ಕೀರ್ತನೆಗಳು 30:12 - ಪರಿಶುದ್ದ ಬೈಬಲ್12 ನಾನು ಮೌನವಾಗಿರದೆ ಸದಾಕಾಲ ನಿನ್ನನ್ನು ಸ್ತುತಿಸುವೆನು. ನನ್ನ ದೇವರಾದ ಯೆಹೋವನೇ, ನಿನ್ನನ್ನು ಸದಾಕಾಲ ಸ್ತುತಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಎಂದೇ ಮೌನವಿರದೆ ಎನ್ನ ಮನವು ನಿನಗೆ ಹಾಡಲಿ ಕೀರ್ತನೆ I ಹೇ ಪ್ರಭು, ಎನ್ನ ದೇವ, ನಿನಗೆನ್ನ ಅನಂತ ಧನ್ಯ ವಂದನೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದ್ದರಿಂದ ನನ್ನ ಹೃದಯವು ಮೌನವಿರದೆ ನಿಮ್ಮನ್ನು ಯುಗಯುಗಕ್ಕೂ ಕೊಂಡಾಡುತ್ತಿರುವುದು. ನನ್ನ ದೇವರಾದ ಯೆಹೋವ ದೇವರೇ, ನಾನು ನಿಮ್ಮನ್ನು ಸದಾಕಾಲವೂ ಸ್ತುತಿಸುವೆನು. ಅಧ್ಯಾಯವನ್ನು ನೋಡಿ |
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”