Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 28:8 - ಪರಿಶುದ್ದ ಬೈಬಲ್‌

8 ಯೆಹೋವನು ತನ್ನ ಜನರಿಗೆ ಬಲವೂ ತಾನು ಆರಿಸಿಕೊಂಡ ಅರಸನಿಗೆ ಆಶ್ರಯದುರ್ಗವೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ತನ್ನ ಜನರಿಗೆ ಬಲವೂ, ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರಭುವೆ ತನ್ನ ಪ್ರಜೆಯ ಪ್ರಾಬಲ್ಯವು I ತನ್ನಭಿಷಿಕ್ತನಿಗೆ ಆಶ್ರಯ ದುರ್ಗವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ತನ್ನ ಜನರಿಗೆ ಬಲವೂ ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ತಮ್ಮ ಜನರಿಗೆ ಬಲವಾಗಿದ್ದಾರೆ; ತಮ್ಮ ಅಭಿಷಿಕ್ತನಿಗೆ ರಕ್ಷಣೆಯ ಕೋಟೆ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 28:8
6 ತಿಳಿವುಗಳ ಹೋಲಿಕೆ  

ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು. ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು; ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು.


ಯೆಹೋವನೇ, ನನ್ನ ಬಲಿಷ್ಠನಾದ ಒಡೆಯನು ನೀನೇ. ನನ್ನ ರಕ್ಷಕನೂ ನೀನೇ, ನನ್ನ ಶಿರಸ್ತ್ರಾಣವೂ ನೀನೇ.


ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.


ಸಮುವೇಲನು ಎಣ್ಣೆಯಿದ್ದ ಕೊಂಬನ್ನು ತೆಗೆದುಕೊಂಡು, ಅದರಲ್ಲಿದ್ದ ವಿಶೇಷವಾದ ಎಣ್ಣೆಯನ್ನು ಇಷಯನ ಕಿರಿಮಗನ ಮೇಲೆ, ಅವನ ಸೋದರರ ಎದುರಿನಲ್ಲೇ ಸುರಿದನು. ಆ ದಿನದಿಂದ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ದಾವೀದನಲ್ಲಿ ನೆಲೆಸಿತು. ಅನಂತರ ಸಮುವೇಲನು ರಾಮಕ್ಕೆ ಹಿಂದಿರುಗಿದನು.


ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.


ಕೆಲವರು ತಮ್ಮ ರಥಗಳಲ್ಲಿ ಭರವಸವಿಡುವರು. ಕೆಲವರು ತಮ್ಮ ಸೈನಿಕರುಗಳಲ್ಲಿ ಭರವಸವಿಡುವರು. ನಾವಾದರೋ ನಮ್ಮ ದೇವರಾದ ಯೆಹೋವನನ್ನೇ ಜ್ಞಾಪಿಸಿಕೊಳ್ಳುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು