Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 28:5 - ಪರಿಶುದ್ದ ಬೈಬಲ್‌

5 ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ ಕೆಡುಕರು ವಿವೇಚಿಸಿ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಆತನು ಅವರನ್ನು ದಂಡಿಸಿ ನಿತ್ಯನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಯೆಹೋವನ ಕಾರ್ಯಗಳನ್ನೂ ಮತ್ತು ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅರಿಯರವರು ಪ್ರಭುವಿನ ಕಾರ್ಯಗಳನು, ಆತನ ಕೈಕೆಲಸಗಳನು I ಈ ಕಾರಣ ಕೆಡವಿಬಿಡುವನು ಪ್ರಭು, ಮರಳಿ ಏಳಬಿಡನವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದದರಿಂದ ಆತನು ಅವರನ್ನು ಹಾಳು ಮಾಡುವನೇ ಹೊರತು ವೃದ್ಧಿಪಡಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಯೆಹೋವ ದೇವರ ಕೃತ್ಯಗಳನ್ನೂ, ಅವರ ಕೈಗಳ ಕೆಲಸವನ್ನೂ ಲಕ್ಷಿಸುವುದಿಲ್ಲ; ಆದ್ದರಿಂದ ದೇವರು ಅವರನ್ನು ವೃದ್ಧಿಗೊಳಿಸದೆ ದಂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 28:5
26 ತಿಳಿವುಗಳ ಹೋಲಿಕೆ  

ನೀವು ಕುಡಿಯುತ್ತಾ ಹಾರ್ಪ್‌ವಾದ್ಯಗಳನ್ನೂ ದಮ್ಮಡಿಗಳನ್ನೂ ಕೊಳಲುಗಳನ್ನೂ ಬಾರಿಸುತ್ತಾ ನೃತ್ಯಮಾಡುವಿರಿ. ಆದರೆ ಯೆಹೋವನು ಮಾಡಿದ ಕಾರ್ಯಗಳನ್ನು ನೀವು ಗಮನಿಸುವುದಿಲ್ಲ. ಯೆಹೋವನ ಹಸ್ತವು ಅನೇಕಾನೇಕ ಕಾರ್ಯಗಳನ್ನು ಮಾಡಿದೆ. ಆದರೆ ನೀವು ಅವುಗಳನ್ನು ಲಕ್ಷಿಸುವುದಿಲ್ಲ. ಆದ್ದರಿಂದ ನಿಮಗೆ ಕೇಡಾಗುವುದು.


ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.


ಯೇಸು ಅನೇಕ ಮಹತ್ಕಾರ್ಯಗಳನ್ನು ಮಾಡಿದನು. ಜನರು ಆ ಕಾರ್ಯಗಳನ್ನೆಲ್ಲಾ ನೋಡಿದರೂ ಆತನಲ್ಲಿ ನಂಬಿಕೆ ಇಡಲಿಲ್ಲ.


ಅವರು ಕುಯುಕ್ತಿಗಳನ್ನೇ ಮಾಡುತ್ತಾ ದೇವರ ಕಟ್ಟಳೆಗಳನ್ನೂ ಬುದ್ಧಿಮಾತುಗಳನ್ನೂ ಗಣನೆಗೆ ತೆಗೆದುಕೊಳ್ಳುವುದಿಲ್ಲ. ದೇವರ ವೈರಿಗಳು ಆತನ ಉಪದೇಶಗಳನ್ನು ಕಡೆಗಣಿಸುವರು.


ಅವನು ನನ್ನ ಹೆಸರಿಗಾಗಿ ಒಂದು ಆಲಯವನ್ನು ನಿರ್ಮಿಸುತ್ತಾನೆ. ಅವನ ರಾಜ್ಯವು ಸದಾಕಾಲಕ್ಕೂ ಇರುವಂತೆ ನಾನು ಮಾಡುತ್ತೇನೆ.


ಜನರು ದೇವರ ನಿತ್ಯಶಕ್ತಿಯನ್ನಾಗಲಿ ಆತನ ದೈವತ್ವಗಳನ್ನಾಗಲಿ ಕಾಣಲಾರರು. ಆದರೆ ಲೋಕದ ಆರಂಭದಿಂದಲೂ ಆ ಸಂಗತಿಗಳು ಜನರಿಗೆ ಸುಲಭವಾಗಿ ಅರ್ಥವಾಗುತ್ತವೆ. ದೇವರು ಮಾಡಿದ ಸೃಷ್ಟಿಗಳಲ್ಲಿ ಆ ಸಂಗತಿಗಳು ಸ್ಪಷ್ಟವಾಗಿವೆ. ಆದ್ದರಿಂದ ಜನರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ನೆವ ಹೇಳಲು ಸಾಧ್ಯವಿಲ್ಲ.


ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು.


ನನ್ನ ವಧುವಾದ ಇಸ್ರೇಲೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು, ಆಗ ನೀನು ಮತ್ತೆ ಒಂದು ಜನಾಂಗವಾಗುವೆ. ನೀನು ಮೊದಲಿನಂತೆ ನಿನ್ನ ದಮ್ಮಡಿಯನ್ನು ತೆಗೆದುಕೊಂಡು ಸಂತೋಷದಿಂದ ನೃತ್ಯ ಮಾಡುವವರೊಡನೆ ನೃತ್ಯ ಮಾಡುವೆ.


ಯೆಹೋವನು ದೇವರಾಗಿದ್ದಾನೆ. ಆತನು ಭೂಮ್ಯಾಕಾಶಗಳನ್ನು ಉಂಟುಮಾಡಿದ್ದಾನೆ. ಆತನು ಭೂಮಿಯನ್ನು ಅದರ ಸ್ಥಾನದಲ್ಲಿ ಇಟ್ಟಿದ್ದಾನೆ. ಆತನು ಈ ಲೋಕವನ್ನು ಸೃಷ್ಟಿಸಿದ್ದು ಅದು ಶೂನ್ಯವಾಗಿರಲೆಂದಲ್ಲ. ಅದು ಜನಭರಿತವಾಗಿರಲೆಂದೇ ಸೃಷ್ಟಿಸಿದನು. “ನಾನೇ ಯೆಹೋವನು, ನನ್ನ ಹೊರತು ಬೇರೆ ದೇವರುಗಳಿಲ್ಲ.


ಭೂಮಿಯನ್ನು ನಿರ್ಮಿಸಿದವನೂ ಅದರಲ್ಲಿ ವಾಸಿಸುವ ಎಲ್ಲಾ ಜನರನ್ನು ಉಂಟುಮಾಡಿದವನೂ ನಾನೇ. ನನ್ನ ಸ್ವಹಸ್ತದಿಂದ ಆಕಾಶಮಂಡಲವನ್ನು ನಿರ್ಮಿಸಿದ್ದೇನೆ. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಪುಂಜಗಳನ್ನು ನನ್ನ ಹತೋಟಿಯಲ್ಲಿಟ್ಟಿದ್ದೇನೆ.


“ಆಕಾಶದಲ್ಲಿರುವ ಮೋಡಗಳು ಒಳ್ಳೆಯತನವನ್ನು ಭೂಮಿಯ ಮೇಲೆ ಮಳೆಯಂತೆ ಸುರಿಸಲಿ. ಭೂಮಿಯು ತೆರೆಯಲ್ಪಡಲಿ; ರಕ್ಷಣೆಯು ಬೆಳೆಯಲಿ. ಒಳ್ಳೆತನವು ಅದರೊಂದಿಗೆ ಬೆಳೆಯಲಿ. ಯೆಹೋವನೆಂಬ ನಾನೇ ಅವನನ್ನು ನಿರ್ಮಿಸಿದೆನು.”


