ಕೀರ್ತನೆಗಳು 27:6 - ಪರಿಶುದ್ದ ಬೈಬಲ್6 ವೈರಿಗಳು ನನಗೆ ಮುತ್ತಿಗೆ ಹಾಕಿದ್ದರೂ ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯಮಾಡುವನು! ಆಗ ನಾನು ಆತನ ಗುಡಾರದಲ್ಲಿ ಉತ್ಸಾಹ ಧ್ವನಿಯೊಡನೆ ಯಜ್ಞಗಳನ್ನು ಅರ್ಪಿಸುವೆನು. ವಾದ್ಯಗಳನ್ನು ನುಡಿಸುತ್ತಾ ಆತನನ್ನು ಕೊಂಡಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸುತ್ತಲು ನೆರೆದಿಹ ಶತ್ರುಗಳ ನಡುವೆ ತಲೆಯೆತ್ತಿ ನಡೆವೆನು I ದೇವಾಲಯದೊಳು ಜಯಜಯ ಘೋಷದೊಡನೆ ಬಲಿಗಳನರ್ಪಿಸುವೆನು I ಪ್ರಭುವಿಗೆ ಹಾಡುವೆನು, ವಾದ್ಯ ನುಡಿಸುತ ಕೊಂಡಾಡುವೆನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೀಗಿರುವದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ ನನ್ನ ತಲೆ ಎತ್ತಲ್ಪಟ್ಟಿರುವದು; ನಾನು ಯೆಹೋವನ ಗುಡಾರದಲ್ಲಿ ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಈಗ ನನ್ನ ತಲೆಯು ನನ್ನ ಸುತ್ತಲಿರುವ ನನ್ನ ಶತ್ರುಗಳ ಮೇಲೆ ಎತ್ತಲಾಗಿರುವುದು, ಆದ್ದರಿಂದ ದೇವರ ಗುಡಾರದಲ್ಲಿ ಉತ್ಸಾಹದಿಂದ ಬಲಿಗಳನ್ನು ಅರ್ಪಿಸುವೆನು; ಯೆಹೋವ ದೇವರಿಗೆ ಹಾಡಿ ಕೊಂಡಾಡುವೆನು. ಅಧ್ಯಾಯವನ್ನು ನೋಡಿ |
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.