Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 30:9 - ಪರಿಶುದ್ದ ಬೈಬಲ್‌

9 “ದೇವರೇ, ನಾನು ಸತ್ತು ಸಮಾಧಿಯೊಳಗೆ ಹೋದರೆ, ಅದರಿಂದ ಒಳ್ಳೆಯದೇನಾದೀತು? ಸತ್ತವರು ಕೇವಲ ಮಣ್ಣಿನಲ್ಲಿ ಬಿದ್ದಿರುವರು! ಅವರು ನಿನ್ನನ್ನು ಸ್ತುತಿಸುವುದಿಲ್ಲ! ಶಾಶ್ವತವಾದ ನಿನ್ನ ನಂಬಿಗಸ್ತಿಕೆಯ ಕುರಿತು ಅವರು ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನನ್ನ ಪ್ರಾಣ ನಷ್ಟದಿಂದ ನಿನಗೇನು ಫಲ? I ಸಮಾಧಿಗೆ ನಾನಿಳಿದರೆ ನಿನಗೇನು ಲಾಭ?” II “ಸತ್ತವರ ಬೂದಿ ನಿನ್ನ ಸ್ತುತಿಸಬಲ್ಲುದೆ? I ನಿನ್ನ ಸತ್ಯತೆಯನ್ನದು ಸಾರಲು ಬಲ್ಲುದೆ?” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವದೋ? ಅದು ನಿನ್ನ ನಂಬಿಕೆಯನ್ನು ಹೊಗಳುವದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ಸಮಾಧಿಯಲ್ಲಿ ಇಳಿದು ಹೋಗಿ ನಾಶವಾದರೆ, ಅದರಿಂದ ನಿಮಗೆ ಆಗುವ ಲಾಭವೇನು? ಧೂಳು ನಿಮ್ಮನ್ನು ಸ್ತುತಿಸುವುದೋ? ಅದು ನಿಮ್ಮ ನಂಬಿಗಸ್ತಿಕೆಯನ್ನು ಪ್ರಕಟಿಸುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 30:9
7 ತಿಳಿವುಗಳ ಹೋಲಿಕೆ  

ಸತ್ತವರು ನಿನ್ನನ್ನು ಜ್ಞಾಪಿಸಿಕೊಳ್ಳುವರೇ? ಸಮಾಧಿಗಳಲ್ಲಿರುವವರು ನಿನ್ನನ್ನು ಸ್ತುತಿಸುವರೇ? ಆದ್ದರಿಂದ ನನ್ನನ್ನು ಗುಣಪಡಿಸು.


ಸತ್ತವರು ನಿನ್ನನ್ನು ಸ್ತುತಿಸುವದಿಲ್ಲ. ಪಾತಾಳದಲ್ಲಿರುವ ಜನರು ನಿನ್ನನ್ನು ಸ್ತುತಿಸುವದಿಲ್ಲ. ಸತ್ತುಹೋದವರು ಸಹಾಯಕ್ಕಾಗಿ ನಿನ್ನ ಮೇಲೆ ಭರವಸವಿಡರು. ಅವರು ಭೂಮಿಯಲ್ಲಿರುವ ಆಳವಾದ ಕುಣಿಗೆ ಸೇರುವರು. ಅವರು ತಿರುಗಿ ಮಾತನಾಡುವದೇ ಇಲ್ಲ.


ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.


ನಾನು ಸಾಯುವುದಿಲ್ಲ; ನಾನು ಜೀವದಿಂದಿದ್ದು ಯೆಹೋವನ ಕಾರ್ಯಗಳ ಕುರಿತು ಹೇಳುತ್ತೇನೆ.


ನಾನು ಆತನಿಗೆ ಪ್ರಾರ್ಥಿಸಿದೆನು; ಆತನನ್ನು ಸ್ತುತಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು