ಕೀರ್ತನೆಗಳು 27:11 - ಪರಿಶುದ್ದ ಬೈಬಲ್11 ಯೆಹೋವನೇ, ನನಗೆ ವೈರಿಗಳಿರುವುದರಿಂದ ನಿನ್ನ ಮಾರ್ಗವನ್ನು ನನಗೆ ಉಪದೇಶಿಸಿ ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು I ಶತ್ರುರಹಿತ ಹಾದಿಯಲಿ ನಡೆಸು ಎನ್ನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ; ನನ್ನ ವಿರೋಧಿಗಳ ನಿಮಿತ್ತ ಸಮಹಾದಿಯಲ್ಲಿ ನನ್ನನ್ನು ನಡೆಸಿರಿ. ಅಧ್ಯಾಯವನ್ನು ನೋಡಿ |
ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.
ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)