Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:15 - ಪರಿಶುದ್ದ ಬೈಬಲ್‌

15 ನನ್ನ ಜೀವವು ನಿನ್ನ ಕೈಯಲ್ಲಿದೆ. ವೈರಿಗಳಿಂದ ನನ್ನನ್ನು ರಕ್ಷಿಸು; ನನ್ನನ್ನು ಅಟ್ಟಿಸಿಕೊಂಡು ಬರುತ್ತಿರುವ ಜನರಿಂದ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿನ್ನ ಕೈಯಲ್ಲಿದೆ ನನ್ನ ಇಡೀ ಜೀವಮಾನ I ಬೆನ್ನಟ್ಟಿಬರುವ ವೈರಿಯಿಂದ ರಕ್ಷಿಸೆನ್ನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಗೆ ನನ್ನನ್ನು ತಪ್ಪಿಸಿಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನ ಸಮಯವು ನಿಮ್ಮ ಕೈಯಲ್ಲಿ ಇವೆ; ನನ್ನ ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:15
31 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ದಿನಗಳನ್ನು ಮತ್ತು ಕಾಲಗಳನ್ನು ನಿರ್ಧರಿಸುವ ಅಧಿಕಾರವಿರುವುದು ತಂದೆಯೊಬ್ಬನಿಗಷ್ಟೇ. ನೀವು ಅವುಗಳನ್ನು ತಿಳಿದುಕೊಳ್ಳಲಾಗುವುದಿಲ್ಲ.


ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಪರಲೋಕದ ಕಡೆಗೆ ನೋಡಿ ಹೀಗೆ ಪ್ರಾರ್ಥಿಸಿದನು: “ತಂದೆಯೇ, ಸಮಯವು ಬಂದಿದೆ. ನಿನ್ನ ಮಗನನ್ನು ಮಹಿಮೆಪಡಿಸು. ಆಗ ಮಗನು ನಿನ್ನನ್ನು ಮಹಿಮೆಪಡಿಸಬಲ್ಲನು.


ಯೇಸು ತನ್ನ ಸಹೋದರರಿಗೆ, “ನನಗೆ ಸರಿಯಾದ ಸಮಯವು ಇನ್ನೂ ಬಂದಿಲ್ಲ. ನಿಮಗಾದರೋ ಹೋಗಲು ಎಲ್ಲಾ ಸಮಯವೂ ಸರಿಯಾಗಿರುತ್ತದೆ.


ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ನೀನು ನನಗೆ ಬೇಕೇಬೇಕು. ನನ್ನನ್ನು ಬೆನ್ನಟ್ಟುತ್ತಿರುವ ಜನರಿಂದ ನನ್ನನ್ನು ರಕ್ಷಿಸು. ಅವರು ನನಗಿಂತ ಬಹು ಬಲಿಷ್ಠರಾಗಿದ್ದಾರೆ.


“ಸರ್ವಶಕ್ತನಾದ ದೇವರು ನ್ಯಾಯತೀರ್ಪಿಗೆ ಸಮಯವನ್ನು ಗೊತ್ತುಪಡಿಸದಿರುವುದೇಕೆ? ಆತನನ್ನು ಅರಿತವರಿಗೆ ಸಮಯವು ತಿಳಿಯದಿರುವುದೇಕೆ?


ನನ್ನ ಜೀವಿತವನ್ನು ದೇವರಿಗಾಗಿ ಅರ್ಪಿಸುತ್ತಿದ್ದೇನೆ. ನಾನು ಈ ಲೋಕವನ್ನು ಬಿಟ್ಟುಹೋಗುವ ಕಾಲವು ಸಮೀಪಿಸಿದೆ.


ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ; ಶತ್ರುಗಳಿಂದ ನನ್ನನ್ನು ರಕ್ಷಿಸು.


ಆದರೆ ನನ್ನ ಶತ್ರುಗಳು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ಅವರು ನನ್ನ ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾರೆ. ಬಹುಕಾಲದ ಹಿಂದೆ ಸತ್ತವರನ್ನು ಕಾರ್ಗತ್ತಲೆಯ ಸಮಾಧಿಗೆ ನೂಕುವಂತೆ ಅವರು ನನ್ನನ್ನು ನೂಕುತ್ತಿದ್ದಾರೆ.


“‘ನಿನ್ನ ದಿನಗಳು ಮುಗಿದುಹೋಗುತ್ತವೆ; ನೀನು ನಿನ್ನ ಪೂರ್ವಿಕರ ಜೊತೆಯಲ್ಲಿ ಸೇರುತ್ತಿ. ಆ ಸಮಯದಲ್ಲಿ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ರಾಜನನ್ನಾಗಿ ಮಾಡಿ ಅವನ ರಾಜ್ಯವನ್ನು ಭದ್ರಗೊಳಿಸುತ್ತೇನೆ.


ಯೆಹೋವನಾಣೆ, ಸೌಲನನ್ನು ಸ್ವತಃ ಯೆಹೋವನೇ ದಂಡಿಸುತ್ತಾನೆ. ಸೌಲನು ಸ್ವಾಭಾವಿಕನಾದ ಮರಣಹೊಂದಬಹುದು ಅಥವಾ ಯುದ್ಧದಲ್ಲಿ ಕೊಲ್ಲಲ್ಪಡಬಹುದು.


ನಾನು ಬಹುಬೇಗ ಈ ದೇಹವನ್ನು ತ್ಯಜಿಸಬೇಕೆಂಬುದೂ ನನಗೆ ತಿಳಿದಿದೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಅದನ್ನು ತೋರ್ಪಡಿಸಿದ್ದಾನೆ.


ದೇವರ ದೂತನು, ‘ಪೌಲನೇ, ಭಯಪಡಬೇಡ! ನೀನು ಸೀಸರನ ಮುಂದೆ ನಿಂತುಕೊಳ್ಳಬೇಕು. ನಿನ್ನೊಂದಿಗೆ ನೌಕಾಯಾನ ಮಾಡತ್ತಿರುವ ಎಲ್ಲಾ ಜನರ ಪ್ರಾಣಗಳನ್ನು ಉಳಿಸುವುದಾಗಿ ದೇವರು ನಿನಗೆ ವಾಗ್ದಾನವನ್ನು ಮಾಡಿದ್ದಾನೆ’ ಎಂದು ಹೇಳಿದನು.


ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೋ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.


ಯೇಸು ಮಾತನ್ನು ಮುಂದುವರಿಸಿ, “ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ನನ್ನನ್ನು ಈ ಸಂಕಟ ಕಾಲದಿಂದ ರಕ್ಷಿಸು ಎನ್ನಬೇಕೇ?’ ಇಲ್ಲ! ಸಂಕಟಪಡುವುದಕ್ಕೋಸ್ಕರವೇ ನಾನು ಬಂದಿದ್ದೇನೆ.


ಇದನ್ನು ಕೇಳಿ ಜನರು ಆತನನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸುವಿನ ಮೇಲೆ ಕೈಹಾಕಲು ಯಾರಿಗೂ ಸಾಧ್ಯವಿರಲಿಲ್ಲ, ಏಕೆಂದರೆ ಯೇಸುವನ್ನು ಕೊಲ್ಲಲು ಇನ್ನೂ ಸರಿಯಾದ ಸಮಯ ಬಂದಿರಲಿಲ್ಲ.


ಯೇಸು ಮತ್ತೆ ಪರಲೋಕಕ್ಕೆ ಹಿಂತಿರುಗುವ ಸಮಯ ಹತ್ತಿರವಾಗುತ್ತಿತ್ತು. ಆದ್ದರಿಂದ ಆತನು ಜೆರುಸಲೇಮಿಗೆ ಹೋಗಲು ತೀರ್ಮಾನಿಸಿದನು.


ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನನ್ನನ್ನು ಕೊಲ್ಲಬೇಕೆಂದಿರುವ ಶತ್ರುಗಳನ್ನು ಸೋಲಿಸು. ನಾನು ನಿನ್ನ ಸೇವಕನಾಗಿರುವೆ.


ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.


ಯೆಹೋವನೇ, ಎದ್ದೇಳು, ವೈರಿಗಳ ಬಳಿಗೆ ಹೋಗು. ಅವರನ್ನು ಶರಣಾಗತರನ್ನಾಗಿ ಮಾಡು. ನಿನ್ನ ಖಡ್ಗವನ್ನು ಪ್ರಯೋಗಿಸಿ ದುಷ್ಟರಿಂದ ನನ್ನನ್ನು ರಕ್ಷಿಸು.


ಮರುದಿನ ರಾತ್ರಿ ಪ್ರಭು ಯೇಸುವು ಬಂದು ಪೌಲನ ಬಳಿ ನಿಂತುಕೊಂಡು, “ಧೈರ್ಯದಿಂದಿರು! ನೀನು ನನ್ನ ಬಗ್ಗೆ ಜೆರುಸಲೇಮಿನ ಜನರಿಗೆ ತಿಳಿಸಿರುವೆ. ನೀನು ರೋಮಿಗೂ ಹೋಗಿ ಅಲ್ಲಿರುವ ಜನರಿಗೆ ನನ್ನ ಬಗ್ಗೆ ತಿಳಿಸಬೇಕು!” ಎಂದು ಹೇಳಿದನು.


ಆದರೆ ಮೋಡವು ಪವಿತ್ರಗುಡಾರದ ಮೇಲಿದ್ದಾಗ ಜನರು ಪ್ರಯಾಣ ಮಾಡುತ್ತಿರಲಿಲ್ಲ. ಮೋಡವು ಮೇಲೇಳುವವರೆಗೆ ಅವರು ಅಲ್ಲೇ ಇರುತ್ತಿದ್ದರು.


ಆಸನು ಜೆರಹನ ವಿರುದ್ಧ ಯುದ್ಧಮಾಡಲು ಹೊರಟನು. ಮಾರೇಷದ ಚೆಫಾತ ಎಂಬ ಕಣಿವೆಯಲ್ಲಿ ವ್ಯೂಹ ಕಟ್ಟಿದರು.


ನನ್ನ ದೇವರೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ. ವೈರಿಗಳು ನನ್ನನ್ನು ನೋಡಿ ಗೇಲಿ ಮಾಡದಂತಾಗಲಿ!


ನಾನು ಯೆಹೋವನಿಗೆ, “ನೀನೇ ನನ್ನ ಆಶ್ರಯಸ್ಥಾನವೂ ನನ್ನ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ” ಎಂದು ಹೇಳುವೆನು.


ಯೆಹೋವನೇ, ನನ್ನ ಬಲಿಷ್ಠನಾದ ಒಡೆಯನು ನೀನೇ. ನನ್ನ ರಕ್ಷಕನೂ ನೀನೇ, ನನ್ನ ಶಿರಸ್ತ್ರಾಣವೂ ನೀನೇ.


ಯೆಹೋವನೇ, ನೀನೇ ನನ್ನ ದೇವರು. ನಿನ್ನನ್ನು ಗೌರವಿಸಿ ನಿನ್ನ ನಾಮವನ್ನು ಸ್ತುತಿಸುವೆನು. ನೀನು ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ಬಹಳ ಕಾಲದ ಹಿಂದೆ ನೀನು ಹೇಳಿರುವ ವಿಷಯಗಳು ಸತ್ಯವೇ ಸರಿ. ನೀನು ಮುಂತಿಳಿಸಿದಂತೆಯೇ ಎಲ್ಲವೂ ಸಂಭವಿಸಿದವು.


“ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನ್ನು ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನ್ನನ್ನು ದಂಡಿಸಿದೆ. ನಾನು ಪಾಠವನ್ನು ಕಲಿತೆನು. ನಾನು ತರಬೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನ್ನನ್ನು ದಂಡಿಸುವದನ್ನು ದಯವಿಟ್ಟು ನಿಲ್ಲಿಸು. ನಾನು ನಿನ್ನಲ್ಲಿಗೆ ಹಿಂದಿರುಗಿ ಬರುತ್ತೇನೆ. ನಿಜವಾಗಿಯೂ ನೀನೇ ನನ್ನ ದೇವರಾದ ಯೆಹೋವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು