ಕೀರ್ತನೆಗಳು 31:11 - ಪರಿಶುದ್ದ ಬೈಬಲ್11 ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ; ನನ್ನ ನೆರೆಹೊರೆಯವರೂ ನನ್ನನ್ನು ನಿಂದಿಸುವರು; ನನ್ನ ಸಂಬಂಧಿಕರೂ ನನ್ನ ವಿಷಯದಲ್ಲಿ ಭಯಪಡುವರು; ನನ್ನನ್ನು ದಾರಿಯಲ್ಲಿ ಕಂಡರೂ ಕಾಣದಂತೆ ಹೊರಟುಹೋಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಶತ್ರುಗಳ ದೂಷಣೆಗೆ ಗುರಿಯಾದೆ, ನೆರೆಯವರಿಗೆ ನಿಂದಾಸ್ಪದನಾದೆ I ಮಿತ್ರರೂ ಬೆದರುವಂತಾದೆ; ದಾರಿಹೋಕರು ದೂರವಾಗುವಂತಾದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನನ್ನ ವೈರಿಗಳೆಲ್ಲರ ನಿಮಿತ್ತವಾಗಿ ನನ್ನ ನೆರೆಯವರಿಗೆ ನಾನು ನಿಂದೆಯೂ, ಮಿತ್ರರಿಗೆ ಹೆದರಿಕೆಯೂ ಆಗಿದ್ದೇನೆ; ದಾರಿಯಲ್ಲಿ ನನ್ನನ್ನು ಕಂಡವರು ನನ್ನನ್ನು ಬಿಟ್ಟು ಓಡಿಹೋಗುತ್ತಾರೆ. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.