Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 26:1 - ಪರಿಶುದ್ದ ಬೈಬಲ್‌

1 ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನನ್ನನ್ನು ನಿರ್ದೋಷನನ್ನಾಗಿ ನಿರ್ಣಯಿಸಿರಿ, ನಾನು ದೋಷವಿಲ್ಲದ ಜೀವನ ನಡೆಸಿದ್ದೇನೆ; ನಾನು ಯೆಹೋವ ದೇವರಲ್ಲಿ ಕದಲದೆ ಭರವಸೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 26:1
30 ತಿಳಿವುಗಳ ಹೋಲಿಕೆ  

ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ. ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು.


ಜನರಿಗೆ ನ್ಯಾಯತೀರಿಸು. ಯೆಹೋವನೇ, ನನಗೆ ನ್ಯಾಯತೀರಿಸು. ನನ್ನನ್ನು ನೀತಿವಂತನೆಂದೂ ನಿರಪರಾಧಿಯೆಂದೂ ನಿರೂಪಿಸು.


ಸಧರ್ಮಿಯು ಒಳ್ಳೆಯ ರೀತಿಯಲ್ಲಿ ಜೀವಿಸುತ್ತಾನೆ; ಅವನ ಮಕ್ಕಳಿಗೆ ಆಶೀರ್ವಾದವಾಗುವುದು.


ರಾಜನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಮಹೋನ್ನತನಾದ ದೇವರು ಅವನನ್ನು ನಿರಾಶೆಗೊಳಿಸುವುದಿಲ್ಲ.


“ಯೆಹೋವನೇ, ನಾನು ಪೂರ್ಣಮನಸ್ಸಿನಿಂದ ನಿಜವಾಗಿಯೂ ನಿನ್ನ ಸೇವೆಮಾಡಿದ್ದೇನೆಂಬುದನ್ನು ನೆನಪುಮಾಡಿಕೊ. ನೀನು ಯೋಗ್ಯವೆಂದು ಹೇಳಿದವುಗಳನ್ನು ನಾನು ಮಾಡಿದೆನು” ಎಂದು ಹೇಳಿದನು. ನಂತರ ಹಿಜ್ಕೀಯನು ಬಹಳ ಜೋರಾಗಿ ಗೋಳಾಡಿದನು.


ಯೆಹೋವನೇ ನಮ್ಮಿಬ್ಬರಿಗೂ ನ್ಯಾಯಾಧೀಶನಾಗಿದ್ದು ತೀರ್ಪು ನೀಡಲಿ. ಯೆಹೋವನು ನನ್ನ ಪರವಾಗಿ ವಾದಿಸಿ ನಾನು ನೀತಿವಂತನೆಂದು ನಿರೂಪಿಸಿ ನನ್ನನ್ನು ನಿನ್ನಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.


ನನ್ನ ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊಳ್ಳಲು ಕರೆದನು. ಆದ್ದರಿಂದಲೇ ನೀವು ದೇವರಿಂದ ನಿಜವಾಗಿಯೂ ಕರೆಯಲ್ಪಟ್ಟವರೆಂದೂ ಆರಿಸಲ್ಪಟ್ಟವೆರೆಂದೂ ತೋರಿಸಲು ಬಹಳವಾಗಿ ಪ್ರಯತ್ನಿಸಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡವಿಬೀಳುವುದಿಲ್ಲ.


ದೇವರ ಶಕ್ತಿಯು ನಿಮ್ಮ ನಂಬಿಕೆಯ ಮೂಲಕ ನಿಮ್ಮನ್ನು ಕಾಯುತ್ತದೆ. ನಿಮಗೆ ರಕ್ಷಣೆಯಾಗುವವರೆಗೆ ನಿಮ್ಮನ್ನು ಸುರಕ್ಷಿತವಾಗಿಡುತ್ತದೆ. ಸಿದ್ಧವಾಗಿರುವ ಆ ರಕ್ಷಣೆಯು ಅಂತ್ಯಕಾಲದಲ್ಲಿ ನಿಮಗೆ ದೊರೆಯುವುದು.


ನಮ್ಮಲ್ಲಿರುವ ನಿರೀಕ್ಷೆಯನ್ನು ದೃಢವಾಗಿ ಕಾಯ್ದುಕೊಂಡು ಅದರ ಬಗ್ಗೆ ಜನರಿಗೆ ತಿಳಿಸುವುದರಲ್ಲಿ ದೃಢವಾಗಿರೋಣ. ದೇವರು ತನ್ನ ವಾಗ್ದಾನವನ್ನು ಈಡೇರಿಸುತ್ತಾನೆ ಎಂಬ ಭರವಸೆ ನಮ್ಮಲ್ಲಿರಬೇಕು.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ಮನುಷ್ಯರ ಭಯ ಉರುಲಾಗಬಹುದು. ಆದರೆ ಯೆಹೋವನ ಮೇಲಿರುವ ಭರವಸೆ ಕ್ಷೇಮವಾಗಿಡುವುದು.


ಆತನು ನಿನ್ನನ್ನು ಬೀಳಗೊಡಿಸುವುದಿಲ್ಲ; ನಿನ್ನ ಸಂರಕ್ಷಕನು ನಿದ್ರೆಹೋಗುವುದಿಲ್ಲ.


ಯೆಹೋವನೇ, ಜಾರಿಹೋಗುತ್ತಿರುವೆ ಎಂದು ಮೊರೆಯಿಟ್ಟಾಗ ಆತನು ನನಗೆ ಆಧಾರ ನೀಡಿದನು.


ಆತನೇ ನನಗೆ ಬಂಡೆಯೂ ರಕ್ಷಣೆಯೂ ಆಶ್ರಯದುರ್ಗವೂ ಆಗಿದ್ದಾನೆ.


ಆತನು ನನಗೆ ಬಂಡೆಯೂ ರಕ್ಷಣೆಯೂ ಕೋಟೆಯೂ ಆಗಿದ್ದಾನೆ. ನಾನೆಂದಿಗೂ ಕದಲೆನು.


ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸು! ನಿನ್ನ ಮಹಾಶಕ್ತಿಯಿಂದ ನನ್ನ ನ್ಯಾಯವನ್ನು ಸ್ಥಾಪಿಸು.


ದೇವರೇ, ನನ್ನನ್ನು ನಿರಪರಾಧಿಯೆಂದು ತೀರ್ಪು ನೀಡು. ವ್ಯಾಜ್ಯದಲ್ಲಿ ನನ್ನ ಪರವಾಗಿಯೂ ಅನ್ಯ ಜನಾಂಗಗಳಿಗೆ ವಿರೋಧವಾಗಿಯೂ ವಾದಿಸು. ಸುಳ್ಳುಗಾರರಿಂದಲೂ ಕೆಡುಕರಿಂದಲೂ ನನ್ನನ್ನು ರಕ್ಷಿಸು.


ಯೆಹೋವನ ಉಪದೇಶವು ನೀತಿವಂತನ ಹೃದಯದಲ್ಲಿರುತ್ತದೆ. ಅವನು ನೀತಿಮಾರ್ಗದಲ್ಲಿ ನಡೆಯವನು.


ನನ್ನ ದೇವರಾದ ಯೆಹೋವನೇ, ನಿನ್ನ ನೀತಿಗನುಸಾರವಾಗಿ ನನಗೆ ನ್ಯಾಯದೊರಕಿಸು. ಅವರು ನನ್ನನ್ನು ನೋಡಿ ನಗಲು ಆಸ್ಪದ ಕೊಡಬೇಡ.


ಯೆಹೋವನೇ, ನಾನಂತೂ ನಿನ್ನಲ್ಲೇ ಭರವಸವಿಟ್ಟಿದ್ದೇನೆ. ನೀನೇ ನನ್ನ ದೇವರು.


ನಾನಾದರೋ ನಿರಪರಾಧಿ. ನನಗೆ ಕರುಣೆತೋರಿ ನನ್ನನ್ನು ರಕ್ಷಿಸು.


ದೇವರೇ, ನೀನು ನಿಜವಾಗಿಯೂ ಒಳ್ಳೆಯವನು. ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ಆದ್ದರಿಂದ ನನ್ನನ್ನು ಕಾಪಾಡು.


ನನ್ನ ದೇವರೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ. ವೈರಿಗಳು ನನ್ನನ್ನು ನೋಡಿ ಗೇಲಿ ಮಾಡದಂತಾಗಲಿ!


ಅವನು ನಿರ್ದೋಷಿಯೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ ಹೃದಯದಿಂದ ಸತ್ಯವನ್ನು ಮಾತಾಡುವವನೂ ಆಗಿರಬೇಕು.


ದೇವರಿಗೆ ಯೋಗ್ಯವಾದ ಯಜ್ಞಗಳನ್ನು ಅರ್ಪಿಸಿರಿ; ಯೆಹೋವನಲ್ಲಿಯೇ ಭರವಸೆಯಿಡಿರಿ!


ಯೆಹೋವನು ತನ್ನ ಪವಿತ್ರ ಜನರನ್ನು ರಕ್ಷಿಸುವನು. ಆತನು ಅವರನ್ನು ಎಡವದಂತೆ ಕಾಪಾಡುವನು. ಆದರೆ ಕೆಟ್ಟವರು ನಾಶವಾಗಿ ಕತ್ತಲೆಯಲ್ಲಿ ಬೀಳುವರು. ಅವರ ಶಕ್ತಿ ಅವರಿಗೆ ಜಯನೀಡಲಾರದು.


ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು.


ನೀನು ದೇವರಲ್ಲಿ ಭಯಭಕ್ತಿಯಿಂದಿರುವುದರಿಂದ ಆತನಲ್ಲಿ ಭರವಸವಿಡು. ನೀನು ನೀತಿವಂತನಾಗಿರುವುದರಿಂದ ಅದೇ ನಿನ್ನ ನಿರೀಕ್ಷೆಯಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು