ಕೀರ್ತನೆಗಳು 31:23 - ಪರಿಶುದ್ದ ಬೈಬಲ್23 ದೇವರ ಭಕ್ತರೇ, ನೀವು ಯೆಹೋವನನ್ನು ಪ್ರೀತಿಸಲೇಬೇಕು! ಆತನು ನಂಬಿಗಸ್ತರನ್ನು ಕಾಪಾಡುವನು; ಗರ್ವಿಷ್ಠರನ್ನಾದರೋ ದಂಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ. ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ; ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿತೀರಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಪ್ರಭುವಿನ ಭಕ್ತರೇ, ಪ್ರೀತಿಸಿ ನೀವಾತನನು ಅಧಿಕಾಧಿಕವಾಗಿ I ಶರಣರನು ರಕ್ಷಿಸಿ, ಸೊಕ್ಕಿನವರನು ಶಿಕ್ಷಿಸುವನಾತ ಸರಿಯಾಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ. ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ; ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿ ತೀರಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಭಕ್ತರೇ, ಯೆಹೋವ ದೇವರನ್ನು ಪ್ರೀತಿಸಿರಿ; ಯೆಹೋವ ದೇವರು ನಂಬಿಗಸ್ತರನ್ನು ಕಾಯುತ್ತಾರೆ; ಅಹಂಕಾರಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನನ್ನು ನೀವು ಸಂಪೂರ್ಣವಾಗಿ ಪ್ರೀತಿಸಬೇಕೆಂದು ಆಜ್ಞಾಪಿಸುತ್ತೇನೆ. ಆತನ ಆಜ್ಞೆಗಳಿಗೆ, ನಿಯಮಗಳಿಗೆ ಮತ್ತು ವಿಧಿಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. ಆಗ ನೀವು ಬದುಕುವಿರಿ ಮತ್ತು ನಿಮ್ಮ ಜನಾಂಗ ದೊಡ್ಡದಾಗಿ ಬೆಳೆಯುವುದು. ನಿಮಗಾಗಿ ತೆಗೆದುಕೊಳ್ಳಲು ಪ್ರವೇಶಿಸಲಿರುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.