ಆಕಾಶಮಂಡಲದ ಕಡೆಗೆ ನೋಡಿರಿ! ಆ ನಕ್ಷತ್ರಗಳನ್ನೆಲ್ಲಾ ಮಾಡಿದವರು ಯಾರು? ಆಕಾಶದಲ್ಲಿರುವ ಆ “ಸೈನ್ಯಗಳನ್ನು” ಸಿದ್ಧ ಮಾಡಿದವರು ಯಾರು? ಪ್ರತಿಯೊಂದು ನಕ್ಷತ್ರವನ್ನು ಹೆಸರೆತ್ತಿ ಕರೆಯುವವರು ಯಾರು? ಆತನು ಬಲಿಷ್ಠನೂ ಪರಾಕ್ರಮಶಾಲಿಯೂ ಆಗಿದ್ದಾನೆ. ಆದ್ದರಿಂದ ಆ ನಕ್ಷತ್ರಗಳಲ್ಲಿ ಒಂದೂ ನಾಶವಾಗಲಿಲ್ಲ.


ಯೆಹೋವನೇ, ನೀನು ಅನೇಕ ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ನೀನು ಸೃಷ್ಟಿಸಿದ ವಸ್ತುಗಳಿಂದ ಭೂಮಿಯು ತುಂಬಿಹೋಗಿದೆ. ನಿನ್ನ ಪ್ರತಿಯೊಂದು ಕಾರ್ಯದಲ್ಲೂ ನಿನ್ನ ಜ್ಞಾನವನ್ನು ಕಾಣಬಲ್ಲವು.


ನೀನು ಸರಿಯಾದ ಮಾರ್ಗದಲ್ಲಿ ಜೀವಿಸುತ್ತಾ, ನನ್ನ ಆಜ್ಞೆಗಳನ್ನು ಅನುಸರಿಸಿದರೆ, ನಾನು ಈ ಕಾರ್ಯಗಳೆನ್ನೆಲ್ಲ ನಿನಗೆ ಮಾಡುವೆನು. ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀನು ದಾವೀದನಂತೆ ಅನುಸರಿಸಿದರೆ ನಾನು ನಿನ್ನೊಂದಿಗೆ ಇರುತ್ತೇನೆ. ನಾನು ನಿನ್ನ ಕುಟುಂಬವನ್ನು ದಾವೀದನ ಕುಟುಂಬದಂತೆ ರಾಜರುಗಳ ಕುಟುಂಬವನ್ನಾಗಿ ಮಾಡುತ್ತೇನೆ. ನಾನು ನಿನಗೆ ಇಸ್ರೇಲನ್ನು ಕೊಡುತ್ತೇನೆ.


“ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನೇ, ನೀನು ನನಗೆ ಮುಂದಿನ ಸಂಗತಿಗಳನ್ನು ತೋರಿಸಿರುವೆ. ‘ನಾನು ನಿನ್ನ ಕುಟುಂಬವನ್ನು ಸ್ಥಿರಪಡಿಸುವೆನು’ ಎಂದು ಹೇಳಿರುವೆ. ಆ ಕಾರಣದಿಂದಲೇ ನಿನ್ನ ಸೇವಕನಾದ ನಾನು ನಿನ್ನಲ್ಲಿ ಈ ಪ್ರಾರ್ಥನೆಯನ್ನು ಸಲ್ಲಿಸಲು ತೀರ್ಮಾನಿಸಿದ್ದೇನೆ.


ನಿಜವಾಗಿಯೂ ಯಾಕೋಬನ ಜನರ ಮಧ್ಯದಲ್ಲಿ ಶಕುನ ನೋಡುವವರು ಇಲ್ಲ. ಇಸ್ರೇಲಿನಲ್ಲಿ ಕಣಿ ಹೇಳುವವರು ಇಲ್ಲ. ಜನರು, ಯಾಕೋಬನ ಮತ್ತು ಇಸ್ರೇಲರ ಬಗ್ಗೆ ಹೀಗೆ ಹೇಳುವರು: ‘ದೇವರು ಮಾಡಿದ ಮಹಾಕಾರ್ಯಗಳನ್ನು ನೋಡಿರಿ!’


ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ ನೀನು ಸೃಷ್ಟಿಸಿದ ಚಂದ್ರನಕ್ಷತ್ರಗಳನ್ನೂ ನೋಡಿ ಆಶ್ಚರ್ಯಗೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು