ಕೀರ್ತನೆಗಳು 31:14 - ಪರಿಶುದ್ದ ಬೈಬಲ್14 ಯೆಹೋವನೇ, ನಾನಂತೂ ನಿನ್ನಲ್ಲೇ ಭರವಸವಿಟ್ಟಿದ್ದೇನೆ. ನೀನೇ ನನ್ನ ದೇವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ; ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾನಾದರೋ ಪ್ರಭೂ, ನಿನ್ನಲೆ ಭರವಸೆಯಿಟ್ಟಿರುವೆ I ನೀನೆ ನನ್ನ ದೇವರೆಂದು ಪ್ರಭು ಸಾರುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ; ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರೇ, ನಾನು ನಿಮ್ಮಲ್ಲಿ ಭರವಸೆ ಇಟ್ಟಿದ್ದೇನೆ; “ನನ್ನ ದೇವರು ನೀವೇ,” ಎಂದು ಹೇಳಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿ |
ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.