Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:7 - ಪರಿಶುದ್ದ ಬೈಬಲ್‌

7 ನಾನು ಯೌವನಸ್ಥನಾಗಿದ್ದಾಗ ಮಾಡಿದ ಪಾಪಗಳನ್ನಾಗಲಿ ಕೆಟ್ಟಕಾರ್ಯಗಳನ್ನಾಗಲಿ ಜ್ಞಾಪಿಸಿಕೊಳ್ಳಬೇಡ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿನ ನಿಮಿತ್ತ ನನ್ನನ್ನು ಪ್ರೀತಿಯಿಂದ ಜ್ಞಾಪಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೌವನದೆನ್ನ ಪಾಪಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ I ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ದ್ರೋಹಗಳನ್ನೂ ಮನಸ್ಸಿನಲ್ಲಿಡದೆ ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರೇ, ನನ್ನ ಯೌವನದ ಪಾಪಗಳನ್ನೂ, ನನ್ನ ತಿರುಗಿ ಬೀಳುವಿಕೆಗಳನ್ನೂ ಜ್ಞಾಪಕ ಮಾಡಿಕೊಳ್ಳಬೇಡಿರಿ. ನೀವು ಒಳ್ಳೆಯವರಾಗಿರುವುದರಿಂದ ನಿಮ್ಮ ಪ್ರೀತಿಯ ಪ್ರಕಾರ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:7
25 ತಿಳಿವುಗಳ ಹೋಲಿಕೆ  

“ನಿಮ್ಮ ಪಾಪಗಳನ್ನೆಲ್ಲಾ ಅಳಿಸಿ ಹಾಕುವಾತನು ನಾನೇ. ನಾನು ಇದನ್ನು ನನಗೋಸ್ಕರವಾಗಿ ಮಾಡುತ್ತೇನೆ. ನಾನು ನಿಮ್ಮ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ಇಗೋ, ನನ್ನ ಸಂಕಟವೆಲ್ಲಾ ಹೊರಟುಹೋಯಿತು. ನನಗೀಗ ಸಮಾಧಾನವಿದೆ. ನೀನು ನನ್ನನ್ನು ಬಹಳವಾಗಿ ಪ್ರೀತಿಸುವದರಿಂದ ನನ್ನ ಶರೀರವು ಸಮಾಧಿಯಲ್ಲಿ ಕೊಳೆಯುವಂತೆ ಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ. ನನ್ನ ಪಾಪಗಳನ್ನು ಬಹುದೂರ ಬಿಸಾಡಿದೆ.


ದೇವರೇ, ನೀನು ನನಗೆ ಕಠಿಣವಾದ ದಂಡನೆಗಳನ್ನು ವಿಧಿಸಿರುವೆ. ನನ್ನ ಯೌವನದ ಪಾಪಗಳ ದೆಸೆಯಿಂದ ನನ್ನನ್ನು ಸಂಕಟಪಡಿಸಿರುವೆ.


ನಾವು ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ. ನಮ್ಮ ನಾಚಿಕೆಯು ಕಂಬಳಿಯು ಹೊದಿಸಿದಂತೆ ನಮ್ಮನ್ನು ಮುಚ್ಚಿಬಿಡಲಿ. ನಾವು ನಮ್ಮ ದೇವರಾದ ಯೆಹೋವನ ವಿಷಯದಲ್ಲಿ ಪಾಪಮಾಡಿದ್ದೇವೆ. ನಾವು ಮತ್ತು ನಮ್ಮ ಪೂರ್ವಿಕರು ಪಾಪಮಾಡಿದ್ದೇವೆ. ನಮ್ಮ ಬಾಲ್ಯದಿಂದ ಇಂದಿನವರೆಗೆ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ’” ಎಂದು ಮೊರೆಯಿಟ್ಟರು.


ಪ್ರೀತಿಸ್ವರೂಪನಾದ ದೇವರೇ, ನನಗೆ ಕರುಣೆತೋರು; ಕರುಣಾನಿಧಿಯೇ, ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.


ಅವರು ನನ್ನ ವಿರುದ್ಧವಾಗಿ ಮಾಡುವ ಎಲ್ಲಾ ಕೆಟ್ಟಕಾರ್ಯಗಳನ್ನು ಕ್ಷಮಿಸುವೆನು; ಅವರ ಪಾಪಗಳನ್ನು ನೆನಪಿಗೆ ತಂದುಕೊಳ್ಳುವುದಿಲ್ಲ.”


ನನ್ನ ದೇವರಾದ ಯೆಹೋವನೇ, ನನಗೆ ಸಹಾಯಮಾಡು! ನಿನ್ನ ಶಾಶ್ವತವಾದ ಪ್ರೀತಿಯಿಂದ ನನ್ನನ್ನು ರಕ್ಷಿಸು.


ನಮ್ಮ ಪೂರ್ವಿಕರು ಮಾಡಿದ ಪಾಪಕ್ಕೆ ಬರಬೇಕಾದ ದಂಡನೆಯನ್ನು ನಮ್ಮ ಮೇಲೆ ಬರಗೊಡಿಸಬೇಡ. ಬೇಗನೆ ನಿನ್ನ ಕರುಣೆಯನ್ನು ನಮಗೆ ತೋರು! ನೀನು ನಮಗೆ ಎಷ್ಟೋ ಅಗತ್ಯವಾಗಿರುವೆ!


ದಯವಿಟ್ಟು ನಿನ್ನ ಸೇವಕನನ್ನು ಸ್ವೀಕರಿಸಿಕೊ. ಕರುಣೆಯಿಂದ ನನ್ನನ್ನು ರಕ್ಷಿಸು!


ಯೆಹೋವನೇ, ನನ್ನನ್ನು ಮತ್ತೆ ಬಲಪಡಿಸು! ನಿನ್ನ ಮಹಾಕೃಪೆಯಿಂದ ನನ್ನನ್ನು ರಕ್ಷಿಸು.


ಅವನು ಯುವಕನಾಗಿದ್ದಾಗ ಅವನ ಎಲುಬುಗಳು ಬಲವಾಗಿದ್ದವು; ಆದರೆ ದೇಹದ ಉಳಿದ ಅಂಗಗಳೊಡನೆ ಅವೂ ಧೂಳುಪಾಲಾಗುತ್ತವೆ.


ಅನಂತರ ಯೇಸು ಆ ಮನುಷ್ಯನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ನೋಡು, ಈಗ ನೀನು ಗುಣಹೊಂದಿರುವೆ. ಆದರೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹೆಚ್ಚಿನ ಕೇಡು ನಿನಗೆ ಸಂಭವಿಸಬಹುದು!” ಎಂದು ಹೇಳಿದನು.


ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬನು ಅಲ್ಲಿ ಬಿದ್ದುಕೊಂಡಿದ್ದನು.


ಯೆಹೋವನೇ, ನಮ್ಮ ಮೇಲೆ ಸಿಟ್ಟಿನಿಂದಲೇ ಇರಬೇಡ. ನಮ್ಮ ಪಾಪಗಳನ್ನು ನಿನ್ನ ನೆನಪಿನಲ್ಲಿಟ್ಟುಕೊಂಡೇ ಇರಬೇಡ. ದಯಮಾಡಿ ನಮ್ಮ ಕಡೆಗೆ ನೋಡು. ನಾವು ನಿನ್ನ ಜನರೇ.


ನಿನ್ನ ಸೇವಕನಾದ ನನಗೆ ನಿನ್ನ ಶಾಶ್ವತ ಪ್ರೀತಿಯನ್ನು ತೋರಿಸು. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.


ಯಾಕೆಂದರೆ, ಆ ದುಷ್ಟನು ಯಾವ ಒಳ್ಳೆಯದನ್ನೂ ಮಾಡಲಿಲ್ಲ; ಯಾರನ್ನೂ ಪ್ರೀತಿಸಲಿಲ್ಲ. ಅವನು ಬಡಜನರಿಗೂ ಮತ್ತು ಅಸಹಾಯಕರಿಗೂ ಜೀವನವನ್ನು ಕಷ್ಟಕರವನ್ನಾಗಿ ಮಾಡಿದನು.


ಯೆಹೋವನು ನನ್ನ ಶತ್ರುವಿನ ತಂದೆಯ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.


ದೇವರ ಆಜ್ಞೆಗಳಿಗೆ ವಿಧೇಯರಾಗಿರುವವರು ಭಾಗ್ಯವಂತರೇ ಸರಿ! ಅವರು ಸತ್ಕಾರ್ಯಗಳನ್ನು ಯಾವಾಗಲೂ ಮಾಡುತ್ತಿರುವರು.


ಯೆಹೋವನೇ, ನಿನ್ನ ಜನರಿಗೆ ದಯೆತೋರುವಾಗ ನನ್ನನ್ನು ಜ್ಞಾಪಿಸಿಕೊಂಡು ದಯೆತೋರು. ನಿನ್ನ ಜನರನ್ನು ರಕ್ಷಿಸುವಾಗ ನನ್ನನ್ನು ನೆನಪು ಮಾಡಿಕೊಂಡು ರಕ್ಷಿಸು.


ನಾನು ಇದನ್ನು ನನಗಾಗಿ ಮಾಡುವೆನು. ನಾನು ನಿಮ್ಮನ್ನು ಪ್ರಾಮುಖ್ಯವಾದ ವ್ಯಕ್ತಿಗಳೆಂದು ಪರಿಗಣಿಸುವುದಿಲ್ಲ. ನನ್ನ ಮಹಿಮೆಯನ್ನು ಮತ್ತು ನನಗೆ ಸಲ್ಲತಕ್ಕ ಸ್ತುತಿಯನ್ನು ತೆಗೆದುಕೊಳ್ಳಲು ನಾನು ಸುಳ್ಳುದೇವರುಗಳಿಗೆ ಅವಕಾಶ ಕೊಡುವುದಿಲ್ಲ.


ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಠರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು