ಕೀರ್ತನೆಗಳು 31:22 - ಪರಿಶುದ್ದ ಬೈಬಲ್22 ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು. ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಾನಂತೂ ಭಯಭ್ರಾಂತನಾಗಿ, “ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು” ಎಂದು ಅಂದುಕೊಂಡೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ದೇವರಿಂದ ದೂರನಾದೆಯೆಂಬ ದಿಗಿಲೇರಲು I ಅಕ್ಕರೆಯಿಂದ ನೀ ಕಿವಿಗೊಟ್ಟೆ ನಾ ಮೊರೆಯಿಡಲು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಾನಂತೂ ಭಯಭ್ರಾಂತನಾಗಿ - ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನೆಂದು ಹೇಳಿಕೊಂಡಿದ್ದೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ನಾನು ನಿಮ್ಮ ಕಣ್ಣುಗಳ ಎದುರಿನಿಂದ ತೆಗೆದು ಹಾಕಲಾಗಿದ್ದೇನೆ” ಎಂದು ನನ್ನ ಗಾಬರಿಯಲ್ಲಿ ಹೇಳಿದೆನು; ಆದರೂ ನಾನು ಸಹಾಯಕ್ಕಾಗಿ ನಿಮಗೆ ಮೊರೆಯಿಡಲು ನೀವು ಕರುಣೆಗಾಗಿ ಕೂಗಿದ್ದನ್ನು ಕೇಳಿದ್ದೀರಿ. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.