Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 32:11 - ಪರಿಶುದ್ದ ಬೈಬಲ್‌

11 ನೀತಿವಂತರೇ, ಹರ್ಷಿಸಿರಿ; ಯೆಹೋವನಲ್ಲಿ ಆನಂದಿಸಿರಿ. ಶುದ್ಧಹೃದಯವುಳ್ಳವರೇ, ಉಲ್ಲಾಸಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸಜ್ಜನರೇ ಸಂತೋಷಿಸಿರಿ, ಉಲ್ಲಾಸಿಸಿರಿ ಪ್ರಭುವಿನಲಿ I ಯಥಾರ್ಥಚಿತ್ತರೇ, ಜಯಕಾರಮಾಡಿ ಆತನ ವಿಷಯದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರ್ರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹಧ್ವನಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯ ಉಳ್ಳವರೇ, ಜಯಗೀತೆ ಹಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 32:11
18 ತಿಳಿವುಗಳ ಹೋಲಿಕೆ  

ಸಜ್ಜನರು ಯೆಹೋವನಲ್ಲಿ ಸಂತೋಷಿಸುತ್ತಾ ಆತನನ್ನೇ ಆಶ್ರಯಿಸಿಕೊಳ್ಳುವರು. ಯಥಾರ್ಥವಂತರು ಯೆಹೋವನನ್ನು ಕೊಂಡಾಡುವರು.


ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ನೀತಿವಂತರೇ, ಯೆಹೋವನಲ್ಲಿ ಸಂತೋಷಪಡಿರಿ! ಆತನ ಪವಿತ್ರ ಹೆಸರನ್ನು ಸನ್ಮಾನಿಸಿರಿ!


ಯೆಹೋವನು ಆಳುತ್ತಿರುವನು! ಭೂಮಿಯು ಸಂತೋಷಿಸಲಿ. ದೂರ ದೇಶಗಳೆಲ್ಲಾ ಹರ್ಷಿಸಲಿ.


ದೇವರಲ್ಲಿ ಭರವಸವಿಟ್ಟಿರುವ ಜನರೆಲ್ಲರೂ ಸದಾಕಾಲ ಸಂತೋಷವಾಗಿರಲಿ. ನಿನ್ನ ಹೆಸರನ್ನು ಪ್ರೀತಿಸುವ ಜನರನ್ನು ಕಾಪಾಡಿ ಅವರಿಗೆ ಶಕ್ತಿಯನ್ನು ದಯಪಾಲಿಸು.


ನೀತಿವಂತರಾದರೋ ದೇವರ ಸನ್ನಿಧಿಯಲ್ಲಿ ಹರ್ಷಿಸಲಿ; ಅವರು ಉಲ್ಲಾಸಿಸುತ್ತಾ ಸಂತೋಷವಾಗಿರಲಿ!


ನೀತಿವಂತರೇ, ಯೆಹೋವನಲ್ಲಿ ಉಲ್ಲಾಸಪಡಿರಿ. ಯಥಾರ್ಥವಂತರು ಆತನನ್ನು ಸ್ತುತಿಸುವುದು ಯೋಗ್ಯವಾಗಿದೆ.


ಅಲ್ಲಿಗೆ ನಿಮ್ಮ ಹೆಂಡತಿ ಮಕ್ಕಳೊಂದಿಗೆ, ನಿಮ್ಮ ಸೇವಕರೊಂದಿಗೆ ಮತ್ತು ನಿಮ್ಮ ಪಟ್ಟಣದಲ್ಲಿ ಸ್ವಾಸ್ತ್ಯವನ್ನು ಹೊಂದದೆ ಇರುವ ಲೇವಿಯರೊಂದಿಗೆ ಹೋಗಿ ಯೆಹೋವನ ಸಮಕ್ಷಮದಲ್ಲಿ ಸಂತೋಷಪಡಬೇಕು.


ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.


ನನ್ನ ಸಹೋದರ ಸಹೋದರಿಯರೇ, ಪ್ರಭುವಿನಲ್ಲಿ ಸಂತೋಷವಾಗಿರಿ. ನಾನು ಮೊದಲು ಬರೆದದ್ದನ್ನೇ ಮತ್ತೆ ಬರೆಯಲು ನನಗೆ ಬೇಸರವೇನೂ ಇಲ್ಲ; ಏಕೆಂದರೆ ಅದು ನಿಮ್ಮನ್ನು ಮತ್ತಷ್ಟು ಸಂರಕ್ಷಿಸುತ್ತದೆ.


ಇಷ್ಟು ಮಾತ್ರವಲ್ಲದೆ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಾವು ದೇವರಲ್ಲಿ ಹರ್ಷಿಸುತ್ತೇವೆ. ಈಗ ನಾವು ದೇವರ ಸ್ನೇಹಿತರಾಗಿರುವುದು ಯೇಸುವಿನಿಂದಲೇ.


ಉನ್ನತವಾದ ಶಿಖರವು ಜೆರುಬ್ಬಾಬೆಲನಿಗೆ ಸಮತಟ್ಟಾದ ನೆಲದಂತಿರುವುದು. ಅವನು ಆಲಯವನ್ನು ಕಟ್ಟುವನು. ಅದರ ಅತಿ ವಿಶೇಷವಾದ ಕಲ್ಲನ್ನಿಟ್ಟ ಬಳಿಕ ಜನರೆಲ್ಲರೂ, ‘ಬಹಳ ಚಂದ, ಬಹಳ ಚಂದ’ ಎಂದು ಆರ್ಭಟಿಸುವರು.”


ಯೆಹೋವನೇ, ನೀತಿವಂತರಿಗೂ ಯಥಾರ್ಥವಂತರಿಗೂ ಉಪಕಾರಮಾಡು.


ಯೆಹೋವನು ಯಾವನನ್ನು ದೋಷಿಯೆಂದು ಹೇಳುವುದಿಲ್ಲವೋ ಯಾವನು ತನ್ನ ಗುಪ್ತಪಾಪಗಳನ್ನು ಅಡಗಿಸಿಟ್ಟುಕೊಳ್ಳುವುದಿಲ್ಲವೋ ಅವನೇ ಧನ್ಯನು.


ನನ್ನ ಗುರಾಣಿಯು ದೇವರೇ. ಆತನು ಯಥಾರ್ಥವಂತರನ್ನು ರಕ್ಷಿಸುವನು.


ಹನ್ನಳು ಇಂತೆಂದಳು: “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ. ನಾನು ನನ್ನ ದೇವರಾದ ಯೆಹೋವನಲ್ಲಿ ಬಲಶಾಲಿಯಾಗಿದ್ದೇನೆ. ನಾನು ನನ್ನ ಶತ್ರುಗಳ ಬಗ್ಗೆ ನಗುವೆನು. ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.


ಭೂನಿವಾಸಿಗಳೆಲ್ಲರೇ, ಯೆಹೋವನಿಗೆ ಆನಂದ ಘೋಷಮಾಡಿರಿ. ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು