ಕೀರ್ತನೆಗಳು 31:7 - ಪರಿಶುದ್ದ ಬೈಬಲ್7 ದೇವರೇ, ನಿನ್ನ ಕರುಣೆಯು ನನ್ನನ್ನು ಉಲ್ಲಾಸಗೊಳಿಸುವುದು. ನನ್ನ ಸಂಕಟವನ್ನು ನೀನು ನೋಡಿರುವೆ; ನನಗಿರುವ ಆಪತ್ತುಗಳು ನಿನಗೆ ತಿಳಿದಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; ನಾನು ಕುಗ್ಗಿಹೋಗಿರುವುದನ್ನು ನೋಡಿ, ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹರ್ಷಾನಂದಗೊಳ್ಳುವೆ ನೆನೆದು ನಿನ್ನ ಅನಂತ ಪ್ರೀತಿಯನು I ಈಕ್ಷಿಸಿದೆ ನೀ ಭಕ್ತನ ದೀನತೆಯನು, ಲಕ್ಷಿಸಿದೆ ಬಾಧೆಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; ನಾನು ಕುಗ್ಗಿಹೋಗಿರುವದನ್ನು ನೋಡಿ ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಉಲ್ಲಾಸಿಸಿ ಸಂತೋಷ ಪಡುವೆನು; ಏಕೆಂದರೆ ನೀವು ನನ್ನ ಕಷ್ಟಗಳನ್ನು ಲಕ್ಷ್ಯಕ್ಕೆ ತಂದು, ನನ್ನ ಪ್ರಾಣದ ಸಂಕಟಗಳನ್ನು ಅರಿತಿದ್ದೀರಿ. ಅಧ್ಯಾಯವನ್ನು ನೋಡಿ |
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.