ಕೀರ್ತನೆಗಳು 28:2 - ಪರಿಶುದ್ದ ಬೈಬಲ್2 ಮಹಾಪವಿತ್ರ ಸ್ಥಳದ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ನಾನು ನಿನ್ನನ್ನು ಕೂಗಿಕೊಳ್ಳುವಾಗ ನನಗೆ ಕಿವಿಗೊಟ್ಟು ಕರುಣಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿನ್ನ ಪರಿಶುದ್ಧಾಲಯದತ್ತ ಕೈಯೆತ್ತಿ ಮುಗಿವೆನು I ಕರುಣೆಯಿಂದಾಲಿಸು ಪ್ರಭು, ನನ್ನಾರ್ತ ಮನವಿಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ವಾಸಿಸುವ ಮಹಾಪರಿಶುದ್ಧ ಸ್ಥಾನದ ಕಡೆಗೆ ನಾನು ಕೈಯೆತ್ತಿಕೊಂಡು ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಾನು ನಿಮಗೆ ಮೊರೆಯಿಡುವಾಗ, ನನ್ನ ಕೈಗಳನ್ನು ನಿಮ್ಮ ಮಹಾಪರಿಶುದ್ಧ ಸ್ಥಳದ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯನ್ನು ಲಾಲಿಸಿರಿ. ಅಧ್ಯಾಯವನ್ನು ನೋಡಿ |
ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.
ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.