Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:9 - ಪರಿಶುದ್ದ ಬೈಬಲ್‌

9 ಯೆಹೋವನೇ, ನನಗೆ ಅನೇಕ ಇಕ್ಕಟ್ಟುಗಳಿವೆ; ನನ್ನನ್ನು ಕರುಣಿಸು. ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ, ನನ್ನ ಗಂಟಲು ನೋಯುತ್ತಿದೆ, ಹೊಟ್ಟೆಯೂ ನೋಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ. ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣು ಗುಡ್ಡೆ ಸೇದಿಹೋಗಿದೆ; ದೇಹಾತ್ಮಗಳು ಕುಗ್ಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸಂಕಟದಲಿ ನಾ ಸಿಲುಕಿಕೊಂಡಿರುವೆ I ಕಣ್ಣುಗುಡ್ಡೆಗಳಿದೋ ಸೇದಿಹೋಗಿವೆ I ದೇಹಾತ್ಮಗಳೆರಡು ಕುಗ್ಗಿಹೋಗಿವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ. ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣುಗುಡ್ಡು ಸೇದಿಕೊಂಡಿದೆ; ದೇಹಾತ್ಮಗಳು ಕುಗ್ಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಇಕ್ಕಟ್ಟಿನಲ್ಲಿದ್ದೇನೆ; ನನ್ನ ಕಣ್ಣೂ ನನ್ನ ಪ್ರಾಣವೂ ನನ್ನ ದೇಹವೂ ದುಃಖದಿಂದ ಕ್ಷೀಣವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:9
19 ತಿಳಿವುಗಳ ಹೋಲಿಕೆ  

ನನ್ನ ವೈರಿಗಳು ನನಗೆ ಅನೇಕ ತೊಂದರೆಗಳನ್ನು ಮಾಡಿರುವುದರಿಂದ ನನಗೆ ದುಃಖವೂ ಗೋಳಾಟವೂ ಉಂಟಾಗಿವೆ. ನನ್ನ ಕಣ್ಣುಗಳು ಬಲಹೀನಗೊಂಡಿವೆ; ಅತ್ತತ್ತು ಆಯಾಸಗೊಂಡಿವೆ.


ನನ್ನ ಎಲ್ಲಾ ಸಂಕಟಗಳಿಂದ ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ. ಯೆಹೋವನೇ, ನಾನು ನಿನಗೆ ಎಡಬಿಡದೆ ಪ್ರಾರ್ಥಿಸುವೆನು! ನನ್ನ ಕೈಗಳನ್ನು ಎತ್ತಿ ನಿನಗೆ ಪ್ರಾರ್ಥಿಸುವೆನು!


ನನ್ನ ಹೃದಯವೂ ದೇಹವೂ ನಾಶವಾಗುತ್ತವೆ; ಆದರೆ ಎಂದೆಂದಿಗೂ ನೀನೇ ನನಗೆ ಆಶ್ರಯಸ್ಥಾನವೂ ನನ್ನ ದೇವರೂ ಆಗಿರುವೆ.


ಇವುಗಳ ದೆಸೆಯಿಂದಾಗಿ ನಮ್ಮ ಹೃದಯಗಳು ಎಡಬಿಡದೆ ನೋಯುತ್ತಿವೆ. ನಮ್ಮ ಕಣ್ಣುಗಳು ಸರಿಯಾಗಿ ಕಾಣದಂತಾಗಿವೆ.


ಸಹಾಯಕ್ಕಾಗಿ ಎದುರುನೋಡುತ್ತಾ ನಮ್ಮ ಕಣ್ಣುಗಳು ಮೊಬ್ಬಾದವು. ಆದರೆ ಯಾವ ಸಹಾಯವೂ ಬರಲಿಲ್ಲ. ಯಾವ ಜನಾಂಗವಾದರೂ ಬಂದು ನಮ್ಮನ್ನು ರಕ್ಷಿಸುವುದೇನೋ ಎಂದು ಕೋವರದಲ್ಲಿ ನೋಡುತ್ತಲೇ ಇದ್ದೆವು, ಆದರೆ ಯಾವ ಜನಾಂಗವೂ ಬರಲಿಲ್ಲ.


ದೇವಜನರಲ್ಲಿ ಕೆಲವರು ಸೆರೆಯಾಳುಗಳಾಗಿದ್ದರು; ಕಾರ್ಗತ್ತಲೆಯ ಸೆರೆಮನೆಗಳಲ್ಲಿ ಬಂಧಿತರಾಗಿದ್ದರು.


ದೇವರೇ ದಿನವೆಲ್ಲಾ ನಾನು ಕಷ್ಟಪಡುತ್ತಿರುವೆ. ಪ್ರತಿ ಮುಂಜಾನೆಯೂ ನೀನು ನನ್ನನ್ನು ಶಿಕ್ಷಿಸುವೆ.


ನಾನು ಇಕ್ಕಟ್ಟಿನಲ್ಲಿದ್ದಾಗ ಸಹಾಯಕ್ಕಾಗಿ ನಿನ್ನನ್ನು ಕೂಗಿಕೊಂಡಾಗ ಮಾಡಿದ ಹರಕೆಗಳನ್ನು ಸಲ್ಲಿಸುವೆನು.


ನಾವು ಧೂಳಿಗೆ ತಳ್ಳಲ್ಪಟ್ಟವರಾಗಿದ್ದೇವೆ. ನಮ್ಮ ಶರೀರವು ನೆಲಕ್ಕೆ ಹತ್ತಿಕೊಂಡಿದೆ.


ನನ್ನ ಕಣ್ಣುಗಳು ಕುರುಡಾಗಿವೆ, ನಾನು ಬಹು ದುಃಖಿತನಾಗಿದ್ದೇನೆ. ಅತ್ಯಧಿಕವಾದ ನೋವಿನಲ್ಲಿದ್ದೇನೆ; ನನ್ನ ದೇಹವು ನೆರಳಿನಂತೆ ಬಹು ತೆಳ್ಳಗಾಗಿದೆ.


ಆತನು ನನ್ನನ್ನು ಸುರಕ್ಷಿತವಾದ ಸ್ಥಳಕ್ಕೆ ತಂದನು. ಆತನು ನನ್ನನ್ನು ಪ್ರೀತಿಸಿ ರಕ್ಷಿಸಿದನು.


ನಾನು ನಿರಪರಾಧಿಯಾಗಿದ್ದರಿಂದ ಯೆಹೋವನು ನನಗೆ ಪ್ರತಿಫಲ ನೀಡಿದನು; ನಾನು ತಪ್ಪನ್ನು ಮಾಡಿಲ್ಲದ ಕಾರಣ ನನಗೆ ಒಳ್ಳೆಯದನ್ನು ಮಾಡಿದನು.


ಆಗ ನಾನು ಶತ್ರುಗಳನ್ನು ಬೆನ್ನಟ್ಟಿ ಹಿಡಿಯಲು ಶಕ್ತನಾಗುವೆ. ಅವರನ್ನು ನಾಶಮಾಡುವ ತನಕ ನಾನು ಹಿಂತಿರುಗಿ ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು