Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:7 - ಪರಿಶುದ್ದ ಬೈಬಲ್‌

7 ಯೆಹೋವನೇ, ನನ್ನ ಸ್ವರವನ್ನು ಕೇಳಿ ನನಗೆ ಉತ್ತರಿಸು. ನನ್ನನ್ನು ಕರುಣಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ; ನನ್ನನ್ನು ಕರುಣಿಸಿ, ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರಭೂ, ನಿನಗೆ ಮೊರೆಯಿಡುವೆನು I ಕರುಣಿಸೆನಗೆ ಸದುತ್ತರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ; ನನ್ನನ್ನು ಕರುಣಿಸಿ ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರೇ, ನಾನು ಕೂಗುವ ಸ್ವರವನ್ನು ಕೇಳಿರಿ; ನನ್ನನ್ನು ಕರುಣಿಸಿ ಉತ್ತರವನ್ನು ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:7
8 ತಿಳಿವುಗಳ ಹೋಲಿಕೆ  

ನನ್ನ ದೇವರಾದ ಯೆಹೋವನೇ, ನನ್ನ ಮೇಲೆ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು. ಇಲ್ಲವಾದರೆ, ನಾನು ಸಾಯಲೇಬೇಕಾಗುವುದು!


ನನ್ನ ರಾಜನೇ, ನನ್ನ ದೇವರೇ, ನಿನಗೇ ಮೊರೆಯಿಡುವೆನು. ನನ್ನ ಪ್ರಾರ್ಥನೆಯನ್ನು ಆಲೈಸು.


ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು! ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು! ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ ಸುರಕ್ಷಿತ ಸ್ಥಳದಲ್ಲಿ ಸೇರಿಸು.


ನಾನು ದೇವರಿಗೆ ಹೀಗೆ ಹೇಳುತ್ತೇನೆ: ‘ನನ್ನನ್ನು ಖಂಡಿಸದೆ ಹೇಳು! ನಾನೇನು ತಪ್ಪುಮಾಡಿರುವೆ? ನನಗೆ ವಿರೋಧವಾಗಿ ನಿನ್ನಲ್ಲಿರುವ ದೂರುಗಳೇನು?


ಆಗ ನೀನು ನನಗೆ ಸಹಾಯಮಾಡಿ ನನ್ನ ಗೋಳಾಟವನ್ನು ಸಂತೋಷದ ನರ್ತನವನ್ನಾಗಿ ಮಾರ್ಪಡಿಸಿದೆ. ನನ್ನ ಶೋಕವಸ್ತ್ರಗಳನ್ನು ತೆಗೆದುಹಾಕಿ ಹರ್ಷವಸ್ತ್ರಗಳನ್ನು ಹೊದಿಸಿದೆ.


ನನ್ನ ಜೀವಿತವು ದುಃಖದಲ್ಲಿ ಕೊನೆಗೊಳ್ಳುತ್ತಿದೆ. ನನ್ನ ವರ್ಷಗಳು ನಿಟ್ಟುಸಿರಿನಲ್ಲೇ ಕಳೆದುಹೋಗುತ್ತಿವೆ. ನನ್ನ ಇಕ್ಕಟ್ಟುಗಳು ನನ್ನ ಶಕ್ತಿಯನ್ನು ಕುಂದಿಸುತ್ತಿವೆ. ನನ್ನ ಬಲವು ನನ್ನನ್ನು ಬಿಟ್ಟುಹೋಗುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು