Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:1 - ಪರಿಶುದ್ದ ಬೈಬಲ್‌

1 ಯೆಹೋವನೇ, ನೀನೇ ನನಗೆ ಬೆಳಕೂ ರಕ್ಷಕನೂ ಆಗಿರುವೆ. ನಾನು ಯಾರಿಗೂ ಭಯಪಡಬೇಕಿಲ್ಲ! ಯೆಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ನನಗೆ ಬೆಳಕೂ ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೇನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ. ನಾನು ಯಾರಿಗೂ ಭಯಪಡೆನು? ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ. ನಾನು ಯಾರಿಗೂ ಹೆದರೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:1
45 ತಿಳಿವುಗಳ ಹೋಲಿಕೆ  

ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: “ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.”


ಯೆಹೋವನು ನನ್ನೊಂದಿಗಿದ್ದಾನೆ, ಆದ್ದರಿಂದ ನಾನು ಭಯಪಡುವುದಿಲ್ಲ. ಮನುಷ್ಯರು ನನಗೇನು ಮಾಡಬಲ್ಲರು?


ಯೆಹೋವನೇ ನನ್ನ ಬಲ, ಆತನು ನನ್ನನ್ನು ರಕ್ಷಿಸುತ್ತಾನೆ. ನನ್ನ ಬಲವೂ ಕೀರ್ತನೆಯೂ ಯಾಹುವೇ; ಆತನಿಂದ ನನಗೆ ರಕ್ಷಣೆ ಆಯಿತು. ಯೆಹೋವನು ನನ್ನ ದೇವರು. ಮತ್ತು ನಾನು ಆತನನ್ನು ಸ್ತುತಿಸುತ್ತೇನೆ. ಯೆಹೋವನೇ ನಮ್ಮ ಪೂರ್ವಿಕರ ದೇವರು. ನಾನು ಆತನನ್ನು ಸನ್ಮಾನಿಸುತ್ತೇನೆ.


ಆದರೆ ಪ್ರಭುವು ನನಗೆ, “ನನ್ನ ಕೃಪೆಯೇ ನಿನಗೆ ಸಾಕು, ನೀನು ಬಲಹೀನನಾಗಿರುವಾಗ ನನ್ನ ಶಕ್ತಿಯು ನಿನ್ನಲ್ಲಿ ಪರಿಪೂರ್ಣವಾಗಿರುತ್ತದೆ” ಎಂದು ಹೇಳಿದನು.


ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.


ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


ಬಳಿಕ, ಯೇಸುವು ಜನರೊಂದಿಗೆ ಮತ್ತೆ ಮಾತಾಡುತ್ತಾ, “ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ಎಂದಿಗೂ ಜೀವಿಸುವುದಿಲ್ಲ. ಅವನು ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು” ಎಂದು ಹೇಳಿದನು.


ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”


ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.


ಆತನೇ ನನಗೆ ಬಂಡೆಯೂ ರಕ್ಷಣೆಯೂ ಆಶ್ರಯದುರ್ಗವೂ ಆಗಿದ್ದಾನೆ.


ಯೆಹೋವನೇ, ನನ್ನ ದೀಪವನ್ನು ಹೊತ್ತಿಸುವವನು ನೀನೇ. ನನ್ನ ದೇವರು ನನ್ನ ಸುತ್ತಲೂ ಇರುವ ಕತ್ತಲೆಯನ್ನು ಬೆಳಕನ್ನಾಗಿ ಮಾಡುವನು.


ಆ ದಿನಗಳಲ್ಲಿ ದೇವರ ದೀಪವು ನನ್ನ ಮೇಲೆ ಪ್ರಕಾಶಿಸುತ್ತಿದ್ದ ಕಾರಣ ನಾನು ಕಾರ್ಗತ್ತಲೆಯಲ್ಲೂ ಸಂಚರಿಸುತ್ತಿದ್ದೆನು.


ಕ್ರಿಸ್ತನ ಮೂಲಕ ನಾನು ಎಲ್ಲಾ ಕಾರ್ಯಗಳನ್ನು ಮಾಡಬಲ್ಲೆನು. ಏಕೆಂದರೆ ಆತನು ನನ್ನನ್ನು ಬಲಪಡಿಸುತ್ತಾನೆ.


ಯೆಹೋವನೇ, ನನ್ನ ಪ್ರಾರ್ಥನೆಗೆ ನೀನು ಉತ್ತರಿಸಿ ನನ್ನನ್ನು ರಕ್ಷಿಸಿದ್ದಕ್ಕೋಸ್ಕರ ನಿನಗೆ ಕೃತಜ್ಞತಾಸ್ತುತಿ ಮಾಡುವೆನು.


ನನ್ನ ಮಾತುಗಳೂ ನನ್ನ ಆಲೋಚನೆಗಳೂ ನಿನಗೆ ಮೆಚ್ಚಿಕೆಯಾಗಿರಲಿ. ಯೆಹೋವನೇ, ನೀನೇ ನನ್ನ ಬಂಡೆಯಾಗಿರುವೆ. ನನ್ನನ್ನು ರಕ್ಷಿಸುವಾತನು ನೀನೇ.


ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.


ಆತನು ನನಗೆ ಬಂಡೆಯೂ ರಕ್ಷಣೆಯೂ ಕೋಟೆಯೂ ಆಗಿದ್ದಾನೆ. ನಾನೆಂದಿಗೂ ಕದಲೆನು.


“ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.


ಯಾಕೋಬನ ಮನೆತನದವರೇ, ನೀವು ಯೆಹೋವನ ಬೆಳಕನ್ನು ಹಿಂಬಾಲಿಸುವವರಾಗಬೇಕು.


ಯೆಹೋವನು ಜೀವಸ್ವರೂಪನಾಗಿದ್ದಾನೆ. ನನ್ನ ಬಂಡೆಯಾಗಿರುವ ಆತನನ್ನು ಸ್ತುತಿಸುವೆನು. ನನ್ನನ್ನು ರಕ್ಷಿಸುವ ದೇವರು ಮಹೋನ್ನತನಾಗಿದ್ದಾನೆ.


ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.


ನಿಜವಾದ ಬೆಳಕು ಈ ಲೋಕಕ್ಕೆ ಆಗಮಿಸಲಿತ್ತು. ಈ ನಿಜವಾದ ಬೆಳಕೇ ಎಲ್ಲಾ ಜನರಿಗೆ ಬೆಳಕನ್ನು ಕೊಡುತ್ತದೆ.


ಅವರು ಗಟ್ಟಿಯಾದ ಧ್ವನಿಯಲ್ಲಿ, “ಸಿಂಹಾಸನದ ಮೇಲೆ ಕುಳಿತುಕೊಳ್ಳುವ ನಮ್ಮ ಪ್ರಭುವಿಗೆ ಮತ್ತು ಕುರಿಮರಿಯಾದಾತನಿಗೆ ಜಯವು ಲಭಿಸಿತು” ಎಂದು ಕೂಗಿದರು.


ನೀನು ದಯಪಾಲಿಸಿದ ರಕ್ಷಕನನ್ನು ಕಣ್ಣಾರೆಕಂಡೆನು.


ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ. ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ?


ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.


ಪ್ರತಿಯೊಬ್ಬನೂ ದೇವರ ರಕ್ಷಣೆಯನ್ನು ಕಾಣುವನು!’ ಎಂಬುದಾಗಿ ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ.”


ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.


ಜನರು ಹೀಗೆನ್ನುವರು: ‘ಶಕ್ತಿಯೂ, ಒಳ್ಳೆಯತನವೂ ಯೆಹೋವನಿಂದಲೇ ಬರುವದು.’” ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು.


ದೇವರೇ, ನೀನೇ ನನಗೆ ಆಶ್ರಯಸ್ಥಾನವಾಗಿರುವೆ! ನೀನು ನನ್ನನ್ನು ಯಾಕೆ ಕೈಬಿಟ್ಟಿರುವೆ? ಶತ್ರು ಬಾಧೆಯಿಂದ ನಾನೇಕೆ ದುಃಖಿಸುತ್ತಾ ಸಂಕಟಪಡಬೇಕು?


ನೀವು ಅವರಿಗೆ ಭಯಪಡಬಾರದು. ನಿಮ್ಮ ದೇವರಾದ ಯೆಹೋವನು ಫರೋಹನಿಗೂ ಈಜಿಪ್ಟಿನ ಎಲ್ಲಾ ಜನರಿಗೂ ಮಾಡಿದ್ದನ್ನು ನೆನಪು ಮಾಡಿಕೊಳ್ಳಿರಿ.


ಅವರಿಗೆ ನೀವು ಭಯಪಡಬೇಡಿರಿ; ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ಭಯಂಕರನೂ ಮಹಾ ದೇವರೂ ಆಗಿದ್ದಾನೆ.


ಯೆಹೋವನೇ, ನಿನ್ನ ಸಹಾಯದಿಂದ ನಾನು ಸೈನಿಕರೊಡನೆ ಓಡಬಲ್ಲೆ. ನನ್ನ ದೇವರ ಸಹಾಯದಿಂದ ನಾನು ಶತ್ರುಗಳ ಕೋಟೆಗಳನ್ನು ಹತ್ತುವೆನು.


ಆದರೆ ಯೆಹೋವನು ನನ್ನೊಡನಿದ್ದಾನೆ. ಯೆಹೋವನು ಒಬ್ಬ ಶೂರ ಯೋಧನಂತಿದ್ದಾನೆ. ಆದ್ದರಿಂದ ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿದ್ದ ಜನರು ಬೀಳುತ್ತಾರೆ. ಅವರು ನನ್ನನ್ನು ಸೋಲಿಸಲಾರರು. ಆ ಜನರು ಸೋತುಹೋಗುತ್ತಾರೆ. ಅವರಿಗೆ ಆಶಾಭಂಗವಾಗುತ್ತದೆ. ಅವರಿಗೆ ನಾಚಿಕೆಯಾಗುತ್ತದೆ. ಅವರು ಆ ನಾಚಿಕೆಯನ್ನು ಎಂದೂ ಮರೆಯಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು