ಕೀರ್ತನೆಗಳು 25:6 - ಪರಿಶುದ್ದ ಬೈಬಲ್6 ಯೆಹೋವನೇ, ನನಗೆ ಕರುಣೆ ತೋರಬೇಕೆಂಬುದನ್ನು ಜ್ಞಾಪಿಸಿಕೊ. ನಿನ್ನ ಶಾಶ್ವತವಾದ ಪ್ರೀತಿಯನ್ನು ನನಗೆ ತೋರಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೆನೆಸಿಕೋ ಪ್ರಭು, ನಿನ್ನ ನಿರಂತರ ಕರುಣೆಯನು I ಆದಿಯಿಂದ ನೀ ತೋರಿದಚಲ ಪ್ರೀತಿಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೋವ ದೇವರೇ, ಆದಿಯಿಂದಿರುವ ನಿಮ್ಮ ಅನುಕಂಪವನ್ನೂ ನಿಮ್ಮ ಪ್ರೀತಿಯನ್ನೂ, ಕರುಣೆಯನ್ನೂ ಜ್ಞಾಪಕಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿ |
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.