7 ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ. ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು.
7 ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
7 ಯೆಹೋವನು ನನಗೆ ಬಲವೂ ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
7 ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.
ಆತನು ನನ್ನ ಬಾಯಲ್ಲಿ ಹೊಸ ಕೀರ್ತನೆಯನ್ನು ಹುಟ್ಟಿಸಿದ್ದಾನೆ. ಅದು ನನ್ನ ದೇವರ ಸ್ತುತಿಗೀತೆ. ನನಗೆ ಸಂಭವಿಸಿದವುಗಳನ್ನು ಅನೇಕರು ನೋಡಿ ಯೆಹೋವನಲ್ಲಿ ಭರವಸವಿಟ್ಟು ಆತನನ್ನು ಆರಾಧಿಸುವರು.
ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”
ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.
ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.
ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.
ಅವರು ದೇವರ ಸೇವಕನಾದ ಮೋಶೆಯ ಗೀತೆಯನ್ನು ಮತ್ತು ಕುರಿಮರಿಯಾದಾತನ ಗೀತೆಯನ್ನು ಹಾಡಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ನೀನು ಮಹತ್ತಾದ ಕಾರ್ಯಗಳನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ಮಾಡುವೆ. ಸರ್ವಜನಾಂಗಗಳ ರಾಜನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
ಜನರು ಹೀಗೆನ್ನುವರು: ‘ಶಕ್ತಿಯೂ, ಒಳ್ಳೆಯತನವೂ ಯೆಹೋವನಿಂದಲೇ ಬರುವದು.’” ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು.