Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 32:4 - ಪರಿಶುದ್ದ ಬೈಬಲ್‌

4 ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು. ನಾನು ಬೇಸಿಗೆಯಲ್ಲಿ ಒಣಗಿಹೋದ ಭೂಮಿಯಂತಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರಭುವಿನ ಶಿಕ್ಷಾಹಸ್ತ ನನ್ನ ಮೇಲೆ ಭಾರವಾಗಿತ್ತು ಹಗಲಿರುಳು I ಬೇಸಿಗೆಯ ನೀರಿನಂತೆ ಬತ್ತಿಹೋಗಿತ್ತು ನನ್ನ ಶರೀರದ ತಿರುಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ನೀರಿನಂತೆ ನನ್ನ ಶರೀರದ ಸಾರವೆಲ್ಲಾ ಬತ್ತಿಹೋಯಿತು. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರೇ, ರಾತ್ರಿ ಹಗಲು ನಿಮ್ಮ ಕೈ ನನ್ನ ಮೇಲೆ ಭಾರವಾಗಿತ್ತು; ನನ್ನ ಬಲವು ಬೇಸಿಗೆಯ ಬಿಸಿಲಿನಲ್ಲಿ ಕುಂದಿಹೋಗುವಂತೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 32:4
15 ತಿಳಿವುಗಳ ಹೋಲಿಕೆ  

ಎಕ್ರೋನಿನ ಜನರು ಫಿಲಿಷ್ಟಿಯರ ಅಧಿಪತಿಗಳನ್ನೆಲ್ಲಾ ಒಟ್ಟಿಗೆ ಸೇರಿಸಿ, “ಇಸ್ರೇಲರ ದೇವರ ಪವಿತ್ರಪೆಟ್ಟಿಗೆಯು ನಮ್ಮನ್ನೂ ನಮ್ಮ ಜನರನ್ನೂ ಕೊಲ್ಲುವುದಕ್ಕೆ ಮೊದಲೇ ಅದನ್ನು ಅದರ ಸ್ವಸ್ಥಳಕ್ಕೆ ಕಳುಹಿಸಿ” ಎಂದು ಹೇಳಿದರು. ಎಕ್ರೋನಿನ ಜನರು ಬಹಳ ಹೆದರಿಕೊಂಡಿದ್ದರು. ದೇವರು ಅಲ್ಲಿಯ ಜನರ ಜೀವನವನ್ನು ಬಹು ಕಠಿಣಗೊಳಿಸಿದ್ದನು.


ನನ್ನ ಶಕ್ತಿಯು ಒಡೆದುಹೋದ ಮಡಿಕೆಯ ಒಣ ತುಂಡಿನಂತಿದೆ. ನನ್ನ ನಾಲಿಗೆಯು ಬಾಯಿ ಮೇಲ್ಭಾಗಕ್ಕೆ ಅಂಟಿಕೊಳ್ಳುತ್ತಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸಿರುವೆ.


ಯೋಬನೇ, ನನಗೆ ಭಯಪಡಬೇಡ. ನಾನು ನಿನ್ನನ್ನು ಸೋಲಿಸುವುದಿಲ್ಲ.


ನಮ್ಮ ಚರ್ಮವು ಒಲೆಯಂತೆ ಬಿಸಿಯಾಗಿದೆ. ಹಸಿವೆಯಿಂದಾಗಿ ಜ್ವರವು ನಮ್ಮನ್ನು ಸುಡುತ್ತಿದೆ.


ಆದರೆ ಈಗ ಅವರ ಮುಖಗಳು ಕಪ್ಪು ಹೊಗೆಗಿಂತಲೂ ಕಪ್ಪಾಗಿವೆ. ಅವರನ್ನು ಬೀದಿಗಳಲ್ಲಿ ಯಾರೂ ಸಹ ಗುರುತಿಸುವುದಿಲ್ಲ. ಅವರ ಚರ್ಮವು ಅವರ ಮೂಳೆಗಳ ಮೇಲೆ ಸುಕ್ಕುಗೊಂಡಿದೆ. ಅವರ ಚರ್ಮವು ಮರದಂತಾಗಿದೆ.


ನನ್ನ ಚರ್ಮವು ಕಡುಕಪ್ಪಾಗಿದೆ. ನನ್ನ ದೇಹವು ಜ್ವರದಿಂದ ಬಿಸಿಯಾಗಿದೆ.


ಒಬ್ಬನು ತನ್ನ ಸ್ನೇಹಿತನಿಗಾಗಿ ಬೇಡಿಕೊಳ್ಳುವಂತೆ ನನ್ನ ಕಣ್ಣೀರು ನನ್ನ ಪರವಾಗಿ ದೇವರ ಮುಂದೆ ವಾದ ಮಾಡುತ್ತದೆ.


ಆದರೆ ಅದರ ಕಡೆ ಗಮನವಿರಲಿ. ಅದು ತಾನಾಗಿ ಇಸ್ರೇಲಿಗೆ ಸೇರಿದ ಬೇತ್‌ಷೆಮೆಷಿನ ಕಡೆಗೆ ಹೋದರೆ, ಆಗ ಆ ದೊಡ್ಡ ಕೇಡನ್ನು ನಮಗುಂಟು ಮಾಡಿದವನು ಯೆಹೋವನೇ ಸರಿ. ಆದರೆ ಹಸುಗಳು ಬೇತ್‌ಷೆಮೆಷಿಗೆ ಹೋಗದಿದ್ದರೆ, ನಮ್ಮನ್ನು ಶಿಕ್ಷಿಸಿದವನು ಯೆಹೋವನಲ್ಲವೆಂದು ನಮಗೆ ಗೊತ್ತಾಗುವುದು. ನಮಗುಂಟಾದ ಕಾಯಿಲೆಯು ತಾನಾಗಿಯೇ ಬಂದದ್ದೆಂದು ತಿಳಿಯುವುದು” ಎಂದು ಹೇಳಿದರು.


ಆದರೆ ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು “ಗತ್”ಗೆ ಕಳುಹಿಸಿದ ನಂತರ ಯೆಹೋವನು “ಗತ್” ನಗರವನ್ನು ದಂಡಿಸಿದನು. ಅಲ್ಲಿಯ ಜನರು ಬಹಳ ಭಯಗೊಂಡರು. ಚಿಕ್ಕವರು, ದೊಡ್ಡವರು ಎನ್ನದೆ ಎಲ್ಲರಿಗೂ ದೇವರು ತೊಂದರೆ ಮಾಡಿದನು. ಗತ್ ಜನರಿಗೂ ದೇವರು ಗಡ್ಡೆರೋಗವನ್ನು ಬರಮಾಡಿದನು.


ನೀವು ಅವರನ್ನು ಮದುವೆಯಾಗಬೇಕಾದರೆ ಅವರು ಬೆಳೆದು ಪ್ರಾಯಕ್ಕೆ ಬರುವವರೆಗೆ ಕಾದುಕೊಂಡಿರಬೇಕಾಗುತ್ತದೆ. ನೀವು ಗಂಡಂದಿರ ಸಲುವಾಗಿ ಅಷ್ಟುಕಾಲ ಕಾದುಕೊಂಡಿರುವುದು ನನಗಿಷ್ಟವಿಲ್ಲ. ಅದು ನನಗೆ ದುಃಖವನ್ನು ಉಂಟುಮಾಡುತ್ತದೆ. ನಿಮ್ಮ ಬಗ್ಗೆ ನಾನು ತುಂಬಾ ದುಃಖಪಡುತ್ತೇನೆ, ಯೆಹೋವನ ಹಸ್ತವು ನನಗೆ ವಿರುದ್ಧವಾಗಿದೆ” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು