Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 3:2 - ಪರಿಶುದ್ದ ಬೈಬಲ್‌

2 ಅನೇಕರು ನನ್ನ ಬಗ್ಗೆ ಮಾತಾಡುತ್ತಾ, “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಈತನಿಗೆ ದೇವರ ನೆರವೆನಿತು?” I ಇಂತಿದೆ ಹಲವರ ಕೆಣಕು ಮಾತು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅನೇಕರು ನನ್ನ ವಿಷಯದಲ್ಲಿ - ಅವನಿಗೆ ದೇವರಿಂದ ಸಹಾಯವು ಆಗುವದೇ ಇಲ್ಲವೆಂದು ಹೇಳಿಕೊಳ್ಳುತ್ತಾರೆ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ದೇವರು ಅವನನ್ನು ಬಿಡುಗಡೆ ಮಾಡುವುದಿಲ್ಲ,” ಎಂದು ಅನೇಕರು ನನ್ನ ಬಗ್ಗೆ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 3:2
14 ತಿಳಿವುಗಳ ಹೋಲಿಕೆ  

“ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಅವನನ್ನು ಹಿಡಿಯಿರಿ; ಅವನಿಗೆ ಸಹಾಯಕರೇ ಇಲ್ಲ” ಎಂದು ಅವರು ಹೇಳಿಕೊಳ್ಳುತ್ತಿದ್ದಾರೆ.


“ನಿನ್ನ ದೇವರು ಎಲ್ಲಿ?” ಎಂದು ನನ್ನ ವೈರಿಗಳು ಯಾವಾಗಲೂ ಗೇಲಿಮಾಡುವುದರಿಂದ ಹಗಲಿರುಳು ಕಣ್ಣೀರೇ ನನಗೆ ಆಹಾರವಾಯಿತು.


ನನ್ನ ವಿರೋಧಿಗಳು ಸತತವಾಗಿ, “ನಿನ್ನ ದೇವರು ಎಲ್ಲಿ?” ಎಂದು ಕೇಳುವುದರಿಂದ ನನ್ನ ಮೂಳೆಗಳು ಮುರಿದಂತಾಗಿವೆ.


ನನ್ನನ್ನು ನೋಡಿದವರೆಲ್ಲರೂ ಗೇಲಿಮಾಡುವರು. ಅವರು ಓರೇ ತುಟಿಮಾಡಿ ತಲೆಯಾಡಿಸುತ್ತಾ,


ನೀವು ಕೋಪದಿಂದಿರುವಾಗ ಎಚ್ಚರಿಕೆಯಾಗಿದ್ದು ಪಾಪಮಾಡದಿರಿ. ಹಾಸಿಗೆಯ ಮೇಲಿರುವಾಗ ಹೃದಯಗಳನ್ನು ಪರೀಕ್ಷಿಸಿಕೊಳ್ಳಿರಿ.


ನಿನ್ನ ಜನರನ್ನು ರಕ್ಷಿಸಲು ನೀನು ಬಂದೆ. ನೀನು ಆರಿಸಿದ್ದ ರಾಜನನ್ನು ಜಯದ ಕಡೆಗೆ ನಡಿಸುವುದಕ್ಕಾಗಿ ಬಂದೆ. ಪ್ರತೀ ದುಷ್ಟ ಕುಟುಂಬದ ನಾಯಕನನ್ನು ನೀನು ಸಂಹರಿಸಿದೆ. ಭೂಲೋಕದಲ್ಲಿದ್ದ ಪ್ರಮುಖನಿಂದಿಡಿದು ಪ್ರಮುಖನಲ್ಲದವನವರೆಗೂ ನೀನು ಹತಿಸಿದೆ.


ಆದಾಗ್ಯೂ ನೀನು ನಿನ್ನ ಮೇಘದ ಬಿಲ್ಲನ್ನು ತೋರಿಸಿದೆ. ಈ ಲೋಕದ ಮನುಷ್ಯರೊಂದಿಗೆ ಅದು ನಿನ್ನ ಒಡಂಬಡಿಕೆಯ ಸಾಕ್ಷಿ. ಭೂಮಿಯು ನದಿಯನ್ನು ಇಬ್ಭಾಗವಾಗಿ ಮಾಡಿತು.


ತೇಮಾನಿನಿಂದ ಯೆಹೋವನು ಬರುತ್ತಿದ್ದಾನೆ. ಪರಿಶುದ್ಧನಾದವನು ಪಾರಾನ್ ಪರ್ವತದಿಂದ ಬರುತ್ತಿದ್ದಾನೆ. ಯೆಹೋವನ ಮಹಿಮೆಯು ಆಕಾಶಮಂಡಲವನ್ನು ಮುಚ್ಚುತ್ತದೆ. ಅವನ ಸ್ತೋತ್ರವು ಭೂಲೋಕವನ್ನು ತುಂಬುತ್ತದೆ.


ಜನರೇ, ಇನ್ನೆಷ್ಟರವರೆಗೆ ನನ್ನ ಬಗ್ಗೆ ಕೆಟ್ಟದ್ದನ್ನು ಹೇಳುವಿರಿ? ಅಸತ್ಯವನ್ನೇ ಪ್ರೀತಿಸುತ್ತಾ, ನನ್ನ ಮೇಲೆ ಹೊರಿಸಲು ಸುಳ್ಳಪವಾದಗಳಿಗಾಗಿ ಯಾಕೆ ಹುಡುಕುತ್ತಿದ್ದೀರಿ?


ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.


ನಾನು ಯೆಹೋವನಿಗೆ ಪ್ರಾರ್ಥಿಸಲು, ಆತನು ತನ್ನ ಪವಿತ್ರ ಪರ್ವತದಿಂದ ಉತ್ತರಿಸುವನು.


ವೈರಿಗಳು ನಮ್ಮ ಮೇಲೆ ಆಕ್ರಮಣ ಮಾಡಿದಾಗ ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು