಸಲ್ಪಡುವರು.


ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.


ಆದರೆ ಆ ಸಹಾಯಕನು ನಿಮಗೆ ಪ್ರತಿಯೊಂದನ್ನೂ ಉಪದೇಶಿಸುವನು. ನಾನು ನಿಮಗೆ ಹೇಳಿದ ಸಂಗತಿಗಳನ್ನೆಲ್ಲಾ ಆ ಸಹಾಯಕನು ನಿಮ್ಮ ನೆನಪಿಗೆ ತರುವನು. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪವಿತ್ರಾತ್ಮನೇ ಆ ಸಹಾಯಕನು.


ಆದರೆ ಸತ್ಯದ ಆತ್ಮನು ಬಂದಾಗ, ಆತನು ನಿಮ್ಮನ್ನು ಸಕಲ ವಿಷಯದಲ್ಲಿಯೂ ಸತ್ಯಕ್ಕೆ ನಡೆಸುವನು. ಸತ್ಯದ ಆತ್ಮನು ಹೇಳುವುದು ಆತನ ಸ್ವಂತ ಮಾತುಗಳಲ್ಲ. ತಾನು ಕೇಳಿದ್ದನ್ನು ಮಾತ್ರ ಆತನು ಹೇಳುತ್ತಾನೆ. ಸಂಭವಿಸಲಿರುವ ಸಂಗತಿಗಳನ್ನು ಆತನು ನಿಮಗೆ ತಿಳಿಸುತ್ತಾನೆ.


ಯೆಹೋವ ದೇವರೇ, ನೀನೇ ನನ್ನ ರಕ್ಷಕನು. ಹಗಲಿರುಳು ನಿನಗೆ ಪ್ರಾರ್ಥಿಸುತ್ತಿದ್ದೇನೆ.


ನಮ್ಮ ರಕ್ಷಕನಾದ ದೇವರೇ, ನಮಗೆ ಸಹಾಯಮಾಡು! ನಿನ್ನ ಹೆಸರಿನ ಘನತೆಗಾಗಿ ನಮಗೆ ಸಹಾಯಮಾಡು! ನಮ್ಮನ್ನು ರಕ್ಷಿಸಿ ನಿನ್ನ ಹೆಸರಿನ ಘನತೆಗೋಸ್ಕರ ನಮ್ಮ ಪಾಪಗಳನ್ನು ಅಳಿಸಿಬಿಡು.


ಅವರು ಬುದ್ಧಿವಂತರಾಗುವಂತೆ ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಮನ್ನವನ್ನು ಅವರಿಗೆ ಆಹಾರವಾಗಿ ಕೊಟ್ಟೆ. ಅವರು ಬಾಯಾರಿದಾಗ ನೀರು ಕೊಟ್ಟೆ.


ಕ್ರಿಸ್ತನು ನಿಮಗೆ ವಿಶೇಷವಾದ ವರವನ್ನು ದಯಪಾಲಿಸಿರುವನು. ಅದು ನಿಮ್ಮಲ್ಲಿ ಇನ್ನೂ ಇದೆ. ಆದ್ದರಿಂದ ನಿಮಗೆ ಯಾವ ಉಪದೇಶಕರ ಅಗತ್ಯವೂ ಇಲ್ಲ. ಆತನು ನಿಮಗೆ ಕೊಟ್ಟಿರುವ ವರವು ನಿಮಗೆ ಎಲ್ಲವನ್ನೂ ಉಪದೇಶಿಸುತ್ತದೆ. ಅದು ನಿಜವಾದುದು, ಸುಳ್ಳಲ್ಲ. ಆದ್ದರಿಂದ ಅದರ ಉಪದೇಶಕ್ಕನುಸಾರವಾಗಿ ನೀವು ಆತನಲ್ಲಿ ನೆಲೆಗೊಂಡಿರಿ.


ಯಾರು ತಮ್ಮನ್ನು ದೇವರಾತ್ಮನ ನಡೆಸುವಿಕೆಗೆ ಒಪ್ಪಿಸಿಕೊಡುತ್ತಾರೊ ಅವರೇ ದೇವರ ಮಕ್ಕಳಾಗಿದ್ದಾರೆ.


ದೇವಜನರು ದೇವರಿಗೆ ಹಗಲಿರುಳು ಮೊರೆಯಿಡಬೇಕು. ದೇವರು ತನ್ನ ಜನರಿಗೆ ಸರಿಯಾದದ್ದನ್ನೇ ಯಾವಾಗಲೂ ಕೊಡುತ್ತಾನೆ. ತನ್ನ ಜನರಿಗೆ ಉತ್ತರ ಕೊಡುವುದರಲ್ಲಿ ದೇವರು ತಡಮಾಡುವುದಿಲ್ಲ!


ಜನರಿಗೆ ಹಸಿವೆಯಾಗದು, ಬಾಯಾರಿಕೆಯಾಗದು. ಸೂರ್ಯನ ಉರಿ ಬಿಸಿಲಾಗಲಿ ಗಾಳಿಯಾಗಲಿ ಅವರಿಗೆ ಹಾನಿಮಾಡದು. ಯಾಕೆಂದರೆ ದೇವರು ತಾನೇ ಅವರನ್ನು ಸಂತೈಸುವನು, ಅವರನ್ನು ಬುಗ್ಗೆಗಳ ಬಳಿಗೆ ನಡಿಸುವನು.


ಜ್ಞಾನದ ನಿರ್ಧಾರಗಳನ್ನು ಮಾಡಲು ನನಗೆ ಜ್ಞಾನವನ್ನು ಕೊಡು. ನಾನು ನಿನ್ನ ಆಜ್ಞೆಗಳಲ್ಲಿ ಭರವಸವಿಟ್ಟಿರುವೆ.


ಅವರು ನೆಲಸತಕ್ಕ ಪಟ್ಟಣಕ್ಕೆ ದೇವರು ಅವರನ್ನು ನೇರವಾಗಿ ನಡೆಸಿದನು.


ಅವರು ಹಿಂದೆಂದೂ ತಿಳಿಯದ ರೀತಿಯಲ್ಲಿ ನಾನು ಕುರುಡರನ್ನು ನಡೆಸುವೆನು. ಕುರುಡರು ಹೋಗಿರದ ಸ್ಥಳಕ್ಕೆ ನಾನು ಅವರನ್ನು ನಡಿಸುವೆನು. ನಾನು ಅವರಿಗಾಗಿ ಕತ್ತಲೆಯನ್ನು ಬೆಳಕಾಗಿ ಮಾರ್ಪಡಿಸುವೆನು. ನಾನು ಕೊರಕಲು ನೆಲವನ್ನು ಸಮತಟ್ಟಾಗಿ ಮಾಡುವೆನು. ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ನನ್ನ ಜನರನ್ನು ನಾನು ಎಂದಿಗೂ ತೊರೆಯುವದಿಲ್ಲ.


ಆ ಜನರು ಹಿಂತಿರುಗಿ ಬರುವಾಗ ಅಳುತ್ತಿರುವರು. ಆದರೆ ನಾನು ಅವರಿಗೆ ದಾರಿತೋರಿಸುವೆನು, ಸಮಾಧಾನಪಡಿಸುವೆನು. ನಾನು ಅವರನ್ನು ನದಿ ದಾಟಿಸಿಕೊಂಡು ಬರುವೆನು. ಅವರು ಎಡವದಂತೆ ಸಮವಾದ ಮಾರ್ಗದಲ್ಲಿ ನಡೆಸಿಕೊಂಡು ಬರುವೆನು. ನಾನು ಇಸ್ರೇಲಿನ ತಂದೆ; ಎಫ್ರಾಯೀಮ್ ನನ್ನ ಚೊಚ್ಚಲ ಮಗ. ಆದ್ದರಿಂದಲೇ ನಾನು ಅವರನ್ನು ನಡೆಸಿಕೊಂಡು ಬರುವೆನು.


ನಿನ್ನ ಮಕ್ಕಳು ದೇವರನ್ನು ಅನುಸರಿಸುವರು. ಆತನು ಅವರಿಗೆ ಬೋಧಿಸುವನು. ನಿನ್ನ ಮಕ್ಕಳಿಗೆ ನಿಜವಾದ ಶಾಂತಿ ಇರುವದು.


ಆ ಸಮಯದಲ್ಲಿ ಅಲ್ಲಿ ಮಾರ್ಗವಿರುವದು. ಆ ಹೆದ್ದಾರಿಯು “ಪರಿಶುದ್ಧ” ಮಾರ್ಗವೆಂದು ಕರೆಯಲ್ಪಡುವದು. ದುಷ್ಟಜನರಿಗೆ ಆ ಮಾರ್ಗದಲ್ಲಿ ನಡೆಯಲು ಅನುಮತಿ ಇರುವದಿಲ್ಲ. ಮೂರ್ಖರು ಆ ಮಾರ್ಗದಲ್ಲಿ ನಡೆಯರು. ಆ ಮಾರ್ಗದಲ್ಲಿ ಒಳ್ಳೆಯ ಜನರು ಮಾತ್ರ ನಡೆಯುವರು.


ಕೆಡುಕರ ಬಗ್ಗೆ ಹೊಟ್ಟೆಕಿಚ್ಚುಪಡಬೇಡ. ಆದರೆ ಯೆಹೋವನಲ್ಲಿ ಭಯಭಕ್ತಿಯಿಂದಿರಲು ನಿನ್ನಿಂದಾದಷ್ಟು ಪ್ರಯತ್ನಿಸು.


ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ; ದಿನವೆಲ್ಲಾ ಅವುಗಳನ್ನೇ ಧ್ಯಾನಿಸುವೆನು.


‘ದೇವರು ಎಲ್ಲಾ ಜನರಿಗೆ ಉಪದೇಶಿಸುವನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಜನರು ತಂದೆಗೆ ಕಿವಿಗೊಟ್ಟು ಆತನಿಂದ ಕಲಿತುಕೊಳ್ಳುವರು. ಆ ಜನರು ನನ್ನ ಬಳಿಗೆ ಬರುವರು.


ನನ್ನ ಯೆಹೋವನೇ, ನನಗೆ ಕರುಣೆತೋರು. ನಾನು ದಿನವೆಲ್ಲಾ ನಿನಗೆ ಪ್ರಾರ್ಥಿಸುತ್ತಿದ್ದೇನೆ.


ಅವರನ್ನು ಯೆಹೋವನು ಆಶೀರ್ವದಿಸಿ ಕಾಪಾಡುವನು; ದೇವರು ಅವರನ್ನು ನಿರಪರಾಧಿಗಳೆಂದು ಪ್ರಕಟಿಸುವನು.


ನನ್ನ ದೇವರೇ, ಹಗಲಿನಲ್ಲಿ ನಾನು ನಿನ್ನನ್ನು ಕೂಗಿಕೊಂಡೆನು, ಆದರೂ ನೀನು ನನಗೆ ಉತ್ತರಿಸಲಿಲ್ಲ. ರಾತ್ರಿಯಲ್ಲೂ ನಿನ್ನನ್ನು ಕೂಗಿಕೊಳ್ಳುತ್ತಲೇ ಇದ್ದೆನು.


ಯೆಹೋವನೇ, ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು, ಆಗ ಅವುಗಳನ್ನು ಅನುಸರಿಸುವೆನು.


ನನ್ನ ಜೀವಿತದ ಬಗ್ಗೆ ನಿನ್ನೊಂದಿಗೆ ಹೇಳಿಕೊಂಡೆ. ಆಗ ನೀನು ನನಗೆ ಉತ್ತರಿಸಿದೆ. ಈಗ ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.


“ಇಗೋ, ದೇವರು ತನ್ನ ಶಕ್ತಿಯಿಂದ ಮಹಾಕಾರ್ಯವನ್ನು ಮಾಡುವನು! ಆತನು ಎಲ್ಲರಿಗೂ ಅತ್ಯಂತ ದೊಡ್ಡ ಉಪದೇಶಕನಾಗಿದ್ದಾನೆ.


ಆತನೇ ನಮ್ಮ ದೇವರು. ನಮ್ಮನ್ನು ರಕ್ಷಿಸುವ ದೇವರು ಆತನೇ. ನಮ್ಮ ದೇವರಾದ ಯೆಹೋವನು ನಮ್ಮನ್ನು ಮರಣದಿಂದ ರಕ್ಷಿಸುವನು.


ಯೆಹೋವನು ಒಳ್ಳೆಯವನೂ ಸತ್ಯಸ್ವರೂಪನೂ ಆಗಿದ್ದಾನೆ. ಆತನು ಪಾಪಿಗಳಿಗೆ ಜೀವಮಾರ್ಗವನ್ನು ಬೋಧಿಸುವನು.


“ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಗಾಗಿ ನಾನು ಕಾಯುತ್ತಿದ್ದೇನೆ.”


ನಾನು ಸಹಾಯಕ್ಕಾಗಿ ಯೆಹೋವನ ಕಡೆಗೆ ನೋಡುತ್ತೇನೆ. ದೇವರ ರಕ್ಷಣೆಗಾಗಿ ನಿರೀಕ್ಷಿಸುತ್ತೇನೆ. ನನ್ನ ದೇವರು ನನಗೆ ಕಿವಿಗೊಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು