ಕೀರ್ತನೆಗಳು 32:6 - ಪರಿಶುದ್ದ ಬೈಬಲ್6 ದೇವರೇ, ಈ ಕಾರಣದಿಂದಲೇ ನಿನ್ನ ಭಕ್ತರು ನಿನ್ನಲ್ಲಿ ಪ್ರಾರ್ಥಿಸಲಿ. ಆಪತ್ತುಗಳು ಮಹಾಪ್ರವಾಹದಂತೆ ಬಂದರೂ ಅವರನ್ನು ಮುಟ್ಟಲಾರವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಎಂತಲೇ ಭಕ್ತರೆಲ್ಲರು ನಿನ್ನ ಪ್ರಾರ್ಥಿಸಲಿ ಸಕಾಲದಲಿ I ಹುಚ್ಚುಹೊಳೆ ಉಕ್ಕಿಬಂದಾಗ ನೀ ಸಿಕ್ಕಲಿಲ್ಲವೆನ್ನದಿರಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದರಿಂದ ಭಕ್ತರೆಲ್ಲರು ಸಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಮಹಾಪ್ರವಾಹವು ಅಂಥವರನ್ನು ಮುಟ್ಟುವದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದುದರಿಂದ ಭಕ್ತರೆಲ್ಲರು ನೀವು ಸಿಕ್ಕುವ ಕಾಲದಲ್ಲಿ ನಿಮಗೆ ಪ್ರಾರ್ಥನೆ ಮಾಡಲಿ; ನಿಶ್ಚಯವಾಗಿ ನೀರಿನ ಮಹಾಪ್ರವಾಹಗಳು ಅವರ ಸಮೀಪಕ್ಕೆ ಬರುವುದಿಲ್ಲ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.