ಕೀರ್ತನೆಗಳು 32:2 - ಪರಿಶುದ್ದ ಬೈಬಲ್2 ಯೆಹೋವನು ಯಾವನನ್ನು ದೋಷಿಯೆಂದು ಹೇಳುವುದಿಲ್ಲವೋ ಯಾವನು ತನ್ನ ಗುಪ್ತಪಾಪಗಳನ್ನು ಅಡಗಿಸಿಟ್ಟುಕೊಳ್ಳುವುದಿಲ್ಲವೋ ಅವನೇ ಧನ್ಯನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯಾರಪರಾಧವನು ಪ್ರಭು ಎಣಿಸಿಲ್ಲವೋ I ಯಾರಂತರಂಗದಲಿ ಕುತಂತ್ರವಿಲ್ಲವೋ ಅವರೇ ಧನ್ಯರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ಯಾವನ ಲೆಕ್ಕಕ್ಕೆ ಅಪರಾಧವನ್ನು ಎಣಿಸುವದಿಲ್ಲವೋ ಯಾವನ ಹೃದಯದಲ್ಲಿ ಕಪಟವಿರುವದಿಲ್ಲವೋ ಅವನು ಧನ್ಯನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರು ಯಾರ ಅನ್ಯಾಯವನ್ನು ಎಣಿಸುವುದಿಲ್ಲವೋ, ಯಾರ ಆತ್ಮದಲ್ಲಿ ವಂಚನೆ ಇರುವುದಿಲ್ಲವೋ ಆ ಮನುಷ್ಯನು ಧನ್ಯನು. ಅಧ್ಯಾಯವನ್ನು ನೋಡಿ |
ಅವನು ಆ ಪ್ರಾಣಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಅವನು ಆ ಪಶುವಿನ ಒಂದು ಭಾಗವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಅವನು ರಕ್ತವನ್ನು ಸುರಿಸಿದ್ದರಿಂದ ತನ್ನ ಕಾಣಿಕೆಯನ್ನು ಯೆಹೋವನ ಪವಿತ್ರ ಗುಡಾರದೊಳಗೆ ತೆಗೆದುಕೊಂಡು ಹೋಗಬೇಕು. ಅವನು ಪ್ರಾಣಿಯ ಒಂದು ಭಾಗವನ್ನು ಯೆಹೋವನಿಗೆ ಉಡುಗೊರೆಯಾಗಿ ತೆಗೆದುಕೊಂಡು ಹೋಗದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು.
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.