ಕೀರ್ತನೆಗಳು 29:3 - ಪರಿಶುದ್ದ ಬೈಬಲ್3 ಯೆಹೋವನ ಸ್ವರವು ಸಮುದ್ರದ ಮೇಲೆ ಕೇಳಿ ಬರುವುದು. ಮಹಾಸಾಗರದ ಮೇಲಿನ ಗುಡುಗಿನಂತೆ ಮಹಿಮಾಸ್ವರೂಪನಾದ ದೇವರ ಸ್ವರವು ಕೇಳಿಬರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪ್ರಭು ಆಸೀನನು ಆಗಸದ ಜಲರಾಶಿಗಳ ಮೇಲೆ I ಪ್ರತಿಭಾಸ್ವರೂಪನಾದ ದೇವನಿದೋ, ಗುಡುಗುತ್ತಲೇ I ಆತನಾಡಂಬರ ಧ್ವನಿ ಮೇಘಮಂಡಲದ ಮೇಲೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರ ಧ್ವನಿಯು ಜಲರಾಶಿಗಳ ಮೇಲೆ ಇದೆ; ಮಹಿಮೆಯ ದೇವರು ಇದ್ದಾರೆ; ಯೆಹೋವ ದೇವರು ಮಹಾಸಾಗರಗಳ ಮೇಲೆ ಇದ್ದಾರೆ. ಅಧ್ಯಾಯವನ್ನು ನೋಡಿ |